ಗ್ರಾಮೀಣ ಪತ್ರಕರ್ತರಿಗೆ ಮತ್ತೊಮ್ಮೆ ಅನ್ಯಾಯ

0
79

ವಾಡಿ: ಗ್ರಾಮೀಣ ಪತ್ರಕರ್ತರ ಉಚಿತ ಪ್ರಯಾಣಕ್ಕಾಗಿ ಬಸ್ ಪಾಸ್ ನೀಡುವ ವಾಗ್ದಾನ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತಿಮವಾಗಿ ಕೈಬಿಡುವ ಮೂಲಕ ಮಾತು ತಪ್ಪಿದ್ದಾರೆ. ಆ ಮೂಲಕ ಬಜೆಟ್‌ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಮತ್ತೊಮ್ಮೆ ಅನ್ಯಾಯ ಮಾಡಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ತಾಪುರ ತಾಲೂಕು ಮಾಜಿ ಪ್ರಧಾನ ಕಾರ್ಯದರ್ಶಿ ಮಡಿವಾಳಪ್ಪ ಹೇರೂರ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸರ್ಕಾರ ಪದೇಪದೇ ಗ್ರಾಮೀಣ ಪತ್ರಕರ್ತರನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದ್ದಾರೆ. ಕಳೆದ ತಿಂಗಳು ವಿಜಯಪುರದಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ್ದ ಸಿಎಂ ಬೊಮ್ಮಾಯಿ, ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಈ ಬಾರಿಯ ಬಜೆಟ್‌ನಲ್ಲಿ ಖಚಿತವಾಗಿಯೂ ಉಚಿತ ಬಸ್‌ಪಾಸ್ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದರು. ಬಹುದಿನಗಳ ಬೇಡಿಕೆಯೊಂದು ಕೊನೆಗೂ ಈಡೇರುವ ಹಂತಕ್ಕೆ ಬಂತ್ತಲ್ಲ ಎಂದು ಗ್ರಾಮೀಣ ಪತ್ರಕರ್ತರು ಹರ್ಷ ವ್ಯಕ್ತಪಡಿಸಿದ್ದರು.

Contact Your\'s Advertisement; 9902492681

ಆದರೆ ಎಂದಿನಂತೆ ಈ ಬಜೆಟ್‌ನಲ್ಲೂ ಕೂಡ ಗ್ರಾಮೀಣ ಪತ್ರಕರ್ತರ ಉಚಿತ ಬಸ್‌ಪಾಸ್ ಬೇಡಿಕೆ ಕಗ್ಗಂಟಾಗಿಯೇ ಉಳಿಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದ ಮಡಿವಾಳಪ್ಪ ಹೇರೂರ, ಈ ವರೆಗೂ ಯಾವುದೇ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಯಾವೊಂದೂ ಯೋಜನೆ ಪ್ರಕಟಿಸಿಲ್ಲ ಎಂದು ದೂರಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here