ಕಲಬುರಗಿ: ಲಿಂಗಸೂರಿನಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಪದವಿ ಪೂರ್ವ ಕಾಲೇಜಿನ 17 ವರ್ಷ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮೇಲೆ ಆಗಿರುವ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗೋರ ಸೇನಾ ರಾಷ್ಟ್ರೀಯ ಸಂಘಟನೆ ಕರ್ನಾಟಕ ಕಾರ್ಯಕರ್ತರು ಅಪಾರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಕಳೆದ ನಾಲೈದು ವರ್ಷಗಳಿಂದ ಬಾಲಕಿಯರ ಮೇಲೆ ಅತ್ಯಾಚಾರ, ಆತ್ಮ ಹತ್ಯೆ ಮತ್ತು ಕೊಲೆ ಪ್ರಕರಣಗಳು ಹೆಚ್ಚುತ್ತಿದ್ದು, ಕೆಲವೆ ಪುಕರಣಗಳು ದಾಖಲಾಗಿರುವುದು ವಿμÁದಕರ. ಈ ಹಿಂದೆ 2021 ರಲ್ಲಿ ಮಂಡ್ಯ ಜಿಲ್ಲೆಯ ಕೂಲಿ ಕೆಲಸಕ್ಕೆ ಹೋಗಿದ್ದ ಬಂಜಾರಾ ಸಮಾಜದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಬರ್ಬರ ಕೊಲೆ ಪುಕರಣ, 2022 ರಲ್ಲಿ ಮಂಡ್ಯ ಜಿಲ್ಲೆಯಲ್ಲಿ ಟ್ಯೂಷನ್ ಕ್ಲಾಸಗ ಹೋಗಿದ್ದ 10 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಕಾಂತರಾಜ ಎಂಬ ಶಿಕ್ಷಕನಿಂದ ಅತ್ಯಾಚಾರ ಮತ್ತು ಕೊಲೆ ಪುಕರಣ. 2022 ರಲ್ಲಿ ವಿಜಯಪುರ ಜಿಲ್ಲೆಯ ಅಪ್ರಾಪ್ತ ಬಾಲಕಿ ಅತ್ಯಾಚಾರ ಮತ್ತು ಕೊಲೆ ಹೀಗೆ ಪ್ರಕರಣಗಳು ವರದಿಯಾಗಿದ್ದು, ಹೆಚ್ಚಿನ ಪುಕರಣಗಳು ಬಂಜಾರಾ ಸಮುದಾಯದ ಬಾಲಕಿಯರ ಮೇಲೆ ನಡೆದಿದ್ದು ವಯಸ್ಸು 17 ವರ್ಷ ಪಥಮ ಪಿಯುಸಿ ವಿದ್ಯಾರ್ಥಿನಿ ಲಿಂಗಸೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಹತ್ತಿರದ ವಿಬಿಸಿ ಶಿಕ್ಷಣ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಮಹಿಳಾ, ವಸತಿ ನಿಲಯ ಲಿಂಗಸೂರಿನಲ್ಲಿ ಇದ್ದು ಈ ಮಗುವಿನ ಜೊತೆ ನಡೆದಂತಹ ಕೃತ್ಯವು ಇಡಿ ನಮ್ಮ ಸಮಾಜದ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದ್ದು, ಇಂತಹ ಪುಕರಣಗಳು ಮರುಕಳಿಸದಂತೆ, ತಪ್ಪಿತಸ್ಥರಿಗೆ ಕೆವಲ ಶಿಕ್ಷೆ ನೀಡುವುದರಿಂದ ಇಂತಹ ಪ್ರಕರಣಗಳು ಮರುಕಳಿಸದಂತೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಈ ಕೆಳಗೆ ಸೂಚಿಸದಂತಹ ಕ್ರಮಗಳನ್ನು ಕೈಗೊಂಡು ಬಾಲಕಿಯರ ರಕ್ಷಣೆಗೆ ಮುಂದಾಗಬೇಕೆಂದು ಬಂಜಾರಾ ಸಮುದಾಯದ ಗೋರ ಸೇನಾ ರಾಷ್ಟ್ರೀಯ ಸಂಘಟನೆ ಕರ್ನಾಟಕ ವತಿಯಿಂದ ಮನವಿ ಮಾಡಿದ್ದಾರೆ.
ಶಾಲಾ ಕಾಲೇಜುಗಳ ಆವರಣ ಮತ್ತು ತರಗತಿ ಕೊಠಡಿಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮಾರಾ ಅಳವಡಿಕೆ ಮಾಡುವುದು. ಅಂತಹ ಸಿಸಿ ಟಿವಿ ಕ್ಯಾಮರಾಗಳನ್ನು ಶಾಲಾ ಅಥವಾ ಸಂಸ್ಥೆಯ ಮುಖ್ಯಸ್ಥರು ಅಥವಾ ಪ್ರಾಚಾರ್ಯರು ನಿರ್ವಹಣೆ ಮಾಡುವುದು. ಸಂಶಯಬಂದ ಪ್ರಕರಣಗಳಲ್ಲಿ ತನಿಖೆಯನ್ನು ಕೈಗೊಂಡು ಮುಂದೆ ಆಗುವ ಅನಾಹುತಗಳನ್ನು ತಡೆಯಲು ಸೂಕ್ತ ಕ್ರಮ ಕೈಗೊಳಬೇಕು.
ಗೋರ ಸೇನಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರೋ.ಸಂದೇಶ ಚವ್ಹಾಣ, ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀಧರ ಚವ್ಹಾಣ, ವಿಶಾಲ ರಾಠೋಡ, ಪ್ರಭುಕಾರ ರಾಠೋಡ, ಗುರುರಾಜ ರಾಠೋಡ, ವಿನೋದ ಜಾಧವ, ವಿನೋದ ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…