ರಾಯಚೂರು: ಜಿಲ್ಲೆಗೆ ನೆರೆ ಪರಿಹಾರ ನೀಡದಿರುವ ರಾಜ್ಯ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ SFI ಮತ್ತು DYFI ಕಾರ್ಯಕರ್ತರು, ಕೂಡಲೇ ಕೇಂದ್ರ ಸರಕಾರ ಮಧ್ಯಪ್ರವೇಶಿಸಿ ನೆರೆ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಬೇಕೆಂದು ಪ್ರತಿಭಟನೆ ನಡೆ SFI ಜಿಲ್ಲಾಧ್ಯಕ್ಷ ಶಿವಕುಮಾರ ಮ್ಯಾಗಳಮನಿ ಒತ್ತಾಯಿಸಿದರು.
ಇಂದು ಜಿಲ್ಲೆಯ ಸಿರವಾರ ತಾಲ್ಲೂಕಿನ ಕವಿತಾಳ ಪಟ್ಟಣದ ಅನ್ವರಿ ಕ್ರಾಸ್ ನಲ್ಲಿ (ಕನಕ ದಾಸ ವೃತ್ತದಲ್ಲಿ) ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಅವರು ಮಳೆಯಿಂದಾಗಿ ಮತ್ತು ಕೃಷ್ಣಾ ನದಿಯ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾಗಿ ಬದುಕನ್ನು ಕಳೆದುಕೊಂಡ ಜನತೆಗೆ ಸರ್ಕಾರ ಇತ್ತಿಚೆಗೆ ಸಂತ್ರಸ್ತರ ಪರಿಹಾರ ನಿಧಿಯನ್ನು ಬಿಡುಗಡೆ ಮಾಡಿದೆ. ಆದರೆ ಇದರಲ್ಲಿ ರಾಯಚೂರು ಜಿಲ್ಲೆಯನ್ನು ಕಡೆಗಣಿಸಿದ್ದು ಇದು ಮಲತಾಯಿ ಧೋರಣೆ ನೀತಿಯಾಗಿದೆ ಇದನ್ನು ಖಂಡಿಸಿ ಹಾಗೂ ಕೂಡಲೇ ರಾಜ್ಯ ಮತ್ತು ಕೇಂದ್ರ ಸರ್ಕಾರ ಜಿಲ್ಲೆ ಸೇರಿದಂತೆ ರಾಜ್ಯಕ್ಕೆ ಹೆಚ್ಚಿನ ಪರಿಹಾರವನ್ನು ಬಿಡುಗಡೆ ಮಾಡಬೇಕೆಂದು ಅವರು ಆಗ್ರಹಿಸಿದರು.
ಈ ಸಂಧರ್ಭದಲ್ಲಿ SFI ಜಿಲ್ಲಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ, ಜಿಲ್ಲಾ ಉಪಾಧ್ಯಕ್ಷರಾದ ಲಿಂಗರಾಜ ಕಂದಗಲ್, DYFI ಮುಖಂಡರಾದ M.D ಶಫೀ, ಸುಲ್ತಾನ್ ಬಾಬ, ಮೌನೇಶ ಬುಳ್ಳಾಪುರ, ಅನ್ನು , ಮೌನೇಶ, ಮರಿಸ್ವಾಮಿ, ಸದ್ದಾಂ ಹುಸೇನ್, ಮೈಬೂಬ್, ಅಬೂಬಕರ್ ಸೇರಿದಂತೆ ಇತರರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…