ಹೈದರಾಬಾದ್ ಕರ್ನಾಟಕ

ಸತತ ಪರಿಶ್ರಮದಿಂದ ಅಭ್ಯಾಸ ಮಾಡಿದರೆ ಗುರಿ ಮುಟ್ಟಲು ಸಾಧ್ಯ

ಕಲಬುರಗಿ:ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಲಿಕಾ ಮನೋಭಾವವನ್ನಿಟ್ಟುಕೊಂಡು ಹೆಚ್ಚು ಹೆಚ್ಚು ವಿಷಯಗಳನ್ನು ಸತತ ಪರಿಶ್ರಮದಿಂದ ಅಭ್ಯಾಸ ಮಾಡಿದರೆ ಮಾತ್ರ ನಿರ್ದಿಷ್ಟ ಗುರಿ ಮುಟ್ಟಲು ಸಾಧ್ಯ ಅಂಜುಮನ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪೀರಪಾಶಾ ಹೇಳಿದರು.

ಅವರು ಸೋಮವಾರ ಶಹಾಬಾದ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಬೀಳ್ಕೊಡುಗೆ ಸಮಾರಂಭ ಹಾಗೂ ಕಾಲೇಜಿನ ವಾರ್ಷಿಕ ಸಮ್ಮೇಳನ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದರು.

ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮದಿಂದ ಕಲಿತು ಹೆತ್ತವರಿಗೆ ಹೆಸರನ್ನು ತರಬೇಕು. ವಿದ್ಯೆ ಎನ್ನುವುದು ಯಾರು ಕದಿಯಲಾಗದ ಸಂಪತ್ತು. ಅದನ್ನು ಎಷ್ಟು ಗಳಿಸಿದರೂ ತೆರೆಗೆ ಕಟ್ಟಬೇಕಿಲ್ಲ. ಎಷ್ಟೇ ಖರ್ಚು ಮಾಡಿದರೂ ಖಾಲಿಯಾಗುವುದಿಲ್ಲ. ಬದುಕಿನ ಕೊನೆ ಉಸಿರಿರುವವರೆಗೂ ವಿದ್ಯೆಯನ್ನು ಸಂಪಾದಿಸುತ್ತಲೇ ಇರಬೇಕು.ಕಲಿತ ವಿದ್ಯೆಯನ್ನು ಸಮಾಜದ ಹಿತಕ್ಕೆ ಬಳಸಬೇಕು. ಆಗ ಮಾತ್ರ ಬದುಕಿನ ಸಾರ್ಥಕತೆ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಮನೋನಿಗ್ರಹ ಅಗತ್ಯ. ಶ್ರದ್ಧೆ ಮತ್ತು ಏಕಾಗ್ರತೆಯಿಂದ ಜ್ಞಾನಾರ್ಜನೆ ಮಾಡಬೇಕು ಎಂದರು.ಅಲ್ಲದೇ ಉನ್ನತ ಹುದ್ದೆ ಹೊಂದಿದ ಅಧಿಕಾರಿಗಳನ್ನು ನೋಡಿ, ನಾವು ಅವರಂತೆ ಆಗಬಲ್ಲೆವು ಎಂಬ ಆತ್ಮಬಲವನ್ನು ಬೆಳೆಸಿಕೊಂಡು, ಆ ಗುರಿಗಾಗಿ ಪ್ರಯತ್ನ ಪಡಬೇಕು. ಶಿಕ್ಷಕರು ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸುವ ಶಕ್ತಿ ಕೇವಲ ಉಪನ್ಯಾಸಕರಲ್ಲಿದೆ. ವಿದ್ಯಾರ್ಥಿಗಳು ಸಮಯಕ್ಕೆ ಮಹತ್ವ ನೀಡಿ, ಜಾಗೃತಿಯಿಂದ ಅಭ್ಯಾಸ ಮಾಡುವುದರ ಜೊತೆಗೆ ಸರಿಯಾದ ನಿರ್ಧಾರ, ಗುರಿಯೊಂದಿಗೆ ಮುನ್ನಡೆಯಬೇಕೆಂದು ಕಿವಿಮಾತು ಹೇಳಿದರು.

ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಎಂ.ಪಟೇಲ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ನಿರಂತರ ಪರಿಶ್ರಮದಿಂದ ಗುರಿಯಡೆಗೆ ಸಾಗಿದಾಗ ಮಾತ್ರ ಉತ್ತಮ ನಾಗರಿಕರಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ರಾಜಗೋಪಾಲ ಸಾರಡಾ, ನೀಲಕುಮಾರ ಅಲ್ಲಂಶೆಟ್ಟಿ, ಉಪಖಜಾನೆ ಅಧಿಕಾರಿ ಶಾಂತಾಬಾಯಿ, ತರನಳ್ಳಿ ಗ್ರಾಪಂ ಸದಸ್ಯ ಅವಿನಾಶ ಕೊಂಡಯ್ಯ, ಡಾ.ವೀರಭದ್ರಪ್ಪ ಇಂಗಿನಶೆಟ್ಟಿ , ಏಮನಾಥ ರಾಠೋಡ,ವೇದಿಕೆಯ ಮೇಲಿದ್ದರು.ಇದೇ ಸಂದರ್ಭದಲ್ಲಿ ಕು.ಆಕಾಂಕ್ಷಾ ಪುರಾಣಿಕ್ ವಿದ್ಯಾರ್ಥಿನಿಗೆ ವಿಶೇಷ ಸನ್ಮಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.

ಶಿವಕುಮಾರ ದಶವಂತ ನಿರೂಪಿಸಿದರು, ಪ್ರಿಯಾಂಕ ಸ್ವಾಗತಿಸಿದರು,ಶ್ರೀಧರ್ ವಂದಿಸಿದರು.ಉಪನ್ಯಾಸಕರಾದ ಜಗನ್ನಾಥ. ಆರ್.ಹೊಸಮನಿ, ರವಿ.ಎಲ್.ಚವ್ಹಾಣ, ,ಮಹಾದೇವ ಪಾಟೀಲ ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

12 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

22 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

22 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

22 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago