ಕಮಲಾಪೂರ: ತಾಲೂಕಿನ ಶ್ರೀಚಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮದಲ್ಲಿ ಕುಡಿಯುವ ನೀರು, ಚರಂಡಿ ವ್ಯವಸ್ಥೆ, ಬೀದಿ ದೀಪ, ಶೌಚಾಲಯ ನಿರ್ಮಾಣ ಮತ್ತು ಗ್ರಾಮಗಳ ನಿರ್ವಹಣೆ ಸೇರಿದಂತೆ ಬಹುತೇಕ ಯಾವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದೆ ಇರುವ ಹಿನ್ನೆಲೆಯಲ್ಲಿ ಗ್ರಾಪಂ ಕೇಂದ್ರ ಸ್ಥಾನದಲ್ಲಿ ಅಭಿವೃದ್ಧಿಯೆಂಬುದು ಮರೀಚಿಕೆಯಾಗಿದೆ ಎಂದು ಗ್ರಾಮ ಪಂಚಾಯತಿ ಸದಸ್ಯ ಪ್ರಸಾದ ಎಸ್ ಮಾಲೆ ಆರೋಪಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಜಲಜೀವನ ಮಿಷನ್ ಪ್ರಾರಂಭವಾಗಿ ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಕೊನೆಗೊಂಡಿಲ್ಲ ಇದಲ್ಲದೇ ಗ್ರಾಪಂ ವ್ಯಾಪ್ತಿಯಲ್ಲಿ ಹೆಚ್ಚು ಅಕ್ರಮ ನೀರಿನ ಸಂಪರ್ಕ ನೀಡಿದ್ದು ಇದರಿಂದ ಹೆಚ್ಚು ನೀರು ಪೋಲಾಗುತ್ತಿದೆ.ಶ್ರೀಚಂದ ಗ್ರಾಮದ ಬಹುತೇಕ ಬಡಾವಣೆಗಳಲ್ಲಿ ಚರಂಡಿಗಳೇ ಇಲ್ಲ. ಇರುವ ಚರಂಡಿಗಳನ್ನು ಸ್ವಚ್ಛ ಮಾಡಿ ಐದು ವರ್ಷಗಳೇ ಕಳೆದಿವೆ. ಗ್ರಾಮದ ನಿವಾಸಿಗಳು ಹಲವಾರು ಬಾರಿ ಚರಂಡಿ ಸಮಸ್ಯೆಯನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದರೂ ಸಮಸ್ಯೆಗೆ ಪರಿಹಾರ ಸಿಗದೆ ಸಮಸ್ಯೆ ಹೆಚ್ಚಾಗಿ ಚರಂಡಿ ನೀರು ನಿಂತ ಕಡೆಯೇ ನಿಂತು ದುರ್ವಾಸನೆ ಹೊಡೆದು ನಾನಾ ಖಾಯಿಲೆ ಉದ್ಬವಿಸುತ್ತಿರುವುದು ಕಂಡುಬರುತ್ತಿವೆ.
ಚುನಾವಣೆ ಸಮಯದಲ್ಲಿ ಮತಯಾಚನೆಗೆ ಬರುವಂತಹ ಜನಪ್ರತಿನಿಧಿಗಳು ನಂತರದ ದಿನಗಳಲ್ಲಿ ಗ್ರಾಮದ ಸಮಸ್ಯೆ ಬಗ್ಗೆ ಕಿಂಚಿತ್ತೂ ಯೋಚಿಸದೇ, ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಅವರ ಇಚ್ಚಾಶಕ್ತಿಯ ಕೊರತೆಯಿಂದ ಗ್ರಾಮದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚು ಉಲ್ಬಣಗೊಳ್ಳುತ್ತಿದೆ. ಗ್ರಾಮ ಪಂಚಾಯತ ಅಧಿಕಾರಿಗಳಿಗೆ ಕರೆ ಮಾಡಿದರು ಕರೆಯನ್ನು ಸ್ವೀಕಾರ ಮಾಡುತ್ತಿಲ್ಲ ಎಂದರು.
ಈಗಾಗಲೇ ಗ್ರಾಮದಲ್ಲಿ ಹಲವಾರು ರೀತಿಯ ಸಾಂಕ್ರಾಮಿಕ ರೋಗಗಳಿಂದ ಗ್ರಾಮಸ್ಥರು ಬಳಲುತ್ತಿದ್ದಾರೆ. ಈ ಬಗ್ಗೆ ಶೀಘ್ರವಾಗಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…