ಕಲಬುರಗಿ,ಫೆ.12: ಸಂವಿಧಾನಬದ್ಧವಾಗಿ ನೀಡಲಾಗಿರುವ ಮೀಸಲಾತಿ ಸಂರಕ್ಷಣೆಗೆ ನೌಕರರಲ್ಲಿ ಸಂಘಟನೆ ಅವಶ್ಯಕ ಎಂದು ಸರ್ಕಾರಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ವಿಜಯಕುಮಾರ್ ಸಾಲಿಮನಿ ಅಭಿಪ್ರಾಯಪಟ್ಟರು.
ರವಿವಾರ ಕಲಬುರಗಿ ನಗರದ ಜೆಸ್ಕಾಂ ನಿಗಮದ ಕಚೇರಿ ಆವರಣದಲ್ಲಿರುವ ಇಂಜಿನೀಯರ್ಸ್ ಅಸೋಸಿಯೇಷನ್ ಹಾಲ್ ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ, ಅರೇ ಸರ್ಕಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಂಘದಿಂದ ಆಯೋಜಿಸಿದ ಕಲಬುರಗಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಶ್ರಮದಿಂದ ಕಟ್ಟಿದ ಸಂಘವನ್ನು ಕೆಲವರು ಒಡೆಯಲು ಪ್ರಯತ್ನಿಸುತ್ತಾರೆ. ಹೀಗಾಗಿ ಸಂಘದ ನೇತೃತ್ವ ವಹಿದವರು ಯಾವುದೇ ಆಸೆ, ಆಮೀಷಕ್ಕೆ ಒಳಗಾಗದೆ ಸಂಘ ಮತ್ತು ನೌಕರರ ಉನ್ನತ್ತಿಗೆ ಶ್ರಮಿಸಬೇಕು ಎಂದು ಕರೆ ನೀಡಿದ ಅವರು, ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು.
ಕಾರ್ಯಕ್ರಮದದಿವ್ಯ ಸಾನಿಧ್ಯ ವಹಿಸಿದ್ದ ಕಲಬುರಗಿ ಬುದ್ಧ ವಿಹಾರದ ಪೂಜ್ಯ ಸಂಘಾನಂದ ಭಂತೆಜಿ ಅವರು ಧಮ್ಮವಂದನೆಯೊಂದಿಗೆ ಮಾತು ಆರಂಭಿಸಿ, ನೂತನ ಚುನಾಯಿತ ಪದಾಧಿಕಾರಿಗಳು ಹೊಸ ಚೈತನ್ಯದಿಂದ ಜಿಲ್ಲೆಯ ನೌಕರರ ಮತ್ತು ಸಮುದಾಯದ ಉನ್ನತ್ತಿಗೆ ಶ್ರಮಿಸಬೇಕು ಎಂದು ಆಶೀರ್ವಚನ ನೀಡಿದರು. ಕೆ.ಕೆ.ಆರ್.ಡಿ.ಬಿ. ಅಧೀನ ಕಾರ್ಯದರ್ಶಿ ಮಲ್ಲೇಶ್ ತಂಗಾ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ 2023ನೇ ದಿನದರ್ಶಿ ಕ್ಯಾಲೆಂಡರ್ ಪೂಜ್ಯ ಸಂಗಾನಂದ ಭಂತೇಜಿ ಸೇರಿದಂತೆ ಗಣ್ಯರು ಬಿಡುಗಡೆಗೊಳಿಸಿದರು.
ಜಿಲ್ಲಾಧ್ಯಕ್ಷ ಮಹೇಶ ಸಿ. ಹುಬಳ್ಳಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧೀಕ್ಷಕ ಅಭಿಯಂತ ಸುರೇಶ ಶರ್ಮಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ ಚವ್ಹಾಣ, ಎಸ್.ಸಿ.-ಎಸ್.ಟಿ. ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸೋಮಶೇಖರ ಮದನಕರ್, ಗ್ರೇಡ್ 2 ತಹಶೀಲ್ದಾರ ರಮೇಶ ಆಲೂರ, ಉಪ ತಹಶೀಲ್ದಾರರಾದ ದೇವಮ್ಮ , ಶಿವಕಾಂತಮ್ಮ ಸೇರಿದಂತೆ ಸಂಘದ ಪದಾಧಿಕಾರಿಗಳಾದ ಗಣಪತಿ ಬಬಲಾದ, ಶಿವಾನಂದ ಟೋಳೆ, ಸದಾಶಿವ ಹಾಗರಗಿ, ಸದಾಶಿವ ರಾತ್ರಿಕರ್ ಹಾಗೂ ನೂರಾರು ಸಂಖ್ಯೆಯಲ್ಲಿ ನೌಕರರು ಭಾಗವಹಿಸಿದ್ದರು.
ಹಿರಿಯ ಉಪಾಧ್ಯಕ್ಷ ವಿಠ್ಠಲ ಗೋಳಾ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘ ಇದೂವರೆಗೆ ಸಾಗಿ ಬಂದ ಹಾದಿಯನ್ನು ಸಂಕ್ಷಿಪ್ತವಾಗಿ ವಿವರಿಸಿದರು. ಜಿಲ್ಲಾ ಕಾರ್ಯದರ್ಶಿ ಡಾ.ಪಂಡಿತ್ ಬಿ.ಕೆ. ಸ್ವಾಗತಿಸಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿದ್ಯಾಧರ ಕಾಂಬಳೆ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಸಂತೋಷಕುಮಾರ ಆರ್.ಕೆ. ವಂದಿಸಿದರು.
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…