ಬಿಸಿ ಬಿಸಿ ಸುದ್ದಿ

ಜೀತ ಪದ್ದತಿಯ ನಿರ್ಮೂಲನೆಗೆ ಸಹಕಾರ ಅಗತ್ಯ

ಕಲಬುರಗಿ:ಬ್ರಿಟಿಷರ ಆಡಳಿತ, ಬಡತನ, ಅನಕ್ಷರತೆಯಂತಹ ಕಾರಣಗಳಿಂದ ದಾರಿದ್ರ್ಯ ಉಂಟಾಗುವ ಮೂಲಕ ತುಂಬಾ ಕಷ್ಟವನ್ನು ಎದುರಿಸುವ ಸಂದರ್ಭ ಉಂಟಾಗಿ ಜೀತದಾಳಾಗಿ ದುಡಿಯುವದು ಆರಂಭವಾಯಿತು. ಬಡವರನ್ನು ಶೋಷಣೆ ಮಾಡುವ ಜೀತ ಪದ್ಧತಿಯು ಅಮಾನವೀಯ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ಅದರ ನಿರ್ಮೂಲನಗೆ 1976ರಲ್ಲಿ ಸರ್ಕಾರ ಕಾಯ್ದೆಯನ್ನು ಜಾರಿಗೊಳಿಸಿದ್ದು, ಅದರ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ.ಪಾಟೀಲ ಅಭಿಪ್ರಾಯಪಟ್ಟರು.

ಅವರು ಜಿಲ್ಲೆಯ ಝಾಪೂರ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶುಕ್ರವಾರ ಏರ್ಪಡಿಸಲಾಗಿದ್ದ ‘ರಾಷ್ಟ್ರೀಯ ಜೀತ ಪದ್ದತಿಯ ನಿರ್ಮೂಲನೆ ದಿನಾಚರಣೆ’ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಜೀತ ಪದ್ಧತಿಯು ವ್ಯಕ್ತಿಯನ್ನು ಹಿಂಸಿಸುವ ಕೆಟ್ಟ ಪದ್ಧತಿಯಾಗಿದೆ. ಬಡವರು, ಅಸಹಾಯಕರು ಶ್ರೀಮಂತರ ತುತ್ತಾಗುತ್ತಿರುವುದು ನೋವಿನ ಸಂಗತಿ. ಜೀತದಾಳುಗಳಿಗೆ ಸಾಲಮುಕ್ತ ಮಾಡಿ, ಅವರಿಗೆ ಸೌಲಭ್ಯಗಳನ್ನು ನೀಡಲು ಕಾಯ್ದೆ-ಕಾನೂನುಗಳಲ್ಲಿ ಅವಕಾಶವಿದೆ. ಜೀತ ವಿಮುಕ್ತಿ ಹೊಂದಿದವರಿಗೆ ದೊರೆಯುವ ಸರ್ಕಾರದ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ, ಅವುಗಳನ್ನು ದೊರಕಿಸಿಕೊಡುವ ಕಾರ್ಯ ಪರಿಣಾಮಕಾರಿಯಾಗಿ ಜರುಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಶಾಲೆಯ ಮುಖ್ಯ ಶಿಕ್ಷಕ ದೇವೆಂದ್ರಪ್ಪ ಗಣಮುಖಿ ಮಾತನಾಡಿ, ಶ್ರಮಿಕ ವರ್ಗದ ಬಗ್ಗೆ ಕೀಳರಿಮೆ ಬೇಡ. ದುಡಿಯುವ ವರ್ಗ ಕನಿಷ್ಟ ಮತ್ತು ದುಡಿಸಕೊಳ್ಳುವ ವರ್ಗ ಶ್ರೇಷ್ಟವೆಂಬ ಮನೋಭಾವನೆ ಸಂಪೂರ್ಣ ಹೋಗಬೇಕಾಗಿದೆ. ಕಾಯಕ ಸಂಸ್ಕøತಿಗೆ ಉನ್ನತವಾದ ಗೌರವ ನೀಡಿದ ಬಸವಾದಿ ಶರಣರ ಕೊಡುಗೆ ನಾವೆಂದಿಗೂ ಮರೆಯುವಂತಿಲ್ಲವೆಂದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ ಮಾಂಗ್, ಗ್ರಾ.ಪಂ.ಸದಸ್ಯರಾದ ಪೀರಪ್ಪ ದೊಡ್ಡಮನಿ, ಮಲ್ಲಮ್ಮ ಪೂಜಾರಿ, ಶಿಕ್ಷಣಪ್ರೇಮಿ ನಾಗನಗೌಡ್ ಪಾಟೀಲ, ಪ್ರಮುಖರಾದ ಅಣ್ಣಾರಾಯ ಪೂಜಾರಿ, ನಾಗರಾಜ ನಾಟಿಕಾರ, ಜೈಭೀಮ ಸರಡಗಿ, ಅರುಣಕುಮಾರ ಕಟ್ಟಿಮನಿ, ಹಣಮಂತ್ ನಾಯ್ಕೋಡಿ, ಸಾಯಬಣ್ಣ ಹೊಸಮನಿ, ಭೀಮರಾಯ ನಾಟಿಕಾರ್, ಶಿವಯೋಗಿ ಹೊಸಮನಿ, ರಾಹುಲ್ ನಾಯ್ಕೋಡಿ, ಶಾಂತಾಬಾಯಿ ಹಿರೇಮಠ, ವೀರವ್ವ ಹಿರೆಕೆನ್ನೂರ್, ಲಕ್ಕುನಾಯಕ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

4 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

14 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

14 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

17 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

17 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

17 hours ago