ಕಲಬುರಗಿ :ಜಿಲ್ಲೆಯ ಶಹಾಬಾದ ತಾಲೂಕಿನಲ್ಲಿ ಕಾರ್ಮಿಕ ಇಲಾಖೆ ಚಿತ್ತಾಪುರ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಫೆಡರೇಶನ್ ಸಹಯೋಗದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರು, ಪ್ಲಂಬರ್, ಕಾಪೇರ್ಂಟರ್, ಪೇಂಟರ್, ಎಲೆಕ್ಟ್ರೀಷಿಯನ ಸೇರಿದಂತೆ ಇನ್ನಿತರ ಕಾರ್ಮಿಕರಿಗೆ ಟೂಲ್ಸ್ ಕಿಟ್‍ಗಳನ್ನು ವಿತರಿಸಲಾಯಿತು.
ಟೂಲ್ಸ್ ಕಿಟ್ ವಿತರಿಸಿ ಮಾತನಾಡಿದ ತಾಲೂಕ ಸಹಾಯಕ ಕಾರ್ಮಿಕ ಅಧಿಕಾರಿ ಕವಿತಾ ಹೊನ್ನಳ್ಳಿ, ಸರ್ಕಾರದಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಟೂಲ್ ಕಿಟ್‍ಗಳನ್ನು ವಿತರಣೆ ಮಾಡುತ್ತಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಟೂಲ್ಸ್ ಕಿಟ್‍ಗಳನ್ನು ನೀಡಲಾಗಿದೆ. ಜೊತೆಗೆ ಆರೋಗ್ಯದ ದೃಷ್ಠಿಯಿಂದ ಇಲಾಖೆಯ ವತಿಯಿಂದ ಪೌಷ್ಠಿಕ ಕಿಟ್‍ಗಳನ್ನು ನೀಡಲಾಗಿದೆ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಕಾರ್ಮಿಕರಿಗೆ ನೀಡಲಾಗುವುದು.ನೊಂದಾಯಿತ ಕಾರ್ಮಿಕರ ಸಂಖ್ಯೆಗೆ ಅನುಗುಣವಾಗಿ ಕಿಟ್‍ಗಳಿಗೆ ಬೇಡಿಕೆ ಸಲ್ಲಿಸಲಾಗಿದೆ, ಅವು ಬರಲಿವೆ, ಉಳಿದ ಕಾರ್ಮಿಕರಿಗೆ ಕೂಡಲೇ ನೀಡಲಾಗುವುದು ಎಂದು ಭರವಸೆ ನೀಡಿದರು.
ಶಹಾಬಾದ ಕಟ್ಟಡ ಕಾರ್ಮಿಕರ ಸಂಘದ ಕಾರ್ಯದರ್ಶಿ ನಾಗಪ್ಪ ರಾಯಚೂರಕರ ಮಾತನಾಡಿ, ತಾಲೂಕಿನಲ್ಲಿ ಇನ್ನೂ ಅನೇಕ ಕಾರ್ಮಿಕರ ನೋಂದಣಿ ಮಾಡಿಕೊಂಡಿಲ್ಲ. ಆದಷ್ಟು ಬೇಗ ನೋಂದಾಯಿಸಿ ಇಲಾಖೆಯಿಂದ ಪರಿಹಾರ ಧನ, ಮಕ್ಕಳಿಗೆ ಸ್ಕಾಲರ್‍ಶಿಪ್ ಸಹಿತ ಸಾಕಷ್ಟು ಸೌಲಭ್ಯಗಳಿದ್ದು, ಅದನ್ನು ಪಡೆದುಕೊಳ್ಳಬೇಕು. ಎಲ್ಲ ವರ್ಗದ ಕಾರ್ಮಿಕರಿಗೆ ಅವರ ಕೆಲಸಕ್ಕೆ ಬೇಕಾದ ಸಲಕರಣೆಗಳನ್ನು ಇಲಾಖೆಯಿಂದ ನೀಡಲಾಗುತ್ತಿದೆ. ಅμÉ್ಟೀ ಅಲ್ಲದೇ ಕಾರ್ಮಿಕರ ಮಕ್ಕಳಿಗೆ ಶಿಷ್ಯ ವೇತನ, ಅವರ ಮಕ್ಕಳ ಮದುವೆಗೆ ಸಹಾಯಧನ ಸೇರಿದಂತೆ ಸಾಕಷ್ಟು ಸೌಲಭ್ಯಗಳನ್ನು ರಾಜ್ಯ ಸರಕಾರ ಒದಗಿಸುತ್ತಿದೆ ಎಂದರು. ಕಟ್ಟಡ ಕಾರ್ಮಿಕ ಸಂಘದಿಂದ ಗುರುತಿನ ಚೀಟಿ ಪಡೆದ ಫಲಾನುಭವಿಗಳು ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದೆ ಬರಬೇಕು ಎಂದು ಹೇಳಿದರು.
ಕಾರ್ಮಿಕ ಇಲಾಖೆಯ ಡಿಇಒ ಬಸವರಾಜ ಕಲಶೇಟ್ಟಿ, ಕಟ್ಟಡ ಕಾರ್ಮಿಕ ಸಂಘಟನೆಯ ಅಧ್ಯಕ್ಷ ರಾಮು ಜಾಧವ, ಪ್ರಕಾಶ ಕುಸಾಳೆ, ನಿತೀಶ ರಾಠೋಡ, ಲಕ್ಷ್ಮೀಕಾಂತ ಸಾಗರ, ಭೀಮರಾಯ ಬೇನಳ್ಳಿ ಮತ್ತು ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಟೂಲ್ಸ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…