ನಿರಂತ ಪರಿಶ್ರಮ ಪಟ್ಟರೆ ಪ್ರತಿಯೊಬ್ಬ ವ್ಯಕ್ತಿ ಮುಂದೆ ಬರಲು ಸಾಧ್ಯ

0
23

ಸುರಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,ಸಮಾಜ ಕಲ್ಯಾಣ ಇಲಾಖೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಗರುಡಾದ್ರಿ ಕಲ್ಯಾಣ ಮಂಟಪದಲ್ಲಿ ವಿದ್ಯಾರ್ಥಿಗಳಿಗಾಗಿ ವ್ಯಕ್ತಿತ್ವ ವಿಕಸನ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕೋತಿಗುಡ್ಡ ಗ್ರಾಮದ ರಮೇಶ ಬಲ್ಲಿದ್ ಮಾತನಾಡಿ,ಪ್ರತಿಯೊಬ್ಬ ವ್ಯಕ್ತಿ ಬದುಕಿನಲ್ಲಿ ಮೇಲೆ ಬರಬೇಕಾದರೆ ನಿರಂತರ ಪರಿಶ್ರಮ ಅಗತ್ಯವಾಗಿದೆ ಎಂದರು.ತಾವು ವಿದ್ಯಾರ್ಥಿಗಳು ಯಾವುದೇ ಉನ್ನತ ಹುದ್ದೆಯನ್ನು ಪಡೆಯುವ ಕನಸು ಹೊಂದಿದ್ದರೆ ಅದರ ಜೊತೆಗೆ ನಿರಂತರ ಅಧ್ಯಯನದ ಶ್ರಮವನ್ನು ರೂಢಿಸಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ ಎಂದರು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ಅಧ್ಯಕ್ಷ ರಾಜಾ ಮುಕುಂದ ನಾಯಕ ಮಾತನಾಡಿ,ಇಂದು ಇಷ್ಟೊಂದು ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನೋಡಿ ತುಂಬಾ ಸಂತೋಷವಾಗುತ್ತಿದೆ.ವಿದ್ಯಾರ್ಥಿಗಳಿಗಾಗಿ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಗರುಡಾದ್ರಿ ಕಲಾ ಮಂದಿರದಲ್ಲಿ ಅವಕಾಶ ಮಾಡಿ ಕೊಡುವುದಾಗಿ ತಿಳಿಸಿದರು.

ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿ,ತಾವೆಲ್ಲರು ಸಿನೆಮಾ ನಾಯಕ ನಟರನ್ನು ಹಿರೋಗಳೆಂದು ಭಾವಿಸಿರುವಿರಿ,ಆದರೆ ರಿಯಲ್ ಹಿರೋ ಎಂದರೆ ರಮೇಶ ಬಲ್ಲಿದ್ ಆಗಿದ್ದಾರೆ.ತಾವುಗಳು ಅವರಂತೆ ಸತತ ಅಧ್ಯಯನ ಮಾಡಿ ಬದುಕಿನಲ್ಲಿ ನೀವೆ ನಿಜವಾದ ಹಿರೋಗಳಾಗಬೇಕು ಎಂದರು.

ಕಾರ್ಯಕ್ರಮವನ್ನು ರಾಯಚೂರು ಸೂರ್ಯೋದಯ ವಾಕಿಂಗ್ ಕ್ಲಬ್ ಅಧ್ಯಕ್ಷ ಬಿ.ಬಸವರಾಜ ಉದ್ಘಾಟಿಸಿ ಮಾತನಾಡಿದರು,ಅಲ್ಲದೆ ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಎಮ್.ಎಸ್.ಗೋನಾಲ ಭಾಗವಹಿಸಿ ಮಾತನಾಡಿದರು.

ನಯೋಪ್ರಾ ಅಧ್ಯಕ್ಷ ಪ್ರಕಾಶ ಸಜ್ಜನ್,ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಚನ್ನಬಸಪ್ಪ,ರಾಯಚೂರು ಶಿವಶಂಕರ ಟ್ರಾನ್ಸ್‍ಪೋರ್ಟ್ ಮಾಲೀಕ ಸುರೇಶ,ಸಮಾಜ ಕಲ್ಯಾಣ ಇಲಾಖೆ ಎಡಿ ಶೃತಿ ಎಸ್,ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಜ್ಞಾನಪ್ಪ ಮೇಟಿ,ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ರಾಮನಗೌಡ ಪಾಟೀಲ್ ವೇದಿಕೆ ಮೇಲಿದ್ದರು.

ಎಲ್ಲಾ ವಸತಿ ನಿಲಯಗಳ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಪ್ಪಾರಡ್ಡಿ ಮಾಲಿ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು, ವಸತಿ ನಿಲಯ ಮೇಲ್ವಿಚಾರಕ ರಮೇಶ ನಿರೂಪಿಸಿದರು,ಪ್ರ.ದ.ಸ ವಿರೇಶ ಸ್ವಾಗತಿಸಿದರು,ವಸತಿ ನಿಲಯ ಮೇಲ್ವಿಚಾರಕ ಹಣಮಗೌಡ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here