ಕಲಬುರಗಿ: ಇದೇ ಫೆಬ್ರವರಿ 13 ರಂದು ಆಳಂದ ಶ್ರೀ ಸತ್ಯಸಾಯಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಾಜ್ಯಮಟ್ಟದ ಅಪ್ರೆಂಟಿಷಿಪ್ ಮೇಳವನ್ನು ಆಯೋಜಿಸಲಾಗಿದ್ದು, ಈ ಅಪ್ರೆಂಟಿಷಿಪ್ ಮೇಳದಲ್ಲಿ ವಿವಿಧ ಕಂಪನಿಗಳು ಭಾಗವಹಿಸಲಿವೆ ಎಂದು ಆಳಂದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಈ ಜಿಲ್ಲೆಯ ವಿವಿಧ ವೃತ್ತಿಗಳಲ್ಲಿ ಐಟಿಐ ಪಾಸಾದ ತರಬೇತಿದಾರರು ಅಪ್ರೆಂಟಿಷಿಪ್ (ಶಿಶಿಕ್ಷು) ಮೇಳದಲ್ಲಿ ಭಾಗವಹಿಸಬಹುದಾಗಿದೆ. ಐಟಿಐ ಪಾಸಾದ ಅಭ್ಯರ್ಥಿಗಳು ತಮ್ಮ ಎಸ್.ಎಸ್.ಎಲ್.ಸಿ. ಮತ್ತು ಐಟಿಐ ಪಾಸಾದ ಅಂಕಪಟ್ಟಿ, ಆಧಾರ ಕಾರ್ಡ್‍ಗಳ ನಾಲ್ಕು ಪ್ರತಿ, ಇತ್ತೀಚಿನ ಎರಡು ಭಾವಚಿತ್ರ ಹಾಗೂ ಇನ್ನಿತರ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಶಿಶಿಕ್ಷು (ಅಪ್ರೆಂಟಿಷಿಪ್) ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಅಭ್ಯರ್ಥಿಗಳು ಆಳಂದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಭೇಟಿ ನೀಡಿ ಉಚಿತವಾಗಿ ನೊಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊಬೈಲ್ ಸಂಖ್ಯೆ 9901553495, 9060608161 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…