ಸಕಾರಾತ್ಮಕ ಆಲೋಚನೆಯಿಂದ ಉತ್ತಮ ಭವಿಷ್ಯ: ಮಧುರಾ ಅಶೋಕ

0
80

ಕಲಬುರಗಿ: ವಿದ್ಯಾರ್ಥಿಗಳು ತರಗತಿಯಲ್ಲಿ ಉತ್ತಮ ಸ್ನೇಹದಿಂದ ಇರಬೇಕು. ಯಾರಿಗೂ ನೋವಾಗದಂತೆ ನಡೆದುಕೊಳ್ಳಬಾರದು. ಸಕಾರಾತ್ಮಕ ಭಾವನೆ, ಆಲೋಚನೆಯಿಂದ ಉತ್ತಮ ಭವಿಷ್ಯ ನಿರ್ಮಾಣ ಮಾಡಿಕೊಳ್ಳುವುದಕ್ಕೆ ಸಾಧ್ಯ ಎಂದು ಬೆಂಗಳೂರು ಸಮಾಜ ಸೇವಕಿ ಮಧುರಾ ಅಶೋಕ ಹೇಳಿದರು.

ನಗರದ ಶರಣಬಸವ ವಿಶ್ವವಿದ್ಯಾಲಯ ಆವರಣದ ದೊಡ್ಡಪ್ಪ ಅಪ್ಪಾ ಸಭಾಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಇಂಡಕ್ಷನ್ (ದೀಕ್ಷಾರಂಭ-೨೦೧೯) ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಸ್ನೇಹಿತರಲ್ಲಿ ಭಿನ್ನಾಭಿಪ್ರಾಯ ಬರುವುದು ಸಹಜ ಆದರೆ ಅದು ಕ್ಷಣಿಕವಾಗಿರುತ್ತದೆ. ಸಮಾದಾನದಿಂದ ಸಮಸ್ಯೆ ಬಗೆ ಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

Contact Your\'s Advertisement; 9902492681

ಪ್ರಸ್ತುತ ದಿನದಲ್ಲಿ ಹೊಸ ಹೊಸ ತಂತ್ರಜ್ಞಾನ ಆವಿಷ್ಕಾರವಾಗಿದೆ. ಆದರೆ ಕೆಲ ವಿದ್ಯಾರ್ಥಿಗಳು ಮೋಬೈಲ್ ಮತ್ತು ಅಂತರಜಾಲದ ಸೌಲಭ್ಯವನ್ನು ತಮ್ಮ ವಿದ್ಯಾಭ್ಯಾಸಕ್ಕೆ ಬಳಸಿಕೊಳ್ಳದೇ ವಿವಿಧ ರೀತಿಯಲ್ಲಿ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ತಮ್ಮ ಅಮೂಲ್ಯ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು. ರಕ್ತ ಹಿನತೆ ಕೊರತೆಯಿಂದ ಬಹಳಷ್ಟು ಗರ್ಭಿಣಿಯರು ಹೆರಿಗೆ ಸಮಯದಲ್ಲಿ ಸಾವನ್ನಪ್ಪುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳು ವರ್ಷದಲ್ಲಿ ಎರಡು ಬಾರಿಯಾದರೂ ಉಚಿತ ರಕ್ತದಾನ ಮಾಡಬೇಕು. ಇದರಿಂದ ಸಾವಿರಾರು ಬಡ ಜೀವಗಳನ್ನು ಉಳಿಸಬಹುದಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ರಕ್ತದಾನಕ್ಕೆ ಮುಂದಾಗಬೇಕು ಎಂದು ವಿದ್ಯಾರ್ಥಿಗಳಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಿದರು.

ಕಾಲೇಜು ಸೇರಿದಂತೆ ಸಾರ್ವಜನಿಕ ಯಾವುದೇ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ನಡೆದರೆ ತಕ್ಷಣ ಸಂಬಂಧಿಸಿದವರಿಗೆ ತಿಳಿಸಿ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಲು ಮುಂದಾಗಿ ವಿದ್ಯಾರ್ಥಿನೀಯರು ತಮ್ಮ ಆತ್ಮ ರಕ್ಷಣೆ ಮಾಡಿಕೊಳ್ಳುವುದನ್ನು ಕಲಿಯಬೇಕು ಎಂದು ತಿಳಿಸಿದರು.

ವಿವಿ ಡೀನ್ ಡಾ. ಲಕ್ಷ್ಮಿ ಮಾಕಾ, ಪ್ರೊ. ಶಿಲ್ಪಾ, ಪ್ರೊ. ನಾಗಮ್ಮ ಇತರರು ಇದ್ದರು. ಪ್ರೊ. ಶಾಂತಾ ಹೌಶಟ್ಟಿ ನಿರೂಪಿಸಿದರು. ಕು. ಅಕ್ಷತಾ ಪ್ರಾರ್ಥಿಸಿದರು. ಪ್ರೊ. ಶೃತಿ ಪಾಟೀಲ ಸ್ವಾಗತಿಸಿದರು. ಪ್ರೊ. ಸರಸ್ವತಿ ಬಾಲಕುಂದೆ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here