ಕಲಬುರಗಿ: ಮತದಾನ ಒಂದು ಮಹತ್ವದ ಕಾರ್ಯವಾಗಿದ್ದು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಲು ಮತದಾನವೇ ಬುನಾದಿಯಾಗಿದೆ ಎಂದು ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಅವರು ಅಭಿಮತ ವ್ಯಕ್ತಪಡಿಸಿದರು.
ುಧವಾರ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಭಾರತಕ್ಕೆ ಮತದಾನದ ಅವಶ್ಯಕತೆ ಬಹಳಷ್ಟಿದೆ. ಆದರಿಂದ ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಬೇಕು. ಹೀಗಾಗಿ ಯುವ ಮತದಾರರು ಭವಿಷ್ಯದ ಸದೃಢ ಭಾರತದ ನಿರ್ಮಾಣಕ್ಕಾಗಿ ಕಡ್ಡಾಯ ಮತದಾನ ಮಾಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಬೇರೆ ದೇಶಗಳಲ್ಲೂ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ. ಆದರೆ, ಅಲ್ಲಿ ಚುನಾವಣೆ ಪ್ರಕ್ರಿಯೆ ವ್ಯವಸ್ಥೆವಾಗಿ ನಡೆಯುವುದಿಲ್ಲ. ನಮ್ಮ ದೇಶದಲ್ಲಿ ಚುನಾವಣಾ ಆಯೋಗವು ಎಲ್ಲ ರಿತಿಯಲ್ಲೂ ಮತದಾನ ಪ್ರಕ್ರಿಯೆ ಕೈಗೊಳ್ಳುತ್ತಿದೆ. ನಮಗೆ ನಮ್ಮ ದೇಶದ ಮತದಾನ ಪ್ರಕ್ರಿಯೆ ಕುರಿತು ಹೆಮ್ಮೆಯಾಗಬೇಕು. ಭಾರತದ ಚುನಾವಣೆ ವ್ಯವಸ್ಥೆ ವಿಶ್ವದ ಬೇರೆ ದೇಶಗಳಿಗೂ ಇಂದು ಮಾದರಿಯಾಗಿದೆ ಎಂದರು.
ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್ ಮಾತನಾಡಿ, ಮತದಾನ ಕೇವಲ 60 ಪ್ರತಿಶತ 65 ಪ್ರತಿಶತ ಜನರು ಮತದಾನ ಮಾಡುತ್ತಿದ್ದಾರೆ. ಜನರಿಗೆ ಅರಿವು ಮೂಡಿಸುವ ಸಲುವಾಗಿ ಮತದಾನ ದಿನಾಚರಣೆಯನ್ನು ನಾವು ಆಚರಣೆ ಮಾಡುತ್ತಿವೆ ಎಂದರು.
ಮತದಾನ ಮಾಡಲು ನಿರಾಸಕ್ತಿ ತೋರುತ್ತಿರುವುದು ಅದು ನಮ್ಮ ದೇಶದ ಅಭಿವೃದ್ಧಿ ಮೇಲೆ ಪರಿಣಾಮ ಬಿರುತ್ತದೆ. ಮತದಾನ ಮಾಡದೇ ಇದ್ದರೆ, ನಾವು ಅಭಿವೃದ್ಧಿಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಆದರಿಂದ ಎಲ್ಲರೂ ಕಡ್ಡಾಯ ಮತದಾನ ಮಾಡಿ ಎಂದು ಹೇಳಿದರು.
ಜಿಲ್ಲೆಯಲ್ಲಿ ನಡೆದ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಒಟ್ಟು 18-19 ವರ್ಷದ 34 ಸಾವಿರ ಯುವ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. ಹೊಸದಾಗಿ ನೋಂದಾಯಿತ ಯುವ ಮತದಾರರಿಗೆ ಹಾಗೂ ವಿಕಲಚೇತನ ಮತದಾರರಿಗೆ ಸಂಕೇತಿಕವಾಗಿ ಮತದಾನದ ಗುರುತಿನ ಚೀಟಿ ನೀಡಲಾಯಿತು. ಬೂತ್ ಲೇವಲ್ ಆಫೀಸರ್ (ಬಿ.ಎಲ್.ಓ.) ಗಳಿಗೆ ಪ್ರಮಾಣ ಪತ್ರ ನೀಡಿದರು..
ಇದಕ್ಕೂ ಮುನ್ನ ರಾಷ್ಟ್ರೀಯ ಮತದಾರರ ದಿನದ ಪ್ರಯುಕ್ತ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಅವರು ಮತದಾರರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯದರ್ಶಿಗಳಾದ ಡಾ. ಗಿರೀಶ ದಿ ಬದೋಲೆ ಸ್ವಾಗತಿಸಿ ಮಾತನಾಡಿ, ಮತದಾನದ ಮಾಹಿತಿ ಹಾಗೂ ಸ್ವೀಪ ಕಾರ್ಯಕ್ರಮದ ಮಾಹಿತಿ ನೀಡಿದರು.
ಮತದಾನ ನಮ್ಮ ಹಕ್ಕು, ನಿರ್ಭತವಾಗಿ ಚುನಾವಣೆಯಲ್ಲಿ ಮತ ಚಲಾವಣೆ ಮಾಡೋಣ. ಬಲಿಷ್ಠ ಭಾರತದ ನಿರ್ಮಾಣಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿ ಮತದಾನದ ಹಕ್ಕನ್ನ ಚಲಾಯಿಸೋಣ ಎಂದು ಜಿಲ್ಲಾ ಚುನಾವಣಾ ರಾಯಭಾರಿ ಐಕನ್ ಇಂದುಮತಿ ಸಾಲಿಮಠ ತಿಳಿಸಿದರು.
ವೇದಿಕೆ ಮೇಲೆ ಕಲಬುರಗಿ ಉಪವಿಭಾಗದ ಸಹಾಯಕ ಆಯುಕ್ತ ಮಮತಾ ಕುಮಾರಿ, ಸೇರಿದಂತೆ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್. ರಾಠೋಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಂಕ್ರಪ್ಪ ಗೌಡ, ತಹಶೀಲ್ದಾರರು, ಕಂದಾಯ ಇಲಾಖೆಯ ಸಿಬ್ಬಂದಿಗಳು, ಸಾರ್ವಜನಿಕರು ಶಾಲಾ ಕಾಲೇಜಿನ ಮಕ್ಕಳಿಗೆ ಅಂದ ಶಾಲೆಯ ಮಕ್ಕಳು ಹಾಜರಿದ್ದರು.