ಕಲಬುರಗಿ: ರೈಲ್ವೇ ಸೌಲಭ್ಯಗಳಿಗಾಗಿ ಆಗ್ರಹಿಸಿ ಫೆ. 13 ರಂದು ಕಲಬುರಗಿಯ ರೈಲ್ವೇ ನಿಲ್ದಾಣದ ಆವರಣದಲ್ಲಿ ಪ್ರತಿಭಟನಾ ಪ್ರದರ್ಶನ ಹಮ್ಮಿಕೊಳ್ಳಲಾಗುವುದೆಂದು ಎಸ್‍ಯುಸಿಐ(ಸಿ) ಕಾರ್ಯದರ್ಶಿ ಗಣಪತರಾವ ಮಾನೆ ಪ್ರತಿಕಾ ಹೇಳಿಕೆ ನೀಡಿದ್ದಾರೆ.
ಕಲಬುರಗಿ ನಗರವು ವಿಭಾಗೀಯ ಕೇಂದ್ರವಾಗಿದ್ದು, ಒಂದು ವಾಣಿಜ್ಯ ನಗರವಾಗಿ ಬೆಳೆಯುತ್ತಿದೆ. ಕಲಬುರಗಿಯಿಂದ ದಿನಾಲು ವಿವಿಧ ಊರುಗಳಿಗೆ ಹಾಗೂ ಪ್ರಮುಖವಾಗಿ ಬೆಂಗಳೂರಿಗೆ ಸಾವಿರಾರು ನಾಗರಿಕರು ಪ್ರಯಾಣ ಮಾಡುತ್ತಾರೆ. ಸುಮಾರು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕಾಗಿ, ವ್ಯಾಪಾರಸ್ಥರು ತಮ್ಮ ವ್ಯಾಪಾರಕ್ಕಾಗಿ, ಉದ್ಯೋಗಸ್ಥರು ತಮ್ಮ ಕೆಲಸಕ್ಕಾಗಿ ಬೆಂಗಳೂರಿಗೆ ಹೋಗುತ್ತಾರೆ. ಆದರೆ ಅವರಿಗೆ ಅವಶ್ಯಕತೆಗೆ ತಕ್ಕಂತೆ ರೈಲುಗಳು ಇಲ್ಲದಿರುವುದು ಒಂದು ದುರಂತವೇ ಸರಿ. ಅದಕ್ಕಾಗಿ ವಿಭಾಗೀಯ ಕೇಂದ್ರವಾದ ಕಲಬುರಗಿಯಿಂದ ಬೆಂಗಳೂರಿಗೆ ಒಂದು ಫಾಸ್ಟ್ ಪ್ಯಾಸೆಂಜರ್ ಟ್ರೇನ್ ಪ್ರಾರಂಭಿಸಿದರೆ ಕಲಬುರಗಿ ಜಿಲ್ಲೆಯ ಸಾವಿರಾರು ನಾಗರಿಕರಿಗೆ ಅನುಕೂಲವಾಗುತ್ತದೆ.
