ಹಟ್ಟಿ: ಅಂಗನವಾಡಿ ನೌಕರರ ಪ್ರಮುಖ ಬೇಡಿಕೆ ಈಡೇರಿಕೆ: ಸಿಐಟಿಯು ವಿಜಯೋತ್ಸವ

ಹಟ್ಟಿ: ಅಂಗನವಾಡಿ ನೌಕರರಿಗೆ ಗ್ರಾಚ್ಯುಟಿ ಒಳಗೊಂಡು ಪ್ರಮುಖ ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ನೀಡಿದ್ದರಿಂದ ಹಟ್ಟಿಯಲ್ಲಿ ಸಿಐಟಿಯು ಕಾರ್ಯಕರ್ತರು ಹಟ್ಟಿ ಪಟ್ಟಣದ ಹಳೆ ಬಸ್ ಸ್ಟ್ಯಾಂಡ್ ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ, ಘೋಷಣೆ ಹಾಕಿ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾ ಸಹ ಕಾರ್ಯದರ್ಶಿ ಮಹಮದ್ ಹನೀಫ್ ಮಾತನಾಡಿ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ 2023 ಜನವರಿ 23ರಿಂದ ಫೆಬ್ರುವರಿ 1ವರೆಗೆ ಅನಿರ್ಧಿಷ್ಟಾವಧಿ ಮುಷ್ಕರವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದರಿಂದ ಸರ್ಕಾರ್ ಪ್ರಮುಖ ಬೇಡಿಕೆಗಳಾದ ಮಾನ್ಯ ಸುಪ್ರಿಂ ಕೋರ್ಟಿನ ತೀರ್ಪಿನಂತೆ ಗ್ರಾಚ್ಯುಟಿ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದಾರೆ ಎಂದರು.

ಅಂಗನವಾಡಿಗಳನ್ನು ಅನ್ನದ ಜೊತೆಗೆ ಅಕ್ಷರದ ಕೇಂದ್ರವಾಗಿಸಲು, ಅಂಗನವಾಡಿ ಕೇಂದ್ರಗಳಲ್ಲಿ ಶಾಲಾಪೂರ್ವ ಶಿಕ್ಷಣಕ್ಕೆ ನಿರ್ದಿಷ್ಟ ಸಮಯ ಮೀಸಲಿರಿಸಲು, ಶಿಕ್ಷಕಿ ಪದನಾಮ ನೀಡಲು, ಅಂಗನವಾಡಿಗೆ ಬರುವ ಮಕ್ಕಳಿಗೆ ಸಮವಸ್ತ್ರ, ಶೂ ನೀಡಲು ಹಾಗೂ ಅಂಗನವಾಡಿಯಲ್ಲಿ ಓದಿರುವ ಬಗ್ಗೆ ದೃಢೀಕರಣ ಪತ್ರ ನೀಡಲು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸೇವಾ ನಿಯಮಾವಳಿ ರೂಪಿಸಲು, ಮಿನಿ ಅಂಗನವಾಡಿ ಹಾಗೂ ಸಹಾಯಕಿಯರಿಗೆ ಪದೋನ್ನತಿಗೆ ಇರುವ ಆದೇಶ ಮಾರ್ಪಡಿಸಲು, ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು, ಅಂಗನವಾಡಿಗೆ ಸ್ವಂತ ಕಟ್ಟಡ ಕಟ್ಟಲು 30 ಲಕ್ಷ ರೂ ಮೀಸಲಿರಿಸಲು ಹಾಗೂ ಮೂಲಸೌಕರ್ಯ ಬಲವರ್ಧನೆಗೆ, ಅಂಗನವಾಡಿ ಕಾರ್ಯಕರ್ತಯರಿಗೆ ಹೆಚ್ಚುವರಿ ಕೆಲಸದ ಒತ್ತಡ ಕಡಿಮೆ ಮಾಡಲು ಇತ್ಯಾದಿ ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಈ ಹೋರಾಟ ಕಳೆದ ಹತ್ತು ದಿನಗಳಿಂದ ನಡೆಸಲಾಗುತ್ತಿತ್ತು. ಕೊರೆಯುವ ಚಳೆಯಲ್ಲಿಯೇ ಮಹಿಳೆಯರು ನಡೆಸಿದ ಈ ಐತಿಹಾಸಿಕ ಹೋರಾಟ ನಾಡಿನ ಎಲ್ಲರ ಗಮನ ಸೆಳೆದು ಸರ್ಕಾರ ಉತ್ತಮವಾಗಿ ಸ್ಪಂದಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಮಧ್ಯೆ ನಮ್ಮ ಹೋರಾಟಕ್ಕೆ ಸ್ಪಂದಿಸಿ ನಾಲೈದು ಬಾರಿ ಸರ್ಕಾರದೊಂದಿಗೆ ಮಾತುಕತೆಗಳು ನಡೆದವು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾನ್ಯ ಮಂತ್ರಿಗಳು ಹೋರಾಟದ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿದರು. ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ನಿರ್ದೇಶಕರು, ಜಂಟಿ ನಿರ್ದೇಶಕರು, ಉಪನಿರ್ದೇಶಕರು ಹಾಗೂ ಇತರ ಹಿರಿಯ ಅಧಿಕಾರಿಗಳ ಜೊತೆಗೆ ನಿರ್ಧಿಷ್ಟ ವಿಷಯಗಳ ಕುರಿತು ಚರ್ಚೆಗಳು ನಡೆದವು. ಆದರೆ ಬೇಡಿಕೆ ಈಡೇರಿಕೆಗೆ ಸ್ಪಷ್ಟತೆ ಬಾರದೇ ಇರುವುದರಿಂದ ಹೋರಾಟವನ್ನು ಮುಂದುವರಿಸುವುದಾಗಿ ಘೋಷಿಸಲಾಗಿತ್ತು. ಮೂಲಸೌಕರ್ಯಗಳ ಕೊರತೆಯ ಮಧ್ಯೆಯೂ ಹೋರಾಟ ತೀವ್ರತೆ ಪಡೆದಿತ್ತು ಎಂದರು.

