ಹಿರಿಯ ನಾಗರೀಕರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧ; ಸಚಿವ ಕೋಟಾ ಶ್ರೀನಿವಾಸ ಪೂಜಾರಿ

0
10

ಬೆಂಗಳೂರು; ರಾಜ್ಯದ ಹಿರಿಯ ನಾಗರಿಕರಿಗೆ ಸಕಾಲದಲ್ಲಿ ಸೂಕ್ತ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ದವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ, ಹಿರಿಯ ನಾಗರೀಕರ ಸಬಲೀಕರಣ ಸಚಿವರ ಪರವಾಗಿ ಉತ್ತರಿಸಿದ ಸಚಿವರು ಹಿರಿಯ ನಾಗರಿಕರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಿರಿಯ ನಾಗರಿಕರ ನೀತಿಯನ್ನು ರೂಪಿಸಿದೆ. ಅದರಂತೆ ಈ ಹಿರಿಯ ನಾಗರಿಕರ ನೀತಿಯನುಸಾರ, ಸರ್ಕಾರವು ಹಿರಿಯ ನಾಗರಿಕರಿಗೆ ಸಾಮಾಜಿಕ ಭದ್ರತೆ, ಆರೋಗ್ಯ ಆಸ್ತಿ ಸಂರಕ್ಷಣೆ ಕ್ಷೇಮಾಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಅನುμÁ್ಠನಗೊಳಿಸುತ್ತಿದೆ.

Contact Your\'s Advertisement; 9902492681

ತಂದೆ, ತಾಯಿಯರ ಮತ್ತು ಹಿರಿಯ ನಾಗರಿಕರ ಪಾಲನೆ-ಪೆÇೀಷಣೆ ಮತ್ತು ಕಲ್ಯಾಣ ಅಧಿನಿಯಮ 2007 ಜಾರಿಗೊಳಿಸಿದೆ:
ರಾಜ್ಯದಲ್ಲಿ ತಂದೆ ತಾಯಿಯರ, ಮತ್ತು ಹಿರಿಯ ನಾಗರಿಕರ ಪಾಲನೆ ಪೆÇೀಷಣೆ ಮತ್ತು ಕಲ್ಯಾಣ ಅಧಿನಿಯಮ 2007ನ್ನು ಜಾರಿಗೊಳಿಸಲಾಗಿದೆ. ದೌರ್ಜನ್ಯ, ಶೋಷಣೆ, ವಂಚನೆಗೊಳಗಾದ ಹಾಗೂ ನಿರ್ವಹಣಾ ವೆಚ್ಚದ ಅಗತ್ಯವಿರುವ ಹಿರಿಯ ನಾಗರಿಕರು ನ್ಯಾಯಕ್ಕಾಗಿ ಈ ಅಧಿನಿಯಮದ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿತವಾದ ನಿರ್ವಹಣಾ ನ್ಯಾಯಮಂಡಳಿಯಲ್ಲಿ ವ್ಯಾಜ್ಯಗಳನ್ನು ಹೂಡಬಹುದಾಗಿದ್ದು, ಅರ್ಜಿ ಸಲ್ಲಿಸಿದ 90 ದಿನಗಳ ಒಳಗಾಗಿ ನ್ಯಾಯ ಪಡೆಯಬಹುದಾಗಿರುತ್ತದೆ. ಅಸಾಧಾರಣ ಸಂದರ್ಭಗಳಲ್ಲಿ ನಿರ್ವಹಣಾ ನ್ಯಾಯಮಂಡಳಿಯು ಲಿಖಿತವಾಗಿ ದಾಖಲಿಸಿ, ಒಂದು ಬಾರಿ ಗಂಷ್ಟ 30 ದಿನಗಳಿಗೆ ಈ ಅವಧಿಯನ್ನು ವಿಸ್ತರಿಸಬಹುದಾಗಿದೆ.

