ಕಲಬುರಗಿ: ಚಿತ್ರಕಲಾಕೃತಿಗಳು ಜನಸಾಮಾನ್ಯರಿಗೆ ತಲಪುವಂತೆ ಮಾಡಬೇಕೆನ್ನುವ ಆಸೆಯಿಂದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘ, ವಿಕಾಸ ಅಕಾಡೆಮಿ, ಶರಣಬಸವ ವಿಶ್ವವಿದ್ಯಾಲಯ, ಗುಲ್ಬರ್ಗ ವಿಶ್ವವಿದ್ಯಾಲಯ, ಚೈತನ್ಯಮಯಿ ಟ್ರಸ್ಟ್, ದೃಶ್ಯ ಬೆಳಕು ಸಾಂಸ್ಕøತಿಕ ಸಂಸ್ಥೆ, ದಿ ಆರ್ಟ ಇಂಟಿಗ್ರೇಶನ್ ಸೊಸಾಯಿಟಿ, ಬಿಸಿಲು ಆರ್ಟ್ ಗ್ಯಾಲರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಫೆ. 19ರಂದು 10ನೇ ಚಿತ್ರಸಂತೆಯನ್ನು ಆಯೋಜಿಸಲಾಗಿದೆ ಎಂದು ಚಿತ್ರÀಸಂತೆಯ ಪ್ರಧಾನ ಸಂಯೋಜಕ ಎ.ಎಸ್. ಪಾಟೀಲ ಹಾಗೂ ಎಂ. ಹೆಚ್. ಬೆಳಮಗಿ ತಿಳಿಸಿದರು.
ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಿಂದ ಮಹಾನಗರ ಪಾಲಿಕೆಯ ಗೇಟ್‍ವರೆಗೆ ಒಂದು ದಿನದ ಹಿರಿಯ ಚಿತ್ರಕಲಾವಿದರು, ಯುವ ಚಿತ್ರಕಲಾವಿದರು ಮತ್ತು ಕಲಾವಿದ್ಯಾರ್ಥಿಗಳ ಸುಮಾರು 500ಕ್ಕೂ ಹೆಚ್ಚು ವಿವಿಧ ಮಾಧ್ಯಮದ ಚಿತ್ರಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ಮಾಡಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಚಿತ್ರಸಂತೆಯಲ್ಲಿ ನೂರು ರೂಪಾಯಿಗಳಿಂದ ಹಿಡಿದು ಒಂದು ಲಕ್ಷ ರೂಪಾಯಿಗಳವರೆಗಿನ ಬೆಲೆಯ ಕಲಾಕೃತಿಗಳು ಇರಲಿದ್ದು, ಇದೇ ಸಂದರ್ಭದಲ್ಲಿ ಮಕ್ಕಳಲ್ಲಿ ದೃಶ್ಯಕಲಾ ಪ್ರಜ್ಞೆಯನ್ನು ಬೆಳೆಸಲು ಚಿಕ್ಕಮಕ್ಕಳ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ. ಸುಮಾರು 500 ಕ್ಕೂ ಹೆಚ್ಚು ಶಾಲಾ ಮಕ್ಕಳು ಭಾಗವಹಿಸುವ ನಿರೀಕ್ಷೆ ಇದೆ. ದೃಶ್ಯಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಚಿತ್ರಸಂತೆಯಲ್ಲಿನ ಐದು ಅತ್ತುಮವಾದ ಕಲಾ ಮಳಿಗೆಗಳಿಗೆ ತಲಾ 5000/-ರೂ. ಗಳ ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದರು.
ಈ ಚಿತ್ರ ಸಂತೆಯನ್ನು ಶರಣ ಬಸವ ವಿವಿ ಕುಲಪತಿ ಡಾ. ನಿರಂಜನ ನಿಷ್ಠಿ ಉದ್ಘಾಟಿಸಲಿದ್ದು, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರೆಡ್ಡಿ ಪಾಟೀಲ್, ಮಹಾನಗರ ಪಾಲಿಕೆಯ ವಲಯ ಆಯುಕ್ತ ಶ್ರೀಯಾಂಕ ಎ. ಧನಶ್ರೀ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಂಟಿ ನಿರ್ದೆಶಕ ಕೆ.ಎಚ್. ಚೆನ್ನೂರ, ಗುಲ್ಬರ್ಗ ವಿವಿ ದೃಶ್ಯ ಕಲಾ ವಿಭಾಗದ ಸಂಯೋಜಕ ಪ್ರೊ. ಅಬ್ದುಲ್ ರಬ್ ಉಸ್ತಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಚೈತನ್ಯಮಯಿ ಟ್ರಸ್ಟ್‍ನ ಕಾರ್ಯದರ್ಶಿ ಡಾ. ಎ.ಎಸ್. ಪಾಟೀಲ್ ಅವರು ಅಧ್ಯಕ್ಷತೆ ವಹಿಸಲ್ಲಿದ್ದಾರೆ ಎಂದು ತಿಳಿಸಿದರು. ವಿ.ಬಿ. ಬಿರಾದಾರ, ಡಾ. ಪರುಶುರಾಮ ಪಿ ಇದ್ದರು.
ಮಾರಾಟಕ್ಕೂ ಲಭ್ಯ; ಈ ಚಿತ್ರಸಂತೆಯಲ್ಲಿ ಪ್ರದರ್ಶನಗೊಳ್ಳಲಿರುವ ನಿಸರ್ಗಚಿತ್ರ, ಅಮೂರ್ತಚಿತ್ರ, ನೈಜಶೈಲಿಯ ಚಿತ್ರಗಳು, ಗ್ರಾಫಿಕ್ ಮಾಧ್ಯಮದ ಕಲಾಕೃತಿಗಳು, ಸಂಪ್ರದಾಯ ಶೈಲಿಯ ಚಿತ್ರಗಳು, ಕೋಲಾಜ್ ಮಾಧ್ಯಮದ ಚಿತ್ರಗಳು ಮತ್ತು ಶಿಲ್ಪಕಲಾಕೃತಿಗಳನ್ನು ನಗರದ ವಾಣಿಜ್ಯೋದ್ಯಮಿಗಳು, ವೈದ್ಯರು, ಇಂಜಿನಿಯರಗಳು, ವಾಸ್ತುಶಿಲ್ಪಿಗಳು ಮತ್ತು ಹೋಟೆಲ್ ಉದ್ಯಮಿಗಳಲ್ಲದೇ ಜನಸಾಮಾನ್ಯರು ಕೂಡಾ ಅತ್ಯಂತ ಕಡಿಮೆ ಬೆಲೆಗಳಲ್ಲಿ ತಮಗೆ ಇಷ್ಟವಾದ ಚಿತ್ರಕಲಾಕೃತಿಗಳನ್ನು ಖರೀದಿಸಿ, ತಮ್ಮ ಮನೆಯ ಗೋಡೆಯ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…