ಸುರಪುರ:ನಗರದ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ತಾಲೂಕು ನ್ಯಾಯವಾದಿಗಳ ಸಂಘದ ವತಿಯಿಂದ ನ್ಯಾಯಾಲಯ ಆವರಣ ಸ್ವಚ್ಛಗೊಳಿಸುವ ಮೂಲಕ ರಾಷ್ಟ್ರೀಯ ಸ್ವಚ್ಛತಾ ದಿನವನ್ನು ಆಚರಿಸಲಾಯಿತು.
ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಕಾರ್ಯಕ್ರಮಕ್ಕೆ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಈಶ್ವರಪ್ಪ ಕಮತಗಿಯವರು ಚಾಲನೆ ನೀಡಿ ಮಾತನಾಡಿ, ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆ ಅಂಗವಾಗಿ ಇಂದು ಭಾರತ ಸರಕಾರವು ಕೂಡ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸುತ್ತದೆ,ಅದರಂತೆ ನಮ್ಮ ಸ್ಟೇಟ್ ಲೀಗಲ್ ಸೆಲ್‍ಕೂಡ ಆದೇಶವನ್ನು ಹೊರಡಿಸಿದ್ದರಿಂದ ಇಂದು ಎಲ್ಲರು ಸೇರಿ ರಾಷ್ಟ್ರೀಯ ಸ್ವಚ್ಛತಾ ದಿನವನ್ನು ಆಚರಿಸುತ್ತಿದ್ದೇವೆ,ನಾವೆಲ್ಲರು ಪರಿಸರವನ್ನು ಸ್ವಚ್ಛವಾಗಿಡುವುದಕ್ಕೆ ಸದಕಾಲ ಸೇವೆ ಮಾಡಬೇಕು,ಇದರಿಂದ ಯಾವುದೇ ರೋಗ ರುಜಿನಗಳು ಬಾರದಂತೆ ತಡೆಯಬಹುದು ಮತ್ತು ಉತ್ತಮವಾದ ವಾತಾವರಣವನ್ನು ಕಾಪಾಡಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಮಾರುತಿ.ಕೆ ಹಾಗೂ ಬಸವರಾಜ ಅವರು ಭಾಗವಹಿಸಿದ್ದರು.ಅಲ್ಲದೆ ನ್ಯಾಯವಾದಿಗಳ ಸಂಘದ ತಾಲೂಕು ಅಧ್ಯಕ್ಷ ನಂದಣ್ಣ ಜೆ ಬಾಕ್ಲಿ ಸೇರಿದಂತೆ ಎಲ್ಲಾ ನ್ಯಾಯವಾದಿಗಳು ಹಾಗೂ ನ್ಯಾಯಾಂಗ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…