ಸುರಪುರ:ತಾಲೂಕಿನ ಜಾಲಿಬೆಂಚಿ ಗ್ರಾಮಕ್ಕೆ ಶಾಸಕ ರಾಜುಗೌಡ ಭೇಟಿ ನೀಡಿದರು.ಗ್ರಾಮದಲ್ಲಿ ಕಳೆದ ಕೆಲ ದಿನಗಳ ಹಿಂದೆ ಮೂತ್ರಪಿಂಡ ವೈಫಲ್ಯ ದಿಂದ ಮೃತಪಟ್ಟ ರಾಚಪ್ಪ ಕುಂಬಾರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದರು.
ಅಲ್ಲದೆ ಮೃತನ ಕುಟುಂಬಕ್ಕೆ ಆರ್ಥಿಕ ನೆರವಾಗಿ ವೈಯಕ್ತಿಕವಾಗಿ 1 ಲಕ್ಷ ರೂಪಾಯಿಗಳನ್ನು ನೀಡುವ ಮೂಲಕ ಮಾನವೀಯತೆ ಮೆರೆದರು.ಶಾಸಕರ ಈ ಕಾರ್ಯಕ್ಕೆ ಗ್ರಾಮದ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ),ಶಂಕರ ನಾಯಕ,ಶ್ರೀನಿವಾಸ ನಾಯಕ ದರಬಾರಿ ಸೇರಿದಂತೆ ಸ್ಥಳಿಯ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಮತ್ತು ರಾಜುಗೌಡ ಅವರ ಅಭಿಮಾನಿಗಳು ಭಾಗವಹಿಸಿದ್ದರು.