ಬಡವರಿಗೆ ಬಲ ತುಂಬುವ ಬಜೆಟ್

0
15

ಕಲಬುರಗಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯೂ ದೂರದೃಷ್ಟಿಯಿಂದ ಕೂಡಿದ ಅತ್ಯುತ್ತಮ ಬಜೆಟ್ ಮಂಡಿಸಿದ್ದು, ಬಡವರು, ಮಧ್ಯಮ ವರ್ಗದ ಜನರಿಗೆ ಬಲ ತುಂಬುವ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ರಾಘವೇಂದ್ರ ಕುಲಕರ್ಣಿ ಕೋಗನೂರ ವಕೀಲುರು ಹೇಳಿದ್ದಾರೆ.

ಬಜೆಟ್‌ನಲ್ಲಿ ಏಳು ವಿಶೇಷಗಳಿಗೆ ಆದ್ಯತೆ ನೀಡಲಾಗಿದೆ. ಸಮಾಜದ ಕಟ್ಟಕಡೆಯ ಮನುಷ್ಯನನ್ನು ತಲುಪುವ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಯುವ ಸಮುದಾಯ, ಮೂಲಸೌಕರ್ಯ ಅಭಿವೃದ್ಧಿಗೆ ಕಾಳಜಿ ವಹಿಸಲಾಗಿದೆ. ಆದಾಯ ತೆರಿಗೆ ವಿನಾಯ್ತಿ ಮಿತಿ ಹೆಚ್ಚಳ, ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ನೀಡಿಕೆ ಉತ್ತಮ ಕ್ರಮಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Contact Your\'s Advertisement; 9902492681

ಮೂಲಸೌಕರ್ಯ ಕ್ಷೇತ್ರದಲ್ಲಿ 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ. ಕೋವಿಡ್ ನಂತರವೂ ಭಾರತ ತನ್ನ ಆರ್ಥಿಕತೆಯ ವೇಗದಿಂದಾಗಿ ಜಗತ್ತಿನ ಗಮನ ಸೆಳೆದಿದೆ. ದೇಶವನ್ನು ಸದೃಢವಾಗಿ ಒಯ್ಯುವ ದಿಸೆಯಲ್ಲಿ ಈ ಬಜೆಟ್ ನೀಲನಕ್ಷೆಯಂತಿದೆ ಎಂದು ಹೇಳಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here