ಶಹಾಬಾದ: ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ಪ್ರಬಂಧ ಸ್ಪರ್ಧೆ ವಿಭಾಗದಲ್ಲಿ “ನಗದು ರಹಿತ ಆರ್ಥಿಕತೆಯ ಪ್ರಾಮುಖ್ಯತೆ” ವಿಷಯ ಕುರಿತು ಬರೆದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆ ಶಹಾಬಾದ ತಾಲೂಕಿನ ರಾವೂರ ಗ್ರಾಮದ ಸಿದ್ಧಲಿಂಗೇಶ್ವರ ಸಂಸ್ಥಾನ ಮಠದ ಶ್ರೀ ಸಚ್ಚಿದಾನಂದ ಪ್ರೌಢಶಾಲೆಯ ಕ್ರಿಯಾಶೀಲ ಶಿಕ್ಷಕ ಸಿದ್ಧಲಿಂಗ ಬಾಳಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಕಲಬುರಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸಿದ್ಧಲಿಂಗ ಬಾಳಿ ಅವರಿಗೆ ರಾವೂರ ಗ್ರಾಮದ ಸಿದ್ಧಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಸಿದ್ದಲಿಂಗ ದೇವರು, ಚಿತ್ತಾಪೂರ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯ ರುದ್ನೂರ್, ಬಿಆರ್‍ಪಿ ಮಲ್ಲಿಕಾರ್ಜುನ ಸೇಡಂ, ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಶಿವಪುತ್ರ ಕರಣಿಕ್,ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಚಿದಾನಂದ ಕುಡ್ಡನ್,ಅನುದಾನಿತ ಪ್ರೌಢಶಾಲಾ ಶಿಕ್ಷಕರ ಮತ್ತು ಶಿಕ್ಷಕೇತರ ಸಂಘದ ತಾಲೂಕಾಧ್ಯಕ್ಷ ಪ್ರವೀಣರಕುಮಾರ ಹೇರೂರ ಸೇರಿದಂತೆ ತಾಲೂಕಿನ ಅನೇಕ ಶಿಕ್ಷಕರು ಅಭಿನಂದಿಸಿದ್ದಾರೆ.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…