ಕಲಬುರಗಿ: ಪ್ರತಿ ವರ್ಷದಂತೆ ನಗರದ ಜಯನಗರ ಶಿವಮಂದಿರದಲ್ಲಿ ಮಹಾ ಶಿವರಾತ್ರಿ ನಿಮಿತ್ತ ಫೆ.18 ರಂದು ಶನಿವಾರ ಬೆಳಿಗ್ಗೆ 10:30ಕ್ಕೆ ಅದ್ದೂರಿಯಾಗಿ ಶಿವ ಪಾರ್ವತಿ ಕಲ್ಯಾಣೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಹಾಗೂ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಕೆ.ಬಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಂದು ಬೆಳಿಗ್ಗೆ 5 ಗಂಟೆಗೆ ಶಿವನಿಗೆ ರುದ್ರಾಭಿಷೇಕ ನಡೆಯುತ್ತದೆ.ನಂತರ ಭಕ್ತಾದಿಗಳಿಂದ ಅಭಿಷೇಕ ನಡೆಯುತ್ತವೆ.ಬೆಳಿಗ್ಗೆ 10:30ಕ್ಕೆ ಖ್ಯಾತ ಜ್ಯೋತಿಷಿ,ವೇದ ಪಂಡಿತ ಡಾ. ಬಸವರಾಜ ಗುರೂಜಿ ಕಲಗುರ್ತಿ ಅವರ ನೇತೃತ್ವದಲ್ಲಿ ಶಿವ ಪಾರ್ವತಿ ಕಲ್ಯಾಣೋತ್ಸವ ಜರುಗುತ್ತದೆ.ನಂತರ ಅವರು ಮಂಗಲ ಕಾರ್ಯ ಕುರಿತು ಹಾಗೂ ಧಾರ್ಮಿಕ ವಿಧಿ ವಿಧಾನಗಳನ್ನು ತಿಳಿಸಲಿದ್ದಾರೆ.ಈ ಸಮಯದಲ್ಲಿ ವಿಶೇಷವಾಗಿ ನಾದ ಸ್ವರ ಮೊಳಗಲಿದೆ.
ಸಂಜೆ 6:30 ಗಂಟೆಗೆ ಭಕ್ತಿ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.ಗಣ್ಯ ವ್ಯಕ್ತಿಗಳಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ. ನಂತರ ರಾತ್ರಿ ಭಜನಾ ಮಂಡಳಿಯಿಂದ ಭಜನೆಗಳು ನಡೆಯಲಿದೆ.ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದರ್ಶನ ಪಡೆಯಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…