ಬಿಸಿ ಬಿಸಿ ಸುದ್ದಿ

ಬಂಜಾರಾ ಕ್ರಾಂತಿದಳ ರಾಜ್ಯಾಧ್ಯಕ್ಷ ಚವ್ಹಾಣ ಜನಾರ್ದನ ರೆಡ್ಡಿ ಭೇಟಿ

ಆಳಂದ: ಮಾಜಿ ಸಚಿವ ಹಾಗೂ ನೂತನವಾಗಿ ಅಸ್ತಿತ್ವಕ್ಕೆ ತರಲಾದ ಕೆಆರ್‍ಪಿ ಪಕ್ಷದ ಸಂಸ್ಥಾಕ ಅಧ್ಯಕ್ಷ ಗಾಲಿ ಜರ್ನಾದನ ರೆಡ್ಡಿ ಅವರನ್ನು ಗಂಗಾವತಿಯಲ್ಲಿ ಇಲ್ಲಿನ ಬಂಜಾರಾ ಕ್ರಾಂತಿದಳ ರಾಜ್ಯಾಧ್ಯಕ್ಷ ರಾಜು ಚವ್ಹಾಣ ನೇತೃತ್ವದ ರಾಜಕೀಯ ಮುಖಂಡರ ನಿಯೋಗವು ಭೇಟಿ ಮಾಡಿದೆ.

ರಾಜಕೀಯವಾಗಿ ಗುರುತಿಸಿಕೊಂಡಿದ್ದ ರಾಜು ಚವ್ಹಾಣ ಬಂಜಾರ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಲು ರಾಜ್ಯಮಟ್ಟದಲ್ಲಿ ಹಲವು ಹೋರಾಟ ರೂಪಿಸುತ್ತಾ ತಮ್ಮ ಬೆಂಬಲಿಗರ ಯುವ ಪಡೆಯನ್ನೇ ಕಟ್ಟಿಕೊಂಡಿದ್ದು, ಹೀಗಾಗಿ ರಾಜು ಚವ್ಹಾಣ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೆಆರ್‍ಪಿ ಪಕ್ಷದಿಂದ ಕಣಕ್ಕಿಳಿಯುವ ನಿಟ್ಟಿನಲ್ಲಿ ಪಿಆರ್‍ಪಿ ಪಕ್ಷದ ನಾಯಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಭೇಟಿ ಮಾಡಿದ್ದು ಸ್ಥಳೀಯ ರಾಜಕೀಯ ವಲಯದಲ್ಲಿ ಸಂಚನ ಮೂಡಿಸಿದೆ.

ಲಂಬಾಣಿ ಸೇರಿ ಹಲವು ಹಿಂದುಳಿದ ಸಮುದಾಯದ ಅಭಿವೃದ್ದಿ ಹಿನ್ನೆಲೆಯಲ್ಲಿ ಕೆಆರ್‍ಪಿ ವರಿಷ್ಠನಾಯಕ ಜನಾರ್ದನ ರೆಡ್ಡಿ ಅವರನ್ನು ಭೇಟಿ ಮಾಡಿ, ಚುನಾವಣೆಯಲ್ಲಿ ಆಳಂದ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕಿಳಿಸುವಂತೆ ಚವ್ಹಾಣ ಅವರು ರೆಡ್ಡಿ ಅವರ ಮುಂದೆ ತಮ್ಮ ಇಂಗಿತ ವ್ಯಕ್ತಪಡಿಸಿದ್ದು, ಅಲ್ಲದೆ, ಬಿಜೆಪಿ ಕಾಂಗ್ರೆಸ್ ಇನ್ನಿತರ ಪಕ್ಷಗಳ ಕಾರ್ಯಕರ್ತರು ಮತ್ತು ಮುಖಂಡರನ್ನು ಕೆಆರ್‍ಪಿ ಪಕ್ಷಕ್ಕೆ ಕರೆತಂದು ಪಕ್ಷವನ್ನು ಬಲಿಷ್ಠಗೊಳಿಸುವ ಭರವಸೆ ನೀಡಿದ್ದಾರೆ.

ನಿಯೋಗದ ಸನ್ಮಾನ ಸ್ವೀಕರಿಸಿದ ಗಾಲಿ ಜನಾರ್ದನ ರೆಡ್ಡಿ ಅವರು, ನಾನು ಆಳಂದ ಕ್ಷೇತ್ರಕ್ಕೆ ಪ್ರವಾಸ ಕೈಗೊಳ್ಳುತ್ತೇನೆ. ಅಲ್ಲದೆ, ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಮತ್ತು ಪ್ರಚಾರ ಕೈಗೊಳ್ಳಿ ಎಂದು ನಿಮ್ಮೊಂದಿಗೆ ನಾನಿದ್ದೇನೆ ಎಂದು ಹೇಳಿದ್ದಾರೆ.

ನಿಯೋಗದಲ್ಲಿ ಜೆಡಿಎಸ್‍ನ ಚಂದ್ರಕಾಂತ ಗದ್ದೆ, ಕಾಂಗ್ರೆಸ್‍ನ ಶರಣಬಸಪ್ಪ ಝಳಕಿ, ಬಿಜೆಪಿ ಶಿವುಕುಮಾರ ನಿಂಬಾಳ, ದತ್ತು ರಾಠೋಡ, ಬಂಜಾರಾ ಕ್ರಾಂತಿದಳ ತಾಲೂಕು ಅಧ್ಯಕ್ಷ ವೆಂಕಟೇಶ ರಾಠೋಡ ಸೇರಿದಂತೆ ಮತ್ತಿತರು ಒಳಗೊಂಡಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

19 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago