ಚಿತ್ತಾಪುರ: ಸದಾ ಸಂಪರ್ಕದಲ್ಲಿರಿ, ಯಾವುದೇ ಕಾರಣಕ್ಕೆ ಎದೆಗುಂದಬೇಡಿ ನಿಮ್ಮೊಂದಿಗೆ ನಾನಿದ್ದೇನೆ ಗ್ರಾಮಸ್ಥರಿಗೆ ಶಾಸಕರ ಅಭಯ ಅವಶ್ಯಕ ಕ್ರಮಗಳ ಜಾರಿಗೆ ಸೂಕ್ತ ಸೂಚನೆ ಭೀಮಾ ನದಿಯ ಹೊರಹರಿವಿನ ಮಾಹಿತಿ ಪಡೆದ್ದು, ಅಗತ್ಯಕ್ಕೆ ಅನುಗುಣವಾಗಿ ಈಜು ತಜ್ಞರ, ಮುಳುಗು ತಜ್ಞರ, ಬೋಟ್ ಹಾಗೂ ಎನ್ ಡಿಆರ್ ಎಫ್ ಸಿಬ್ಬಂದಿಗೆ ನಿಯೋಜನೆಗೆ ಕ್ರಮ ತೆಗೆದುಕೊಳ್ಳವಂತೆ ಅಧಿಕಾರಿಗಳಿಗೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ.
ಭೀಮಾ ನದಿಯಲ್ಲಿ ಹೊರಹರಿವು ಹೆಚ್ಚಿದ್ದರಿಂದ ನದಿ ಪಾತ್ರದ ಹಳ್ಳಿಗಳಿಗೆ ನೆರೆ ಭೀತಿ ಉಂಟಾಗಿದ್ದು, ಕೃಷಿ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾಳಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರಾದ ಮಾನ್ಯ ಶ್ರೀ ಪ್ರಿಯಾಂಕ್ ಖರ್ಗೆ ಅವರು ಚಿತ್ತಾಪುರ ಮತಕ್ಷೇತ್ರದ ಕಡಬೂರು ಗ್ರಾಮ ಹಾಗೂ ಸನ್ನತಿ ಬ್ರಿಜ್ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಈ ಸಂದರ್ಭದಲ್ಲಿ ಅವರು ಕಡಬೂರು ಗ್ರಾಮಸ್ಥರೊಂದಿಗೆ ಮಾತಾನಾಡಿ, ಎದೆಗುಂದದಂತೆ ಧೈರ್ಯ ತುಂಬಿ, ಯಾವುದೇ ಸಂದರ್ಭದಲ್ಲಿ ತಾವು ಸಹಾಯಕ್ಕೆ ಸಿದ್ದವಿರುವುದಾಗಿ ಅಭಯಹಸ್ತ ನೀಡಿದರು. ನಂತರ ಸನ್ನತಿ ಬ್ರಿಜ್ ಪ್ರದೇಶಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ನದಿಯ ನೀರಿನ ಹೊರ ಹರಿವಿನ ತೀವ್ರತೆ ಹಾಗೂ ಪ್ರಸ್ತುತ ಪರಿಸ್ಥಿತಿಯ ಕುರಿತು ಚರ್ಚಿಸಿದರು.
ನದಿ ಪಾತ್ರದ ಗ್ರಾಮಗಳಲ್ಲಿ ಜನರಿಗೆ ಯಾವುದೇ ತೊಂದರೆಯಾಗದಂತೆ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮದ ಬಗ್ಗೆ ಸೂಕ್ತ ಸಲಹೆ ಸೂಚನೆ ನೀಡಿದರು. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ದೂರುಗಳಿಗೆ ತಕ್ಷಣವೇ ಸ್ಪಂದಿಸಿ ನೆರೆಹಾವಳಿಯಿಂದಾಗಬಹುದಾದ ಅನಾಹುತಗಳನ್ನು ತಪ್ಪಿಸಬೇಕು ಅಗತ್ಯ ಬಿದ್ದರೆ, ಈಜು ತಜ್ಞರನ್ನು, ಈಜು ತಜ್ಞರನ್ನು, ಬೋಟ್ ಗಳನ್ನು ಹಾಗೂ ಎನ್‌ಡಿಆರ್ ಎಫ್ ಸಿಬ್ಬಂದಿಗಳನ್ನು ನದಿಪಾತ್ರದ ಗ್ರಾಮಗಳ ಅಯ್ದ ಜಾಗದಲ್ಲಿ ನಿಯೋಜಿಸಲು ಬೇಕಾಗುವ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.
ಈ ಸಂದರ್ಭಗಳಲ್ಲಿ ಜಿಲ್ಲಾ ಪಂಚಾಯತ ವಿರೋಧಪಕ್ಷದ ನಾಯಕ ಶಿವಾನಂದ ಪಾಟೀಲ್ ಸೇರಿದಂತೆ ಮತ್ತಿತರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…