ಬಿಸಿ ಬಿಸಿ ಸುದ್ದಿ

ವಿಜಯಪುರದಲ್ಲಿ ಫೆ. 4 ಮತ್ತು 5ರಂದು 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಫೆ.4 ರಿಂದ 5 ರ ವರೆಗೆ ವಿಜಯಪುರದ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜರುಗಲಿದೆ ಎಂದು ಪತ್ರಕರ್ತರ ಸಂಘದ ಜಿಲ್ಲಾದ್ಯಕ್ಷ ಬಾಬುರಾವ ಯಡ್ರಾಮಿ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಾ.ಶಿವರಂಜನ್ ಸತ್ಯಂಪೇಟೆ ತಿಳಿಸಿದರು.

ಫೆ.4ರಂದು ಬೆಳಗ್ಗೆ 10.30ಕ್ಕೆ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಕರಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಹಾಲಪ್ಪ ಆರ್ಚಾ, ಸಚಿವರಾದ ನಾರಾಯಣ ಗೌಡ, ಶಂಕರ ಪಾಟೀಲ್ ಮುನೇನಕೊಪ್ಪ, ಕೆ.ಗೋಪಾಲಯ್ಯ, ಸಂಸದ ರಮೇಶ್ ಜಿಗಜಿಣಗಿ ಅವರು ಮುಖ್ಯ ಅತಿಥಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ವಿಜಯಪುರ ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಸ್ವಾಗತಿಸಲಿದ್ದು, ಸಂಪಾದಕರಾದ ಕೆ.ಎನ್ ಚನ್ನೇಗೌಡ ಮೊದಲ ಮಾತು ಮಾತನಾಡಲಿದ್ದಾರೆ. ರವೀಂದ್ರ ಭಟ್ ಪ್ರಾಸ್ತಾವಿಕ ಮಾತನಾಡಲಿದ್ದಾರೆ. ಅನೇಕರು ಪ್ರಧಾನ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಮಧ್ಯಾಹ್ನ 2ಕ್ಕೆ ‘ನವ ಮಾಧ್ಯಮಗಳು ಮತ್ತು ಪತ್ರಕರ್ತರು’ ಗೋಷ್ಠಿ ನಡೆಯಲಿದ್ದು, ಹಿರಿಯ ಪತ್ರಕರ್ತ ಅನಂತ ಚಿನಿವಾರ ಉದ್ಘಾಟನೆ ಮಾಡಲಿದ್ದಾರೆ. ಸಮೂಹ ಸಂಪಾದಕ ರವಿ ಹೆಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 4ಕ್ಕೆ ‘ಗಡಿ ಭಾಗದಲ್ಲಿ ಮಾಧ್ಯಮಗಳು’ ಎಂಬ ವಿಷಯದ ಕುರಿತು ಗೋಷ್ಠಿ ನಡೆಯಲಿದ್ದು, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಉದ್ಘಾಟಿಸಲಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 5ಕ್ಕೆ ಪ್ರತಿನಿಧಿಗಳ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

ಫೆ.5ಕ್ಕೆ ಬೆಳಗ್ಗೆ 10ಕ್ಕೆ ‘ಸುದ್ದಿಮನೆ ಮತ್ತು ಪತ್ರಿಕಾ ವಿತರಕರು’ ಎಂಬ ಗೋಷ್ಠಿಯನ್ನು ಐಎ್ಡಬ್ಲ್ಯುಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಉದ್ಘಾಟಿಸಲಿದ್ದು, ಐಎ್ಡಬ್ಲ್ಯುಜೆ(ಏಷ್ಯಾ) ಸಂಚಾಲಕ ಎಚ್.ಮದನಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 3ಕ್ಕೆ ‘ಸುದ್ದಿಮನೆ ಮತ್ತು ಮಹಿಳೆಯರು’ ಎಂಬ ವಿಷಯದ ಕುರಿತು ಗೋಷ್ಠಿಯನ್ನು ಸಂಪಾದಕಿ ಶಾಂತಲಾ ಧರ್ಮರಾಜ್ ಅವರು ಉದ್ಘಾಟಕರಾಗಿ ಪಾಲ್ಗೊಳ್ಳಲಿದ್ದಾರೆ. ಮಹಿಳಾ ವಿಶ್ವವಿದ್ಯಾಲಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಓಂಕಾರ ಕಾಕಡೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರಧಾನ 5ಕ್ಕೆ: ಫೆ.5ರಂದು ಮಧ್ಯಾಹ್ನ 1.45ಕ್ಕೆ ಸಮಾರೋಪ ಸಮಾರಂಭ ಹಾಗೂ ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರಧಾನ ನಡೆಯಲಿದೆ. ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದು, ಮಾಜಿ ಸಿಎಂ ಸಿದ್ರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಚಿವ ಜೆ.ಸಿ.ಮಾಧುಸ್ವಾಮಿ ಸಮಾರೋಪ ಭಾಷಣ ಮಾಡಲಿದ್ದಾರೆ. ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಶಾಸಕ ಶಿವಾನಂದ ಪಾಟೀಲ್ ಕೆಎಂಎ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಸಚಿವರಾದ ಆರ್.ಅಶೋಕ,ಶಶಿಕಲಾ ಜೊಲ್ಲೆ, ಡಾ.ಕೆ.ಸುಧಾಕರ್ ಅವರು ಘನ ಉಪಸ್ಥಿತರಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ, ಖಜಾಂಚಿ ಅಶೋಕ ಕಪನೂರ, ಉಪಾಧ್ಯಕ್ಷರಾದ ರಾಮ ಕೃಷ್ಣ ಬಡಶೇಷಿ, ಸುರೇಶ ಬಡಿಗೇರ, ದೇವೇಂದ್ರಪ್ಪ ಅವಂಟಿ, ಕಾರ್ಯದರ್ಶಿ ಅರುಣ ಕದಮ, ಮಲ್ಲಿಕಾರ್ಜುನ ಜೋಗ ಇತರರು ಇದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

9 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

9 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

11 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

11 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

11 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

12 hours ago