ಬಿಸಿ ಬಿಸಿ ಸುದ್ದಿ

ಪ್ರಜಾಧ್ವನಿ ಯಾತ್ರೆಗೆ ಸಿದ್ದರಾಮಯ್ಯ ಆಗಮನ:50 ಸಾವಿರ ಜನ ಸೇರುವ ನಿರೀಕ್ಷೆ-ಆರ್.ವಿ.ನಾಯಕ

ಸುರಪುರ:ಇದೇ ಫೆಬ್ರವರಿ 10 ರಂದು ದೇವತ್ಕಲ್ ಗ್ರಾಮದಲ್ಲಿ ನಡೆಯಲಿರುವ ಪ್ರಜಾಧ್ವನಿ ಯಾತ್ರೆಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿಧಾನಸಭೆ ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ತಿಳಿಸಿದರು.

ದೇವತ್ಕಲ್ ಗ್ರಾಮದಲ್ಲಿ ಕಾರ್ಯಕ್ರಮದ ತಯಾರಿ ವೀಕ್ಷಿಸಿ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,ಫೆ 10 ರಂದು ಬೆಳಿಗ್ಗೆ 10:30ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದೆ.ಹೆಲಿಕಾಪ್ಟರ್ ಮೂಲಕ ಸಿದ್ದರಾಮಯ್ಯನವರು ಸೇರಿದಂತೆ ಅನೇಕ ಮುಖಂಡರು ಆಗಮಿಸಲಿದ್ದು,ಎಲ್ಲರನ್ನು ಹೆಲಿಪ್ಯಾಡ್‍ನಿಂದ ಕಾರ್ಯಕ್ರಮದ ವೇದಿಕೆವರೆಗೂ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆತರಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರಕ್ಕಿಂತಲೂ ಹೆಚ್ಚಿನ ಸಂಖ್ಯೆಯ ಜನರು ಸೇರುವ ನಿರೀಕ್ಷೆಯಿದೆ.ಸುಮಾರು 25 ಸಾವಿರ ಆಸನಗಳ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ವೇದಿಕೆಯ ಬಲಭಾಗ ಮುಂದೆ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.ಈಗಾಗಲೇ 400 ಬೈ 120 ಫೀಟ್‍ನ ವೇದಿಕೆ ಸಿದ್ಧತೆ ಸಾಗಿದೆ ಎಂದು ತಿಳಿಸಿದರು.

ಪ್ರಜಾಧ್ವನಿ ಯಾತ್ರೆಯಲ್ಲಿ ಸಿದ್ದರಾಮಯ್ಯನವರ ಜೊತೆಗೆ ಮುಖಂಡರಾದ ಈಶ್ವರ ಖಂಡ್ರೆ,ಸತೀಶ ಜಾರಕಿಹೊಳೆ,ಎಂ.ಬಿ.ಪಾಟೀಲ್ ,ಡಾ:ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ ಖರ್ಗೆ,ಝಮೀರ್ ಅಹ್ಮದ್ ಖಾನ್,ಬಸವರಾಜ ರಾಯರೆಡ್ಡಿ,ಮಾಜಿ ಸಂಸದ ಬಿ.ವಿ ನಾಯಕ ಸೇರಿ ಅನೇಕ ಮುಖಂಡರು ಆಗಮಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ವಿಠ್ಠಲ್ ಯಾದವ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ,ವೆಂಕೋಬ ಯಾದವ್,ರಾಜಾ ವೇಣುಗೋಪಾಲ ನಾಯಕ,ಭೀಮರಾಯ ಮೂಲಿಮನಿ,ಸುರೇಶ ತಂಬಾಕೆ,ನಿಂಗಣ್ಣ ಕೊಡೆಸೂರ,ಬಲಭೀಮರಾಯ ಗಂಟಿ,ನಂದಪ್ಪ ಮೇಟಿ,ಹಣಮಂತ್ರಾಯ ಗಂಟಿ,ವೆಂಕಟೇಶ ಕರಡಿಗುಡ್ಡ,ಪರಣ್ಣಗೌಡ ಕೋನಾಳ,ಮಂಜು ಯಾದವ್, ತಿಮ್ಮಣ್ಣ ನಾಯಕ, ಅಯ್ಯಪ್ಪಗೌಡ, ಬಸವಂತರಾಯ ನಾವದಗಿ, ಲಕ್ಷ್ಮಣ ದೇವತ್ಕಲ್,ಹಣಮಂತ್ರಾಯ ಶುಕ್ಲ,ಚಂದ್ರು ಹೆಬ್ಬಾಳ,ಅಮರಯ್ಯ ಸ್ವಾಮಿ ಸೇರಿದಂತೆ ಅನೇಕರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago