ಕಲಬುರಗಿ; ನಾನು ಸಮಾಜಕಲ್ಯಾಣ ಸಚಿವನಾಗಿದ್ದಾಗ ಅಂಬಿಗರ ಚೌಡಯ್ಯನವರ ಪವಿತ್ರ ಸ್ಥಳ ಚೌಡದಾನಪುರದ ಅಭಿವೃದ್ದಿಗಾಗಿ ರೂ 5 ಕೋಟಿ ಅನುದಾನ ಬಿಡುಗಡೆ ಮಾಡಿದ್ದೇನೆ. ಇದು ಸಮಾಜದ ಕಡೆಗೆ ನನಗಿರುವ ಬದ್ಧತೆ ಎಂದು ಶಾಸಕರಾದ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿ ತಾಲೂಕಿನ ಫರಹತಾಬಾದ್ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಕೋಲಿ ಸಮಾಜ ಒಗ್ಗಟ್ಟಾಗಿದ್ದರೆ ನಿಮಗೆ ಹೆಚ್ಚಿನ ಸೌಲಭ್ಯ ಸಿಗಲಿದೆ ಎಂದು ಅಭಿಪ್ರಾಯಪಟ್ಟ ಖರ್ಗೆ ಅವರು ಎಸ್ ಸಿ ಎಸ್ ಟಿ ಕೋಲಿ ಕಬ್ಬಲಿಗ ಹಾಗೂ ಹಿಂದುಳಿದ ವರ್ಗದವರು ಒಗ್ಗಟ್ಟಾಗಿ ಇದ್ದು ನಮಗೆ ಆಶೀರ್ವಾದ ಮಾಡಿದರೆ ನಿಮ್ಮ ಆರ್ಥಿಕ ಹಾಗೂ ಸಾಮಾಜಿಕ ಬಲವರ್ಧನೆಗೆ ಕ್ರಮ ಕೈಗೊಳ್ಳಲಿದ್ದೇವೆ ಎಂದು ಭರವಸೆ ನೀಡಿ, ನೀವು ಭಾವನಾತ್ಮಕ ವಿಚಾರಗಳಿಗೆ ಮರುಳಾಗಬೇಡಿ ಎಂದು ಮನವಿ ಮಾಡಿದರು.
ನಿಜಶರಣರನ್ನು ನೀವು ಓದಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಭೌದ್ಧಿಕವಾಗಿ ಹಾಗೂ ಶೈಕ್ಷಣಿಕವಾಗಿ ನೀವು ಎತ್ತರಕ್ಕೆ ಹೋದಾಗ ಮಾತ್ರ ನಿಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಬಹುದು ಎಂದರ ಅವರು ರಾಜ್ಯ ಸರ್ಕಾರ ಕೋಲಿ ಕಬ್ಬಲಿಗ ಸಮಾಜವನ್ನು ಎಸ್ ಟಿಗೆ ಸೇರಿಸಲು ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಹೇಳಿದೆ. ಆದರೆ ಆ ಬಗ್ಗೆ ಯಾವುದೇ ರೀತಿಯ ಖಚಿತತೆ ಇಲ್ಲ ಎಂದರು.
ವೇದಿಕೆಯ ಮೇಲೆ ಶಾಸಕರಾದ ಎಂ.ವೈ.ಪಾಟೀಲ ಹಾಗೂ ಮತ್ತಿತರಿದ್ದರು.
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…
ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ.…
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…