ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ ಗೋರ ಸೇನಾ ಪ್ರತಿಭಟನೆ

0
15

ಸುರಪುರ: ಲಿಂಗಸೂಗುರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ ರಾಷ್ಟ್ರೀಯ ಗೋರ ಸೇನಾ ಸಂಘಟನೆ ಮುಖಂಡರು ನಗರದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರವಿಕುಮಾರ ಜಾಧವ ಮಾತನಾಡಿ,ಲಿಂಗಸೂಗುರಿನ ಖಾಸಗಿ ಕಾಲೇಜೊಂದರಲ್ಲಿ ನಮ್ಮ ಬಂಜಾರ ಸಮಾಜದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಅಲ್ಲದೆ ಕೂಡಲೇ ಕಾಮುಕರನ್ನು ಬಂಧಿಸಿ ಗಲ್ಲು ಶಿಕ್ಷೆ ನೀಡಬೇಕು ಮತ್ತು ಕಳೆದ ಕೆಲ ವರ್ಷಗಳಿಂದ ಬಂಜಾರ ಸಮುದಾಯದ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಘಟನೆಗಳು ಹೆಚ್ಚುತ್ತಿದ್ದು ಇದನ್ನು ರಾಷ್ಟ್ರೀಯ ಗೋರ ಸೇನಾ ಸಂಘಟನೆ ಉಗ್ರವಾಗಿ ಖಂಡಿಸುತ್ತದೆ.ಕೂಡಲೇ ಸರಕಾರ ಇಂತಹ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡು ಮತ್ತೊಮ್ಮೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಉಪ ತಹಸೀಲ್ದರ್ ಮಲ್ಲಯ್ಯ ದಂಡು ಅವರ ಮೂಲಕ ಸಲ್ಲಿಸಿದರು.

Contact Your\'s Advertisement; 9902492681

ಪ್ರತಿಭಟನೆಯಲ್ಲಿ ಮುಖಂಡರಾದ ಸಂಘದ ತಾಲೂಕು ಅಧ್ಯಕ್ಷ ಕಾಂತೇಶ ನಾಯಕ,ಸುನೀಲ ರಾಠೋಡ,ಶಂಕರ ಚವ್ಹಾಣ,ಕೃಷ್ಣಾ ರಾಠೋಡ,ಅನಿಲ ರಾಠೋಡ,ರಾಜು ಜಾಧವ,ಮಹಾಂತೇಶ ರಾಠೋಡ,ವಿಕ್ರಮ ರಾಠೋಡ,ಮಲ್ಲು ಬಿರಾದಾರ,ಅರುಣ ರಾಠೋಡ,ಭೀಮಣ್ಣ ದೊರಿ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here