ಹಾಗಾಗಿ ಸಿಐಟಿಯುನ ಹೋರಾಟಕ್ಕೆ ಮಣಿದ ಇಲಾಖೆಯು 1) ಶಾಲಾಪೂರ್ವ ಶಿಕ್ಷಣಕ್ಕಾಗಿ ಬೆಳಿಗ್ಗೆ 10 ರಿಂದ 1 ಗಂಟೆಯ ವರೆಗೆ ನಿರ್ದಿಷ್ಟ ಸಮಯ ಮೀಸಲಿರಿಸಿದ ಸ್ಪಷ್ಟ ಆದೇಶವನ್ನು ಲಿಖಿತವಾಗಿ ನೀಡಿದೆ. 2) ಮಿನಿ ಅಂಗನವಾಡಿ
ಹಾಗೂ ಸಹಾಯಕಿಯರ ಪದೋನ್ನತಿಯ ಕುರಿತು ಲೋಪದೋಷಗಳಿರುವ ಆದೇಶ ವಾಪಸ್ ಪಡೆದು, ಮಾರ್ಪಡಿಸಿದ ತಿದ್ದುಪಡಿ ಆದೇಶವನ್ನು ಲಿಖಿತವಾಗಿ ಪಡೆಯಲಾಯಿತು. 3) ಕಟ್ಟಡದ ವೆಚ್ಚ 12 ಲಕ್ಷದಿಂದ 20 ಲಕ್ಷಕ್ಕೆ ಏರಿಕೆಗೆ ಒಪ್ಪಿಗೆ, 4) ಮಕ್ಕಳಿಗೆ ಶೂ, ಸಮವಸ್ತ್ರ ಹಾಗೂ ಮೂಲಸೌಕರ್ಯ ಹೆಚ್ಚಿಸಲು ಒಪ್ಪಿಗೆ, 5) ಅಂಗನವಾಡಿಗಳಲ್ಲಿ ತಾಲಾಪೂರ್ವ ಶಿಕ್ಷಣ ಪಡೆದ ದೃಢೀಕರಣ ಪತ್ರ ನೀಡಲು ಸಮ್ಮತಿ ನೀಡಿದ್ದಾರೆ. 6) ಇಲಾಖೆಯ ಅಧಿಕಾರಿಗಳ ಜೊತೆಗೆ ಮಾತುಕತೆಯ ವೇಳೆಯಲ್ಲಿ ಇನ್ನುಳಿದ ಬೇಡಿಕೆಗಳೊಂದಿಗೆ ರಾಜ್ಯದ ಎಲ್ಲಾ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಪೂರ್ಣ ಆರೋಗ್ಯ ತಪಾಸಣೆ ಇತ್ಯಾದಿ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ದೊರಕಿಸಿಕೊಳ್ಳಲು ಸಾಧ್ಯವಾಗಿದೆ ಎಂದರು.

