ಬಿಸಿ ಬಿಸಿ ಸುದ್ದಿ

ಟಿ. ವಿ. ಶಿವಾನಂದನ್ ಅವರ ಎರಡನೇ ಕೃತಿ ಲೋಕಾರ್ಪಣೆ

ಕಲಬುರಗಿ: ನಿರಂತರವಾಗಿ ಬರೆಯುವುದರಿಂದ ಹೆಚ್ಚಿನ ಜ್ಞಾನ ವೃದ್ಧಿ ಆಗುತ್ತದೆ ಆದ್ದರಿಂದ ಪ್ರಾಧ್ಯಪಕರು ಹಾಗೂ ವಿದ್ಯಾರ್ಥಿಗಳೆಲ್ಲರೂ ಬರೆಯುವುದನ್ನು ರೂಢಿಸಿಕೊಳ್ಳಬೇಕೆಂದು ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆದ ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಅಭಿಪ್ರಾಯ ಪಟ್ಟರು.

ಇಂದು ಕಲಬುರಗಿ ನಗರದ ದಾಸೋಹ ಮಹಾಮನೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಡಾ. ದಾಕ್ಷಾಯಿಣಿ ಅವ್ವಾಜಿಯವರು, ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ವಿಭಾಗದ ಡೀನ್ ಶ್ರೀ ಟಿ ವಿ ಶಿವಾನಂದನ್ ಅವರು ರಚಿಸಿದ ಭಾರತರತ್ನ ಪಂಡಿತ್ ಮದನ್ ಮೋಹನ ಮಾಳವೀಯ ಮತ್ತು ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಈ ಇಬ್ಬರು ದಾರ್ಶನಿಕರ ಕುರಿತು ತುಲನಾತ್ಮಕ ಅಧ್ಯಯನ ಮಾಡಿದ ಅವರ ಎರಡನೇ ಕೃತಿಯಾದ “ಮಹಾದಾಸೋಹಿ ಮತ್ತು ಮಹಾಮನ” ಎಂಬ ಕೃತಿಯನ್ನು ಲೋಕಾರ್ಪಣೆಗೊಳಿಸಿದರು.

ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಪೂಜ್ಯ ಡಾ. ಅಪ್ಪಾಜಿ ಅವರು ಪುಸ್ತಕ ಹೊರತಂದಿದ್ದಕ್ಕೆ ಶಿವಾನಂದನ್ ಅವರಿಗೆ ಅಭಿನಂದಿಸಿ, ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳ ಕುರಿತು ಪುಸ್ತಕಗಳನ್ನು ಬರೆಯಲು ಪ್ರೇರಕ ಶಕ್ತಿಯಾಗಬೇಕು ಮತ್ತು ಬರವಣಿಗೆಯ ಮಹತ್ವವನ್ನು ತಿಳಿಸಿಬೇಕೆಂದು ಕರೆ ನೀಡಿದರು. ಬರವಣಿಗೆಯು ಮನುಷ್ಯನನ್ನು ಪರಿಪೂರ್ಣನನ್ನಾಗಿ ಮಾಡುತ್ತದೆ ಮತ್ತು ನಿರಂತರ ಬರವಣಿಗೆಯು ವಿದ್ಯಾರ್ಥಿಗಳ ಬರವಣಿಗೆಯ ಕೌಶಲ್ಯವನ್ನು ಮಾತ್ರವಲ್ಲದೆ ಅವರಲ್ಲಿನ ಜ್ಞಾಪಕ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ಇದು ಶೈಕ್ಷಣಿಕ ಹಾಗೂ ವೃತ್ತಿಪರ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತದೆ ಎಂದು ಪೂಜ್ಯ ಅಪ್ಪಾಜಿ ಹೇಳಿದರು.

ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿಯವರು ತಮ್ಮ ಸಂಕ್ಷಿಪ್ತ ಭಾಷಣದಲ್ಲಿ ಇಬ್ಬರು ಶ್ರೇಷ್ಠ ದಾರ್ಶನಿಕ ಶಿಕ್ಷಣತಜ್ಞರ ತುಲನಾತ್ಮಕ ಅಧ್ಯಯನವನ್ನು ಹೊರತಂದಿದ್ದಕ್ಕಾಗಿ ಶ್ರೀ ಶಿವಾನಂದನ್ ಅವರನ್ನು ಅಭಿನಂದಿಸಿದರು ಮತ್ತು ವ್ಯಾಪಕ ಓದುಗರ ಜಾಲವನ್ನು ತಲುಪಲು ಪುಸ್ತಕವನ್ನು ಕನ್ನಡ ಮತ್ತು ಹಿಂದಿ ಭಾಷೆಗೆ ಅನುವಾದಿಸಬೇಕು ಎಂದು ಹೇಳಿದರು. ಕನ್ನಡದಲ್ಲಿ ಪುಸ್ತಕದ ಅನುವಾದವು ಪೂರ್ಣಗೊಳ್ಳುವ ಹಂತದಲ್ಲಿದ್ದು, ಹಿಂದಿಯಲ್ಲಿ ಪುಸ್ತಕವನ್ನು ಅನುವಾದಿಸುವ ಕೆಲಸವನ್ನು ಶೀಘ್ರದಲ್ಲೇ ತಜ್ಞರಿಗೆ ವಹಿಸಲಾಗುವುದು ಎಂದು ಶಿವಾನಂದನ್ ಭರವಸೆ ನೀಡಿದರು.

ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ನಿರಂಜನ್ ವಿ ನಿಷ್ಠಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಇಬ್ಬರು ದಾರ್ಶನಿಕ ಶಿಕ್ಷಣತಜ್ಞರ ಕೊಡುಗೆಯನ್ನು ತುಲನಾತ್ಮಕವಾಗಿ ಹೋಲಿಸಿದ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು. ಬನಾರಸ್ ಹಿಂದೂ ವಿಶ್ವವಿದ್ಯಾಲಯವನ್ನು ಸ್ಥಾಪಿಸುವಲ್ಲಿ ಪಂಡಿತ್ ಮದನ್ ಮೋಹನ್ ಮಾಳವೀಯ ಪ್ರಮುಖ ಪಾತ್ರ ವಹಿಸಿದರೆ, ಪೂಜ್ಯ ಡಾ. ಅಪ್ಪಾಜಿ ಅವರು ಒಂದು ಕಾಲದಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶವನ್ನು ಪ್ರಮುಖ ಶೈಕ್ಷಣಿಕ ಮತ್ತು ಜ್ಞಾನ ಕೇಂದ್ರವಾಗಿ ಪರಿವರ್ತಿಸಿದರು ಎಂದು ಹೇಳಿದರು.

ಶಿಕ್ಷಣ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ತೆರೆದಿಟ್ಟ ಪೂಜ್ಯ ಅಪ್ಪಾಜಿಯವರು ಶಿಕ್ಷಣ ಸಂಸ್ಥೆಗಳ ಸರಮಾಲೆಯನ್ನು ಸ್ಥಾಪಿಸಿ ಕೊನೆಗೆ ಎಲ್ಲ ಸಂಕಷ್ಟಗಳನ್ನು ಮೆಟ್ಟಿ ನಿಂತು ಖಾಸಗಿ ವಿಶ್ವವಿದ್ಯಾಲಯವಾಗಿ ಬಹು ಶಿಸ್ತಿನಿಂದ ಕೂಡಿದ ಶರಣಬಸವ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಅವರನ್ನು ಮನವೊಲಿಸುವ ಮೂಲಕ ಗುಲಬರ್ಗಾ ವಿಶ್ವವಿದ್ಯಾಲಯ ಸ್ಥಾಪನೆಗೆ ಅಡಿಪಾಯ ಹಾಕಿದ ಪೂಜ್ಯ ಅಪ್ಪಾಜಿ ಅವರು ಪೂರ್ಣ ಪ್ರಮಾಣದ ವಿಶ್ವವಿದ್ಯಾಲಯ ಸ್ಥಾಪನೆಯ ಮೊದಲ ಹೆಜ್ಜೆಯಾಗಿ ಸ್ನಾತಕೋತ್ತರ ಕೇಂದ್ರವನ್ನು ಸ್ಥಾಪಿಸಲು ಇಡೀ ಉತ್ತರ ಕರ್ನಾಟಕದಲ್ಲಿ ಮತ್ತು ಕರ್ನಾಟಕದಲ್ಲಿ ಎರಡನೆಯದಾದ ಮಹಿಳೆಯರಿಗಾಗಿಯೇ ಮೊದಲ ವಿಶೇಷ ಎಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಲು ಕಾರಣರಾಗಿದ್ದಾರೆ ಎಂದು ಡಾ.ನಿಷ್ಠಿ ಹೇಳಿದರು.

ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅನಿಲಕುಮಾರ ಬಿಡವೆ ಮಾತನಾಡಿ, ಪೂಜ್ಯ ಡಾ.ಅಪ್ಪಾಜಿ ಅವರು ಹೊಸ ಪುಸ್ತಕಗಳನ್ನು ಬರೆದು ತಮ್ಮ ಸಂಶೋಧನಾ ಅಧ್ಯಯನವನ್ನು ಅಂತರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟಿಸುವ ಪ್ರೇರಕ ಶಕ್ತಿಯಾಗಿದ್ದಾರೆ. ವಿಶ್ವವಿದ್ಯಾಲಯದಲ್ಲಿ ವಿವಿಧ ವಿಭಾಗಗಳ ಅಧ್ಯಾಪಕರು ಇತ್ತೀಚಿನ ವರ್ಷಗಳಲ್ಲಿ ಅನೇಕ ಪುಸ್ತಕಗಳನ್ನು ಪ್ರಕಟಿಸಲು ಪ್ರಾರಂಭಿಸಿದ್ದು, ವಿಶ್ವವಿದ್ಯಾಲಯವೇ ಈ ಎಲ್ಲ ಪುಸ್ತಕಗಳನ್ನು ಪ್ರಕಟಿಸಿ ಬರಹಗಾರರಿಗೆ ಪೆÇ್ರೀತ್ಸಾಹ ನೀಡುತ್ತಿರುವುದು ಚಟುವಟಿಕೆಯ ವೈಶಿಷ್ಟ್ಯಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಟಿ. ವಿ. ಶಿವಾನಂದನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಪುಸ್ತಕವನ್ನು ಬರೆಯಲು ಪೂಜ್ಯ ಡಾ. ಅಪ್ಪಾಜಿ ಅವರು ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಅವರ ಅಪಾರವಾದ ಅಮೂಲ್ಯ ಕೊಡುಗೆಯೇ ಪ್ರೇರಣೆ ಮತ್ತು ಸ್ಪೂರ್ತಿ ಎಂದು ಹೇಳಿದರು. ಪ್ರಸ್ತುತ ಯುಗದ ಇಬ್ಬರು ಮಹಾನ್ ಶಿಕ್ಷಣತಜ್ಞರ ಕೊಡುಗೆಯನ್ನು ಹೋಲಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗಿದೆ ಎಂದು ತಿಳಿಸಿದರು.

ಇದೇ ಸಂಧರ್ಭದಲ್ಲಿ ಪುಸ್ತಕ ಮುದ್ರಣಕ್ಕೆ ಆರ್ಥಿಕ ನೆರವು ನೀಡಿದ ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಿಗೆ ಕೃತಜ್ಞತೆ ಸಲ್ಲಿಸಿದರು. ವಿಶ್ವವಿದ್ಯಾಲಯದ ಸಮಕುಲಪತಿ ಪೆÇ್ರ.ವಿ.ಡಿ.ಮೈತ್ರಿ, ಡೀನ್ ಡಾ.ಲಕ್ಷ್ಮೀ ಪಾಟೀಲ್ ಮಾಕಾ, ಡಾ. ಅಲ್ಲಮ ಪ್ರಭು ದೇಶಮುಖ, ದೃಶ್ಯಕಲಾ ವಿಭಾಗದ ಮುಖ್ಯಸ್ಥ ಡಾ.ಎಸ್.ಎಂ.ನೀಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು. ನಂತರ ಪೂಜ್ಯ ಅಪ್ಪಾಜಿ ಅವರು ಪೆÇ್ರ.ನಿಜಲಿಂಗ ಮುಗಳಿ ರಚಿತ “ಕರ್ನಾಟಕ ನಿಸರ್ಗ ಚಿತ್ರಕಲೆ” ಎಂಬ ಪುಸ್ತಕ ಬಿಡುಗಡೆ ಮಾಡಿದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

2 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

13 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

13 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

15 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

16 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

16 hours ago