ನಿರ್ವಹಣಾ ನ್ಯಾಯ ಮಂಡಳಿಯ ತೀರ್ಪಿನ ವಿರುದ್ಧ ಹಿರಿಯ ನಾಗರಿಕರು 60 ದಿನಗಳ ಒಳಗಾಗಿ ಮೇಲ್ಮನವಿ ನ್ಯಾಯ ಮಂಡಳಿಯಲ್ಲಿ ಆಪೀಲನ್ನು ಸಲ್ಲಿಸಬಹುದಾಗಿದೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿತವಾದ ಮೇಲ್ಮನವಿ ನ್ಯಾಯಮಂಡಳಿಯು ಅಪೀಲು ಸ್ವೀಕರಿಸಿದ ಒಂದು ತಿಂಗಳ ಒಳಗಾಗಿ ವ್ಯಾಜ್ಯವನ್ನು ಪೂರ್ಣಗೊಳಿಸಬೇಕೆಂಬ ನಿಯಮವಿರುತ್ತದೆ ಎಂದು ತಿಳಿಸಿದರು.

ಹಿರಿಯ ನಾಗರಿಕರ ವೃದ್ಧಾಶ್ರಮ: ರಾಜ್ಯದ 30 ಜಿಲ್ಲೆಗಳಲ್ಲಿ ನಿರ್ಗತಿಕ ಹಿರಿಯ ನಾಗರಿಕರಿಗಾಗಿ ವೃದ್ಧಾಶ್ರಮಗಳನ್ನು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸಲಾಗುತ್ತಿದ್ದು, ಈ ವೃದ್ಧಾಶ್ರಮದಲ್ಲಿ 25 ನಿರ್ಗತಿಕ ಹಿರಿಯ ನಾಗರಿಕರನ್ನು ದಾಖಲಿಸಿಕೊಳ್ಳಲು ಆವಕಾಶವಿದ್ದು, ಒಂದು ವೃದ್ಧಾಶ್ರಮದ ನಿರ್ವಹಣೆಗಾಗಿ ವಾರ್ಷಿಕ ರೂ.12.00 ಲಕ್ಷಗಳ ಅನುದಾನವನ್ನು ಸಿಬ್ಬಂದಿ ವೆಚ್ಚ, ನಿರ್ವಹಣಾ ವೆಚ್ಚ, ಔಷಧಿ, ಕಟ್ಟಡ: ಬಾಡಿಗೆ, ವೃತ್ತ ಪತ್ರಿಕೆ ಹಾಗೂ ಇತರೆ ವೆಚ್ಚಗಳಿಗಾಗಿ ಬಿಡುಗಡೆ ಮಾಡಲಾಗುತ್ತಿದೆ. ಅನುದಾನವನ್ನು ಜಿಲ್ಲಾ ಪಂಚಾಯತ್ ಮೂಲಕ ಮಾಡಲಾಗುತ್ತಿದೆ. ರಾಜ್ಯದ ಪ್ರತಿ ಕಂದಾಯ ಉಪ ವಿಭಾಗದಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ವೃದ್ಧಾಶ್ರಮಗಳನ್ನು ಪ್ರಾರಂಭಿಸಲಾಗುತ್ತಿದೆ. ಪ್ರಸ್ತುತ 9 ಕಂದಾಯ ಉಪ ವಿಭಾಗಗಳಲ್ಲಿ ವೃದ್ಧಾಶ್ರಮಗಳನ್ನು ನಡೆಸಲಾಗುತ್ತಿದೆ.

ಹಿರಿಯ ನಾಗರಿಕರ ಮಾಸಿಕ ಶೋಷಣಾ ಭತ್ಯೆ : ಹಿರಿಯ ನಾಗರಿಕರ ಸಾಮಾಜಿಕ ಭದ್ರತೆಗಾಗಿ ಬಡತನ ರೇಖೆಗಿಂತ ಕೆಳಗಿರುವ ನಿರ್ಗತಿಕ ಹಿರಿಯ ನಾಗರಿಕರಿಗೆ ಸಂಧ್ಯಾ ಸುರಕ್ಷಾ ಮತ್ತು ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಮಾಸಿಕ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಸದರಿ ಯೋಜನೆಯಡಿ 60 ರಿಂದ 64 ವರ್ಷದ ವೃದ್ಧರಿಗೆ ಮಾಸಿಕ ರೂ.600/- ರಷ್ಟು ಹಾಗೂ 65 ಮತ್ತು ಅದಕ್ಕಿಂತ ಮೇಲ್ಪಟ್ಟ ವೃದ್ಧರಿಗೆ ರೂ.1200/-ಗಳನ್ನು ಮಾಸಿಕ ವೃದ್ಧಾಪ್ಯ ವೇತನವನ್ನು ನೀಡಲಾಗುತ್ತಿದೆ. ಈ ಯೋಜನೆಯ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಇಲಾಖೆ ಅನುμÁ್ಠನಗೊಳಿಸಲಾಗುತ್ತಿದೆ. ಡಿಸೆಂಬರ್-2022ರ ಮಾಹೆಯ ಅಂತ್ಯಕ್ಕೆ ಒಟ್ಟು 18,00,316 ವೃದ್ಧರು ಈ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ.

ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ಯೋಜನೆ: 60 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಸೇವಾ ಸಿಂಧು ಪೆÇೀರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ ಗುರುತಿನ ಚೀಟಿಗಳನ್ನು ಪಡೆಯಬಹುದಾಗಿದೆ. ಹಾಗೂ ಗುರುತಿನ ಚೀಟಿಯಿಂದ ಹಿರಿಯ ನಾಗರಿಕರಿಗಾಗಿ ಇರುವ ಸೇವಾ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

ರಾಜ್ಯ ಹಿರಿಯ ನಾಗರಿಕರ ಸಹಾಯವಾಣಿ: ಹಿರಿಯ ನಾಗರಿಕರಿಗೆ ಕಿರುಕುಳ, ಹಣಕಾಸಿನ ಶೋಷಣೆ, ಮಾನಸಿಕ ತುಮುಲ ಮತ್ತು ದುರ್ಬಲ, ಇಂತಹ ಅನೇಕ ಸಮಸ್ಯೆಗಳ ನಿವಾರಣೆಗಾಗಿ ತುರ್ತು ಸಹಾಯಕ್ಕಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರಗಳನ್ನು ಆಯಾ ಜಿಲ್ಲೆಯ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಗಳ ಕಛೇರಿ ಆವರಣದಲ್ಲಿ, ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಿಂದ ರಾಜ್ಯದ 30 ಜಿಲ್ಲೆಗಳಲ್ಲಿ ಮಂಜೂರಾತಿ ನೀಡಲಾಗಿದ್ದು, ಪ್ರಸ್ತುತ 26 ಜಿಲ್ಲೆಗಳಲ್ಲಿ ಸಹಾಯವಾಣಿಯನ್ನು ನಡೆಸಲಾಗುತ್ತಿದೆ. (ಟೋಲ್ ಫ್ರೀ ನಂಬರ್ 1090)

ಹಿರಿಯ ನಾಗರಿಕರ ರಾಷ್ಟ್ರೀಯ ಸಹಾಯವಾಣಿ: ಉನ್ನತ ತಂತ್ರಜ್ಞಾನ ಹೊಂದಿರುವ ಹಿರಿಯ ನಾಗರಿಕರ ರಾಷ್ಟ್ರೀಯ ಸಹಾಯವಾಣಿ ಸಂಖ್ಯೆ: 14567 (ಟೋಲ್ ಸಂಖ್ಯೆ)ನ್ನು 2021-22ನೇ ಸಾಲಿನಿಂದ ಪಾರಂಭಿಸಲಾಗಿದೆ. ಹಿರಿಯ ನಾಗರಿಕರು ಕಿರುಕುಳ, ಹಣಕಾಸಿನ ಶೋಷಣೆ, ಮಾನಸಿಕ ತುಮುಲ ಮತ್ತು ದುರ್ಬಲ ಇಂತಹ ಅನೇಕ ಸಮಸ್ಯೆಗಳ ನಿವಾರಣೆಗಾಗಿ ತುರ್ತು ಸಹಾಯಕ್ಕಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ.

