ಆಳಂದ; ತಾಲೂಕಿನ ಸುಕ್ಷೇತ್ರ ಜಿಡಗಾ ದಿವ್ಯ ಶಕ್ತಿಯ ಭವ್ಯ ಪರಂಪರೆಯ ಸುಕ್ಷೇತ್ರ ನವಕಲ್ಯಾಣ ಮಠದಲ್ಲಿ ಫೆ.12 ರಂದು ಷಡಕ್ಷರಿ ಶಿವಯೋಗಿ ಸಿದ್ಧರಾಮೇಶ್ವರ 19 ನೇ ಪುಣ್ಯ ಸ್ಮರಣೆ ಹಾಗೂ ಮಹಾ ರಥೋತ್ಸವ ಜಿಡಗಾ-ಮುಗಳಕೋಡ ಮಠಗಳ ಪೀಠಾಧಿಪತಿ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಮಠದಲ್ಲಿ ಸಂಜೆ ಶಿವಾಚಾರ್ಯ ಸ್ವಾಮೀಜಿ ಅವರಿಂದ ಅಥಣಿಯ ಶಿವಯೋಗಿಗಳ ಪುರಾಣ ನಡೆಯುತ್ತಿದ್ದು, ಆಸ್ಥಾನ ಮಠದ ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯುತ್ತಿದೆ. ಫೆ. 10 ರಂದು ಅಜ್ಜನ ರೊಟ್ಟಿ ಬುತ್ತಿ ಜಾತ್ರೆ ನಡೆಯುವದು. ಫೆ. 11 ರಂದು ಡಾ. ಮುರುಘರಾಜೇಂದ್ರ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಅಯಾಚಾರ ಹಾಗೂ ಸಾಮೂಹಿಕ ಲಿಂಗ ದೀಕ್ಷೆ ಕಾರ್ಯಕ್ರಮ ಜರುಗಲಿವೆ.
12 ರಂದು ಮುಂಜಾನೆ ಸಿದ್ಧರಾಮ ಶಿವಯೋಗಿಗಳ ಜಾಗತ ಗದ್ದುಗೆಗೆ ಶ್ರೀಗಳಿಂದ ಮಹಾರುದ್ರಾಭಿಷೇಕ , ಪುಷ್ಪವಷ್ಠಿ ಬಳಿಕ ಬ್ರಹ್ಮ ವೇದಿಕೆಯಲ್ಲಿ ಶ್ರೀಗಳಿಗೆ ಭಕ್ತರಿಂದ ಸುವರ್ಣ ಕಿರೀಟ ಧಾರಣೆ ಸಿಂಹಾಸನಾರೋಹಣ, ಪಾದಪೂಜೆ ನಂತರ ಶ್ರೀಗಳಿಂದ ಆಶೀರ್ವಚನ ನೀಡಲಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…