ಕಲಬುರಗಿಯಲ್ಲಿ ಯುವ ಮತದಾರರಿಗೆ ಎಪಿಕ್ ಕಾರ್ಡ್ ವಿತರಣೆ

ಕಲಬುರಗಿ: ಕಲಬುರಗಿ ಪ್ರವಾಸದಲ್ಲಿರುವ ಕೇಂದ್ರ ಚುನಾವಣಾ ಆಯೋಗದ ಉಪ ಆಯುಕ್ತ ಅಜಯ್ ಭಾದೂ ಅವರು ಗುರುವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ಚುನಾವಣಾ ಗುರುತಿನ ಚೀಟಿ ವಿತರಿಸಿದರು.

ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಯುವ ವಿದ್ಯಾರ್ಥಿಗಳು, ವಿಕಲಚೇತನರು ಹಾಗೂ ತೃತೀಯ ಲಿಂಗಿಗಳಿಗೆ ಚುನಾವಣಾ ಗುರುತಿನ ಚೀಟಿ ವಿತರಿಸಿ, ಕಡ್ಡಾಯ ಮಾತದಾನ ಮಾಡಬೇಕು ಮತು ನಿಮ್ಮ ನೆರೆ ಹೊರೆಯವರನ್ನು, ಗೆಳೆಯರನ್ನು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಪ್ರೇರೇಪಿಸುವ ಕೆಲಸ ಮಾಡಬೇಕೆಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಭಾರತ ಚುನಾವಣಾ ಆಯೋಗದಿಂದ ಮತದಾನ ಜಾಗೃತಿ ಕುರಿತು ಸಿದ್ಧಪಡಿಸಲಾದ ಪ್ಯಾನ್ ಇಂಡಿಯಾ ವಿಡಿಯೋ ಪೆÇ್ರೀಮೋಸ್ “ಮೈ ಭಾರತ್ ಹೂಂ” ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಸಿದ್ಧಪಡಿಸಲಾದ ವಿವಿಧ ವಿಡಿಯೋ ಪೆÇ್ರೀಮಸ್‍ಗಳನ್ನು ಪ್ರಸ್ತತಪಡಿಸಲಾಯಿತು.

ಇದಲ್ಲದೆ ಕೇಂದ್ರ ಚುನಾವಣಾ ಆಯೋಗದ ಉಪ ಆಯುಕ್ತ ಅಜಯ್ ಭಾದೂ ಸೇರಿದಂತೆ ಗಣ್ಯರೆಲ್ಲರು ಇ.ವಿ.ಎಂ. ಮತ್ತು ವಿ.ವಿ.ಪ್ಯಾಟ್ ಬಳಕೆಯ ಜಾಗೃತಿ ಪೆÇೀಸ್ಟ್‍ರ್‍ಗಳನ್ನು ಸಹ ಬಿಡುಗಡೆಗೊಳಿಸಿದರು.

ರಾಜ್ಯದ ಅಪರ ಮುಖ್ಯ ಚುನಾವಣಾಧಿಕಾರಿ ರಾಜೇಂದ್ರ ಚೋಳನ್, ಜಂಟಿ ಮುಖ್ಯ ಚುನಾವಣಾಧಿಕಾರಿ ವಿ. ರಾಘವೇಂದ್ರ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್, ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಗಿರೀಶ್ ಡಿ. ಬದೋಲೆ, ಕಲಬುರಗಿ ನಗರ ಪೆÇಲೀಸ್ ಆಯುಕ್ತ ಚೇತನ ಆರ್., ಎಸ್.ಪಿ. ಇಶಾ ಪಂತ್, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಜಿ.ಪಂ. ಉಪ ಕಾರ್ಯದರ್ಶಿ ಬಿ.ಎಸ್.ರಾಠೋಡ, ಸಹಾಯಕ ಕಾರ್ಯದರ್ಶಿ ಚೆನ್ನಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮೂಳೇಗಾಂವ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವೆಂಕಟೇಶ ದೇಶಪಾಂಡೆ ಇನ್ನಿತರ ಅಧಿಕಾರಿಗಳು ಇದ್ದರು. ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಅಬ್ದುಲ್ ಅಜೀಮ್ ನಿರೂಪಿಸಿದರು.

ಬೈಕ್ ರ್ಯಾಲಿಗೆ ಚಾಲನೆ: ಇದಕ್ಕೂ ಮುನ್ನ ಡಿ.ಸಿ. ಕಚೇರಿ ಆವರಣದಲ್ಲಿ ಮತದಾನ ಜಾಗೃತಿ ಕುರಿತು ವಿಶೇಷಚೇತನರಿಂದ ಹಮ್ಮಿಕೊಂಡಿದ್ದ ತ್ರಿಚಕ್ರ ಬೈಕ್ ರ್ಯಾಲಿಗೆ ಕೇಂದ್ರ ಚುನಾವಣಾ ಆಯೋಗದ ಉಪ ಆಯುಕ್ತ ಅಜಯ್ ಭಾದೂ ಹಸಿರು ನಿಶಾನೆ ತೋರಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೊಂದಾಯಿತ ಲೋಹಿಯಾ ಕಲಾ ತಂಡ ಮತ್ತು ಶ್ರೀ ಸಾಯಿ ಜನಜಾಗೃತಿ ಕಲಾ ಸಂಘದ ಕಲಾವಿದರು ಬೀದಿ ನಾಟಕ ಮೂಲಕ ಮತದಾನ ಪಾವಿತ್ರ್ಯತೆ, ಕಡ್ಡಾಯ ಮತದಾನ ಕುರಿತು ನಾಟಕ ಪ್ರದರ್ಶಿಸಿದರು.

ನಂತರ ಕೇಂದ್ರ ಚುನಾವಣಾ ಆಯೋಗದ ಉಪ ಆಯುಕ್ತ ಅಜಯ್ ಭಾದೂ ಅವರು ಇಲ್ಲಿನ ಪ್ರಾದೇಶಿಕ ಆಯುಕ್ತರ ಸಭಾಂಗಣದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರದೇಶದ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಗಳೊಂದಿಗೆ ಸಭೆ ನಡೆಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

10 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

12 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420