ಶಹಾಬಾದ :ಮಕ್ಕಳಲ್ಲಿ ಸೂಕ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರಹಾಕುವುದಕ್ಕೆ ಕಲಿಕಾ ಮೇಳ ಉತ್ತಮ ವೇದಿಕೆಯಾಗಿದೆ ಎಂದು ಚಿತ್ತಾಪೂರ ಬಿಆರಸಿ ಮಲ್ಲಿಕಾರ್ಜುನ ಸೇಡಂ ಹೇಳಿದರು.
ಅವರು ನಗರದ ವಡ್ಡರಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಸಮನ್ವಯಾಧಿಕಾರಿಗಳ ಕಾರ್ಯಾಲಯ ಚಿತ್ತಾಪುರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಶಹಾಬಾದ ಕ್ಲಸ್ಟರ್ ಮಟ್ಟದ ಕಲಿಕಾ ಮೇಳ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳಲ್ಲಿ ಗುಣಾತ್ಮಕ ಕಲಿಕೆ ಉಂಟು ಮಾಡಲು ಸಾಧ್ಯ ಎಂದು ಹೇಳಿದರು. ಕಳೆದ ಹಲವಾರು ದಿನಗಳಿಂದ ಮಕ್ಕಳು ನಿರಂತರವಾಗಿ ಭಾμÉ ಮತ್ತು ಗಣಿತ ಇನ್ನಿತರ ವಿಷಯ ಗಳಿಗೆ ಸಂಬಂಧಿಸಿದ ಅನೇಕ ಚಟುವಟಿಕೆ ಅನುಭವತ್ಮಾಕವಾಗಿ ಕಲಿತಿರುವುದಕ್ಕೆ ಈ ಮೇಳ ಸಾಕ್ಷಿಯಾಗಿದೆ. ಇಂತಹ ಶೈಕ್ಷಣಿಕ ಮೇಳಗಳಿಂದ ಮಕ್ಕಳಲ್ಲಿ ಯೋಚಿಸುವ, ಪ್ರಶ್ನಿಸುವ ಹಾಗೂ ನಿರರ್ಗಳವಾಗಿ ಮಾತನಾಡುವ ಸಾಮಥ್ರ್ಯಗಳ ಅಭಿವೃದ್ಧಿಯಾಗುವುದು ಎಂದರು.
ನಗರಸಭೆಯ ಸದಸ್ಯೆ ತಿಮ್ಮಾಬಾಯಿ ಕುಸಾಳೆ ಮಾತನಾಡಿ, ಪ್ರತಿಯೊಂದು ಶೈಕ್ಷಣಿಕ ಮೇಳಗಳು ಮಕ್ಕಳ ಮನೋವಿಕಾಸಕ್ಕೆ ಸಹಕಾರಿಗಲಿವೆ. ಇದರಿಂದ ಗಣನೀಯ ಪ್ರಮಾಣದಲ್ಲಿ ಶೈಕ್ಷಣಿಕ ಪ್ರಗತಿಯಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯೆ ಲಕ್ಷ್ಮೀಬಾಯಿ ಕುಸಾಳೆ, ಬಿಆರಪಿ ಅಶ್ವಿನಿ, ನಾಗುಬಾಯಿ, ಸಿಆರಸಿ ಸತ್ಯನಾರಾಯಣ, ಶಿಕ್ಷಕಿ ವಿಜಯಲಕ್ಷ್ಮಿ ಪಾಟೀಲ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ರಾಮ ಕುಸಾಳೆ, ಎಸಡಿಎಂಸಿ ಸದಸ್ಯರುಗಳು, ಶಾಲೆಯ ಮುಖ್ಯಗುರುಮಾತೆ ಬಾಯಮ್ಮ, ಸಿದ್ರಾಮ ಕುಸಾಳೆ ಹಾಗೂ ಶಾಲೆಯ ಶಿಕ್ಷಕಿಯರು, ಮಕ್ಕಳ ಪಾಲಕರು ಮತ್ತು ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…