ಕಲಬುರಗಿ: ಕರ್ನಾಟಕ ರಾಜ್ಯ ಸರ್ಕಾರಿ, ಅರೇ ಸರ್ಕಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕಕ್ಕೆ ಇತ್ತೀಚೆಗೆ ಹೊಸದಾಗಿ ಚುನಾಯಿತರಾದ ಪದಾಧಿಕಾರಿಗಳ ಪದಗ್ರಹಣ ಮತ್ತು 2023ನೇ ದಿನದರ್ಶಿ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಇದೇ ಫೆಬ್ರವರಿ 12 ರಂದು ಕಲಬುರಗಿ ನಗರದ ಜೆಸ್ಕಾಂ ನಿಗಮದ ಕಚೇರಿ ಆವರಣದಲ್ಲಿರುವ ಇಂಜಿನೀಯರ್ಸ್ ಅಸೋಸಿಯೇಷನ್ ಹಾಲ್ ನಲ್ಲಿ ಬೆಳಿಗ್ಗೆ 11.30 ಗಂಟೆಗೆ ಆಯೋಜಿಸಿದೆ.
ಕಲಬುರಗಿ ಬುದ್ಧ ವಿಹಾರದ ಪೂಜ್ಯ ಸಂಘಾನಂದ ಭಂತೆ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಕೆ.ಕೆ.ಆರ್.ಡಿ.ಬಿ. ಅಧೀನ ಕಾರ್ಯದರ್ಶಿ ಮಲ್ಲೇಶ್ ತಂಗಾ ಅವರು ಉದ್ಘಾಟಿಸುವರು.
ಸಣ್ಣ ನೀರಾವರಿ ಇಲಾಖೆಯ ಅಧೀಕ್ಷಕ ಅಭಿಯಂತ ಸುರೇಶ ಶರ್ಮಾ, ಲೋಕೋಪಯೋಗಿ ಇಲಾಖೆಯ ಕಲಬುರಗಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತ ಮಲ್ಲಿಕಾರ್ಜುನ ಎಂ.ಎಸ್., ಅಧೀಕ್ಷಕ ಅಭಿಯಂತ(ವಿನ್ಯಾಸ) ಮನೋಜಕುನಾರ ಗಡಬಳ್ಳಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ ಚವ್ಹಾಣ, ಎಸ್.ಸಿ.-ಎಸ್.ಟಿ. ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸೋಮಶೇಖರ ಮದನಕರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಸಂಘದ ನೂತನ ಜಿಲ್ಲಾಧ್ಯಕ್ಷ ಮಹೇಶ ಸಿ. ಹುಬಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…