ಬಿಸಿ ಬಿಸಿ ಸುದ್ದಿ

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಗೆಲುವು ಖಚಿತ : ಅಶ್ವತನಾರಾಯಣ

ಶಹಾಬಾದ : ಹಿಂದೆಂದೂ ಕಾಣದ ಅಭಿವೃದ್ಧಿಯನ್ನು ಬಿಜೆಪಿ ಸರಕಾರ ಮಾಡಿ ತೋರಿಸಿದ್ದರಿಂದ ಈ ಬಾರಿ ರಾಜ್ಯದಲ್ಲಿ ಮತ್ತೊಮ್ಮೆ ನಮ್ಮ ಗೆಲುವು ಖಚಿತ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎಚ್. ಅಶ್ವತನಾರಾಯಣ ಹೇಳಿದರು.

ಅವರು ಶುಕ್ರವಾರ ಹಳೆಶಹಾಬಾದನ ವೀರಭದ್ರೇಶ್ವರ ದೇವಸ್ಥಾನದಲ್ಲಿ ಬಿಜೆಪಿಯಿಂದ ಆಯೋಜಿಸಲಾದ ವಿಜಯ ಸಂಕಲ್ಪ ಅಭಿಯಾನ ನಿಮಿತ್ತ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯ ಹಾಗೂ ಕೇಂದ್ರ ಸರಕಾರ ಜನಪರವಾದ ಆಡಳಿತ ನೀಡುತ್ತ ಬಂದಿದೆ.ಹಿಂದೆಂದೂ ಕಾಣದ ಅಭಿವೃದ್ಧಿಯನ್ನು ಬಿಜೆಪಿ ಸರಕಾರ ಮಾಡಿ ತೋರಿಸಿದೆ.ಕೇಂದ್ರದ ಮೋದಿ ಸರಕಾರ ಸಾಧನೆಗಳು ಹಾಗೂ ರಾಜ್ಯ ಸರಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಕಾರ್ಯಕರ್ತರಿಂದ ಆಗಬೇಕು.ಬಿಜೆಪಿ ಜನಸಾಮನ್ಯರಿಗೆ ಹತ್ತಿರವಾದ ಪಕ್ಷ.ಆದರೆ ಕಾಂಗ್ರೆಸ್ ಸುಳ್ಳಿನ ಪಕ್ಷ.ಈ ಹಿಂದಿನ ಸಿದ್ಧರಾಮಯ್ಯನವರ ಸರಕಾರ ಅನ್ನಭಾಗ್ಯ,ಶಾದಿಭಾಗ್ಯ ನೀಡಿದ್ದು ಬಿಟ್ಟರೇ ಮತ್ತ್ಯಾವ ಭಾಗ್ಯ ನೀಡದೇ ಜನರಿಗೆ ವಂಚಿಸಿದೆ.ಆದ್ದರಿಂದ ಜನರು ಬಿಜೆಪಿಗೆ ಒಲವು ತೋರುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರಗಳು ಕಿಸಾನ್ ಸಮ್ಮಾನ್, ಫಸಲ್ ಬಿಮಾ, ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ, ಕೈಗಾರಿಕಾಭಿವೃದ್ಧಿ, ಸಾಮಾಜಿಕ ಭದ್ರತೆ, ಸಬಲೀಕರಣ ಮುಂತಾದ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿವೆ, ಬಿಜೆಪಿ ಎಲ್ಲರನ್ನೂ ಸಮಾನವಾಗಿ ಕಾಣುತ್ತದೆಯೇ ವಿನಾ ಕಾಂಗ್ರೆಸ್ಸಿನಂತೆ ಜನರನ್ನು ವಿಭಜಿಸುವುದಿಲ್ಲ .ಈ ಬಾರಿ ಬಿಜೆಪಿಯ ಬಹುಮತ ಸರಕಾರ ಬರುವುದು ಖಚಿತ ಎಂದರು.

