ಕಲಬುರಗಿ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಇದೇ ಫೆಬ್ರವರಿ 16 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸದರಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳ ವಿವರ ಇಂತಿವೆ. ಕಲಬುರಗಿಯ ಹೆಚ್.ಸಿ.ಎಲ್. ಟೆಕ್ನಾಲಜಿಯಲ್ಲಿ ಟೇಲಿ ಕಾಲರ್ ಹುದ್ದೆಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 26 ವರ್ಷದೊಳಗಿರಬೇಕು. ಲಾಹೋಟಿ ಮೋಟರ್ಸ್ ಪ್ರೈ.ಲೀ.ದಲ್ಲಿ ಎಕ್ಸಿಕ್ಯೂಟಿವ್ ಇನ್ ಸೇಲ್ಸ್ ಅಕೌಂಟ್ಸ್ ಆಂಡ್ ಇನ್ಸುರೆನ್ಸ್ ಹುದ್ದೆಗೆ ಡಿಪ್ಲೋಮಾ/ ಬಿ.ಇ./ಬಿ.ಕಾಂ./ಬಿ.ಎಸ್ಸಿ./ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35ವರ್ಷದೊಳಗಿರಬೇಕು.
ಕಲಬುರಗಿ ಕುಮಾರಕಿಯಾ ಮೋಟರ್ಸ್ದಲ್ಲಿ ಟೇಲಿ ಕಾಲರ್ ಮತ್ತು ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಜಿ.ಎಸ್.ಎಫ್.ಎಮ್. ಸೆಕ್ಯೂರಿಟಿದಲ್ಲಿ ಸೆಕ್ಯೂರಿಟಿಗಾರ್ಡ್ ಹುದ್ದೆಗೆ ಎಸ್.ಎಸ್.ಎಲ್.ಸಿ, ಪಿ.ಯು.ಸಿ / ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 20 ರಿಂದ 35 ವರ್ಷದೊಳಗಿರಬೇಕು. ಕ್ರೆಡಿಟ್ ಎಕ್ಸಾಗ್ರಾಮೀಣ ಲೀ.ದಲ್ಲಿ ರಿಲೇಶನ್ಶೀಫ್ ಆಫೀಸರ್ ಹುದ್ದೆಗೆ ಪಿ.ಯು.ಸಿ. / ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 26 ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆಟಾ), ಇತ್ತೀಚನ ಭಾವಚಿತ್ರ ಹಾಗೂ ಆಧಾರ್ ಕಾರ್ಡ್ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಉದ್ಯೋಗ ಮೇಳದಲ್ಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು.
ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…