7) .ಗ್ರಾಚ್ಯುಟಿಗೆ ಸಂಬಂಧಿಸಿ ದಿ: 1-2-2013 ರಂದು ಮಾನ್ಯ ಮುಖ್ಯಮಂತ್ರಿಗಳ ಸಲಹೆಯಂತೆ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಮಾನ್ಯ ಸುಪ್ರಿಂ ಕೋರ್ಟಿನ ತೀರ್ಪಿನಂತೆ ಗ್ರಾಚ್ಯುಟಿ ಕಾಯ್ದೆ 1972 ರ ಪ್ರಕಾರ ಉಪಧನ (ಗ್ರಾಚ್ಯುಟಿ) ನೀಡುವ ಕುರಿತು ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆಯ ಮೇರೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ ಎಂದರು.

ಸಿಐಟಿಯು ಹಟ್ಟಿ ಘಟಕದ ಕಾರ್ಯದರ್ಶಿ ಬಾಬು ಸಾಗರ್ ಮಾತನಾಡಿ, ಹೋರಾಟದ ಸಂದರ್ಭದಲ್ಲಿ ಸಂಘಟನೆಯ ಬೇಡಿಕೆಗಳ ಈಡೇರಿಕೆಗೆ ಸಹಾಯ ಸಹಕಾರ ನೀಡಿದವರಿಗೆ, ಬೆಂಬಲಿಸಿದವರಿಗೆ, ಮಾರ್ಗದರ್ಶನ ಮಾಡಿದ ನಾಡಿನ ಗಣ್ಯರಿಗೆ ಹಿತೈಷಿಗಳಿಗೆ, ಹೋರಾಟವನ್ನು ಮಾಧ್ಯಮದ ಮೂಲಕ ಪ್ರಸಾರ ಮಾಡಿದವರಿಗೆ, ಸೂಕ್ತ ರಕ್ಷಣೆ ನೀಡಿದ ಆರಕ್ಷಕರಿಗೆ ಸಂಘಟನೆಯ ಪರವಾಗಿ ವಂದನೆಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ಸಿಐಟಿಯು ಮುಖಂಡರಾದ ಫಕ್ರುದ್ದೀನ್, ವೆಂಕಟೇಶ್ ಮೇದನಾಪುರ್, ನಿಂಗಪ್ಪ ಎಂ, ಅಂಗನವಾಡಿ ನೌಕರರ ಸಂಘಟನೆಯ ತಾಲ್ಲೂಕು ಕಾರ್ಯದರ್ಶಿ ಮಹೇಶ್ವರಿ, ಕನಕಮ್ಮ, ನಂದಿನಿ, ಸಬೀಫ್ರ್ ಬೇಗಂ, ಯಂಕಮ್ಮ, ಪುಷ್ಪ, ಹುಸೇನ ಬೀ, ಮಂಜುಳ, ಪದ್ಮಾ, ರೇಣುಕಾ, ಗೌಸಿಯಾ, ಎಲಿಜೆಬೆತ್, ರಮೇಶ್, ಮೌನೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

1 hour ago

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

15 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

15 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

15 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

15 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420