ಹಗಲು ಯೋಗಕ್ಷೇಮ ಕೇಂದ್ರಗಳು: ರಾಜ್ಯದ 30 ಜಿಲ್ಲೆಗಳಿಗೆ ಹಗಲು ಯೋಗಕ್ಷೇಮ ಕೇಂದ್ರಗಳನ್ನು ಸ್ವಯಂ ಸೇವಾ ಸಂಸ್ಥೆಗಳ ಮುಖಾಂತರ ನಡೆಸಲಾಗುತ್ತಿದ್ದು, ಪ್ರಸ್ತುತ 25 ಜಿಲ್ಲೆಗಳಲ್ಲಿ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರಗಳು ನಡೆಯುತ್ತಿವೆ. ಪ್ರತಿ ಕೇಂದ್ರದಲ್ಲಿ ಸುಮಾರು 50-150 ಫಲಾನುಭವಿಗಳಿರುತ್ತಾರೆ. ಈ ಕೇಂದ್ರಗಳಲ್ಲಿ ಹಿರಿಯ ನಾಗರಿಕರ ತಮ್ಮ ವಿಶ್ರಾಂತ ವೇಳೆಯನ್ನು ಉಪಯುಕ್ತ ಕಾರ್ಯಚಟುವಟಿಕೆಗಳಿಗೆ ಉಪಯೋಗಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ.

ಜೀರಿಯಾಟ್ರಿಕ್ ಕೇಂದ್ರಗಳು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 10 ಜಿಲ್ಲೆಗಳಲ್ಲಿ (ಶಿವಮೊಗ್ಗ, ಕೋಲಾರ, ಉಡುಪಿ, ತುಮಕೂರು, ಚಿಕ್ಕಮಗಳೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ವಿಜಯಪುರ, ಕಲಬುರಗಿ) ಜಿಲ್ಲಾಸ್ಪತ್ರೆಗಳಲ್ಲಿ, ಹಿರಿಯ ನಾಗರಿಕರಿಗಾಗಿ ಜೇರಿಯಾಟ್ರಿಕ್ ಕೇಂದ್ರಗಳನ್ನು ನಡೆಸಲಾಗುತ್ತಿದೆ. ಸದರಿ ಕೇಂದ್ರಗಳಲ್ಲಿ ಉಚಿತ / ವೈದ್ಯಕೀಯ ಸೌಲಭ್ಯ ಹಾಗೂ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ.

ರಾಜ್ಯ ಸಾರಿಗೆ ಬಸ್ ಪ್ರಯಾಣದರದಲ್ಲಿ ಶೇ.25 ರಷ್ಟು ರಿಯಾಯಿತಿ: ಹಿರಿಯ ನಾಗರಿಕರಿಗೆ ಅವರು ಪ್ರಯಾಣಿಸುವಾಗ ಬಸ್ ಪ್ರಯಾಣ ದರದಲ್ಲಿ ಶೇ.25 ರಷ್ಟು ರಿಯಾಯಿತಿಯನ್ನು ನೀಡಲಾಗುತ್ತಿದೆ, ಬಸ್‍ಗಳಲ್ಲಿ ಹಿರಿಯ ನಾಗರಿಕರಿಗೆ 2 ಆಸನಗಳನ್ನು ಮೀಸಲಿರಿಸಿದೆ. ಕೇಂದ್ರ ಸಕಾರವು ಸಹ ಹಿರಿಯ ನಾಗರಿಕರಿಗೆ ರೈಲ್ವೇ ಪ್ರಯಾಣ ದರದಲ್ಲಿ ಶೇಕಡ 30 ರಷ್ಟು ರಿಯಾಯಿತಿಯನ್ನು ನೀಡಲಾಗುತ್ತಿದೆ.

ಕೇಂದ್ರ ಸರ್ಕಾರವು ಸಹ ಸ್ವಯಂ ಸೇವಾ ಸಂಸ್ಥೆಗಳ ಮುಖಾಂತರ ಹಿರಿಯ ನಾಗರಿಕರಿಗಾಗಿ ವೃದ್ಧಾಶ್ರಮ, ಹಗಲು ಯೋಗಕ್ಷೇಮ ಕೇಂದ್ರ ಸಹಾಯವಾಣಿ ಮೊಬೈಲ್ ಮೆಡಿಕೇರ್ ಸೆಂಟರ್‍ಗಳನ್ನು ರಾಜ್ಯದಲ್ಲಿ ನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here