ಕಲಬುರಗಿ ರೈಲು ನಿಲ್ದಾಣ ಶಹಾಬಾದ ರೈಲು ನಿಲ್ದಾಣ ಹಾಗೂ ವಾಡಿ ರೈಲು ನಿಲ್ದಾಣಗಳಲ್ಲಿ ಮೂಲ ಸೌಕರ್ಯದ ಕೊರತೆ ಇರುವುದರಿಂದ ಅಲ್ಲಿ ಮಹಿಳೆಯರಿಗೆ ವಿಶ್ರಾಂತಿ ಕೊಠಡಿ ಇದ್ದರೂ ಅದನ್ನು ಉಪಯೋಗಕ್ಕೆ ಬಳಸುವಂತಿಲ್ಲ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಶೌಚಾಲಯದ ವ್ಯವಸ್ಥೆ ಇಲ್ಲ. ಈ ಎಲ್ಲಾ ಸಮಸ್ಯೆಗಳನ್ನು ರೈಲ್ವೇ ಉನ್ನತ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡುವ ಸಂಬಂಧ ಫೆ.13 ರಂದು ಕಲಬುರಗಿ ರೈಲು ನಿಲ್ದಾಣದ ಎದುರುಗಡೆ ಪ್ರತಿಭಟನೆ ಚಳುವಳಿಯನ್ನು ನಡೆಸಲಾಗುತ್ತಿದೆ. ಕಲಬುರಗಿ ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಕಲಬುರಗಿ ಜಿಲ್ಲಾ ಸಮಿತಿಯು ಮನವಿ ಮಾಡಿಕೊಳ್ಳುತ್ತದೆ. ವಿವಿಧ ಬೇಡಿಕೆಗಳಾದಕಲಬುರಗಿಯಿಂದ ಬೆಂಗಳೂರಿಗೆ ಒಂದು ಫಾಸ್ಟ್ ಪ್ಯಾಸೆಂಜರ್ ಪ್ರಾರಂಭಿಸಿ.
ಕಲಬುರಗಿ ರೈಲ್ವೇ ವಿಭಾಗೀಯ ಕೇಂದ್ರದ ಕಾರ್ಯಗಳನ್ನು ಕೂಡಲೇ ಪ್ರಾರಂಭಿಸಿ. ಕರೋನಾಕ್ಕಿಂತ ಮುಂಚೆ ನಿಲ್ಲಿಸುತ್ತಿದ್ದ ಎಲ್ಲಾ ರೈಲುಗಳನ್ನು ಶಹಾಬಾದ ರೈಲು ನಿಲ್ದಾಣದಲ್ಲಿ ನಿಲ್ಲಿಸಿ.ಕರೋನಾ ನೆಪದಿಂದ ರದ್ದುಗೊಳಿಸಿರುವ ಎಲ್ಲಾ ರೈಲುಗಳನ್ನು ಪುನ: ಪ್ರಾರಂಬಿಸಬೇಕು.
ಪ್ಯಾಸೆಂಜರ್ ರೈಲುಗಳಿಗೆ ಎಕ್ಸ್ ಪ್ರೆಸ್ ರೈಲುಗಳ ದರ ತೆಗೆದುಕೊಳ್ಳುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು.ಕಲಬುರಗಿ ಜಿಲ್ಲೆಯಲ್ಲಿರುವ ಎಲ್ಲಾ ರೈಲು ನಿಲ್ದಾಣಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕು.ಉದ್ಯಾನ್ ಎಕ್ಸ್‍ಪ್ರೆಸ್, ಸೋಲಾಪುರ ಹಾಸನ ಎಕ್ಸ್‍ಪ್ರೆಸ್, ಬಾಗಲಕೋಟೆ ಯಶವಂತಪುರ ಬಸವ ಎಕ್ಸ್‍ಪ್ರೆಸ್ ರೈಲುಗಳಿಗೆ ಸಾಮಾನ್ಯ ದರ್ಜೆಯ ಬೋಗಿಗಳನ್ನು ಹೆಚ್ಚಿಸಬೇಕೆಂದು ಆಗ್ರಹವಾಗಿದೆ.
ಕಲಬುರಗಿ: ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ ಕಾರ್ಯಕ್ರಮ ವನ್ನು ಸವಿಧಾನ ಪ್ರತಿಯನ್ನು ಓದುವ ಮೂಲಕ ಸವಿಧಾನ ಶಿಲ್ಪಿ…
ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು ಜಯ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…
ಚಿಂಚೋಳಿ: ತಾಲೂಕಿನ ಸಾಲೆಬೀರನಳ್ಳಿ ಗ್ರಾಮದ ನೀವೃತ ಮುಖ್ಯಗುರುಗಳಾದ ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್ (86) ಮಂಗಳವಾರ ನಿಧನರಾದರು. ಅವರಿಗೆ…
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…