ಶಾಸಕ ಬಸವರಾಜ ಮತ್ತಿಮಡು ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರದ ಸಾಧನೆಗಳನ್ನು ಗಮನಿಸಿ ಮತ್ತೊಮ್ಮೆ ರಾಜ್ಯದಲ್ಲಿ ಮತದಾರರು ಬಿಜೆಪಿ ಸರಕಾರವನ್ನು ಬೆಂಬಲಿಸಲಿದ್ದಾರೆ.ಕಾರ್ಯಕರ್ತರ ಉಲ್ಲಾಸ ನೋಡಿದರೇ ಬಿಜೆಪಿ ಗೆಲುವು ನಿಶ್ಚಿತ. ಈಗಾಗಲೇ ಕೇಂದ್ರದ ಮೋದಿ ಸರಕಾರ ಹಾಗೂ ರಾಜ್ಯ ಸರಕಾರ ಅನೇಕ ಯೋಜನೆಗಳನ್ನು ನೀಡಿದೆ.ಅದನ್ನು ಮತದಾರರಿಗೆ ತಿಳಿಸುವ ಕೆಲಸವಾಗಬೇಕು. ಸಮಾಜದ ಸಮಸ್ತರನ್ನು ಪಕ್ಷದ ಜೊತೆ ಸೇರ್ಪಡೆ ಮಾಡಿ, ದೇಶ ಕಟ್ಟುವ ಕಾರ್ಯದಲ್ಲಿ ಎಲ್ಲರನ್ನೂ ಜೊತೆಗೂಡಿಸಲಾಗುವುದು. ಬಿಜೆಪಿ ನೇತೃತ್ವದ ಸರಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿಮಾತನಾಡಿ, ಪ್ರತಿ ವಾರ್ಡ ಮತ್ತು ಪ್ರತಿ ಬೂತ್‍ಗೂ ತಲುಪುವ ಸಂಕಲ್ಪ ಹೊಂದಿದ್ದೆವೆ.ಅದಕ್ಕಾಗಿ ಪ್ರತಿ ವಾರ್ಡ ಹಾಗೂ ಬೂತ್ ಸಮಿತಿ ನಿರ್ಮಾಣ, ಬೂತ್ ಪೇಜ್ ನಿರ್ಮಾಣ ಮಾಡುವಂತಹ ಕೆಲಸ ಆಗುತ್ತಿದೆ. ಎಲ್ಲಾ ಬೂತ್ ಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆಯಬೇಕು. ಪ್ರತಿಯೊಂದು ಬೂತ್, ವಾರ್ಡ್ ಮಟ್ಟದಲ್ಲಿ ಈ ರೀತಿಯ ಕೆಲಸ ಆಗಬೇಕು. ಇದರಿಂದ ಪಕ್ಷಕ್ಕೆ ಬಲ ಬರುತ್ತದೆ, ಮುಂಬರುವ ಚುನಾವಣೆಯಲ್ಲಿ ಸುಸೂತ್ರವಾಗಿ ಚುನಾವಣೆಯನ್ನು ನಾವು ಗೆಲ್ಲಬಹುದು ಎಂದು ಹೇಳಿದರು.

ಚಿಂಚೋಳಿ ಶಾಸಕ ಡಾ. ಅವಿನಾಶ ಜಾಧವ, ಅಮರನಾಥ ಪಾಟೀಲ, ಈಶ್ವರಸಿಂಗ ಠಾಕೂರ ಮಾತನಾಡಿದರು, ಬಿಜೆಪಿ ಅಧ್ಯಕ್ಷಅಣವೀರ ಇಂಗಿನಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಬಗಲಿ,ಶಶಿಕಲಾ ಟೆಂಗಳಿ,ರಾಜಕುಮಾರ ಕೋಟೆ,ರಾಘವೇಂದ್ರ ಕುಲಕರ್ಣಿ, ಮಹಿಳಾ ಅಧ್ಯಕ್ಷೆ ಭಾಗೀರಥಿ ಗುನ್ನಾಪೂರ, ಅವ್ವಣ್ಣಾ ಮ್ಯಾಕೇರಿ, ಕನಕಪ್ಪ ದಂಡಗುಳಕರ, ರಾಘವೇಂದ್ರ ಕುಲಕರ್ಣಿ,ಸಿದ್ರಾಮ ಕುಸಾಳೆ, ವೇದಿಕೆ ಮೇಲೆ ಇದ್ದರು. ಬಿಜೆಪಿ ಅಧ್ಯಕ್ಷಅಣವೀರ ಇಂಗಿನಶೆಟ್ಟಿ ಸ್ವಾಗತಿಸಿದರು, ಸದಾನಂದ ಕುಂಬಾರ ನಿರೂಪಿಸಿದರು, ಸಂತೋಷ ಪಾಟೀಲ ವಂದಿಸಿದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago