ಕಲ್ಯಾಣ ಕರ್ನಾಟಕ ಭಾಗಕ್ಕೆ ಮತ್ತೊಮ್ಮೆ ಅನ್ಯಾಯ: ಸಿರಗಾಪೂರ ಆರೋಪ

ಕಲಬುರಗಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಂ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ದೂರದೃಷ್ಟಿಯ ಯೋಜನೆಗಳಿದ್ದರೂ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಕೊಡುಗೆ ನೀಡದೆ ಕೇಂದ್ರ ಸರ್ಕಾರ ಮತ್ತೊಮ್ಮೆ ಅನ್ಯಾಯ ಮಾಡಿದೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ಆರೋಪಿಸಿದ್ದಾರೆ

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವಾರ್ಷಿಕ ಆದಾಯ ಮಿತಿ 5 ರಿಂದ 7 ಲಕ್ಷದವರೆಗೆ ಏರಿಸಿರುವುದು ಸ್ವಾಗತಾರ್ಹ.ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ರೀತಿ ಬಜೇಟ್ ಮಂಡಿಸಲಾಗಿದೆ.ಕಲ್ಯಾಣ ಕರ್ನಾಟಕ ಕೇಂದ್ರೀಯ ವಿಭಾಗ ಆದರೆ ಕಲಬುರಗಿ ಜಿಲ್ಲೆಗೆ ಏಮ್ಸ್,ಹೊಸ ಕೈಗಾರಿಕೆಗಳ ಸ್ಥಾಪನೆ, ರೈಲ್ವೆ ವಿಭಾಗೀಯ ಕಚೇರಿ ಬಗ್ಗೆ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡದಿರುವುದು ಇಲ್ಲಿಯ ಜನರಿಗೆ ಬೇಸರ ತಂದಿದೆ.ಅಲ್ಲದೆ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿಲ್ಲ.ಜಿಲ್ಲೆಯಲ್ಲಿ ತೊಗರಿ ಪಾರ್ಕ್ ಮಾಡಬಹುದು ಎಂಬ ನಿರೀಕ್ಷೆ ಇತ್ತು.ಮತ್ತೋಮ್ಮೆ ಕೇಂದ್ರ ಸರ್ಕಾರ ಸಂಪೂರ್ಣ ಕಡೆಗಣಿಸಿದೆ.ರಾಜ್ಯಕ್ಕೂ ಹೇಳಿಕೊಳ್ಳುವಂಥ ವಿಶೇಷತೆ ಎನು ನೀಡಿಲ್ಲ.ಕೃಷಿ ಮತ್ತು ಹೈನುಗಾರಿಕೆಗೆ ಹೆಚ್ಚಿನ ಉತ್ತೇಜನ ನೀಡಿರುವುದು ಸಮಾಧಾನ ತಂದಿದೆ.

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕಲಬುರಗಿ ಹೊರವಲಯದ ಹೊಸ ರಿಂಗ್ ರೋಡ್ ಕುರಿತು ಬಜೆಟ್ ನಲ್ಲಿ ತಿಳಿಸಿಲ್ಲ.ರೈತರ ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಿಲ್ಲ.ರೈತರಿಗೆ ಹೊಸ ಆರ್ಥಿಕ ನೆರವು ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

1 hour ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

2 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

2 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

2 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

2 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420