ವಾಡಿ: ಗ್ರಾಮೀಣ ಪತ್ರಕರ್ತರ ಉಚಿತ ಪ್ರಯಾಣಕ್ಕಾಗಿ ಬಸ್ ಪಾಸ್ ನೀಡುವ ವಾಗ್ದಾನ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತಿಮವಾಗಿ ಕೈಬಿಡುವ ಮೂಲಕ ಮಾತು ತಪ್ಪಿದ್ದಾರೆ. ಆ ಮೂಲಕ ಬಜೆಟ್‌ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಮತ್ತೊಮ್ಮೆ ಅನ್ಯಾಯ ಮಾಡಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ತಾಪುರ ತಾಲೂಕು ಮಾಜಿ ಪ್ರಧಾನ ಕಾರ್ಯದರ್ಶಿ ಮಡಿವಾಳಪ್ಪ ಹೇರೂರ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸರ್ಕಾರ ಪದೇಪದೇ ಗ್ರಾಮೀಣ ಪತ್ರಕರ್ತರನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದ್ದಾರೆ. ಕಳೆದ ತಿಂಗಳು ವಿಜಯಪುರದಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ್ದ ಸಿಎಂ ಬೊಮ್ಮಾಯಿ, ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಈ ಬಾರಿಯ ಬಜೆಟ್‌ನಲ್ಲಿ ಖಚಿತವಾಗಿಯೂ ಉಚಿತ ಬಸ್‌ಪಾಸ್ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದರು. ಬಹುದಿನಗಳ ಬೇಡಿಕೆಯೊಂದು ಕೊನೆಗೂ ಈಡೇರುವ ಹಂತಕ್ಕೆ ಬಂತ್ತಲ್ಲ ಎಂದು ಗ್ರಾಮೀಣ ಪತ್ರಕರ್ತರು ಹರ್ಷ ವ್ಯಕ್ತಪಡಿಸಿದ್ದರು.
ಆದರೆ ಎಂದಿನಂತೆ ಈ ಬಜೆಟ್‌ನಲ್ಲೂ ಕೂಡ ಗ್ರಾಮೀಣ ಪತ್ರಕರ್ತರ ಉಚಿತ ಬಸ್‌ಪಾಸ್ ಬೇಡಿಕೆ ಕಗ್ಗಂಟಾಗಿಯೇ ಉಳಿಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದ ಮಡಿವಾಳಪ್ಪ ಹೇರೂರ, ಈ ವರೆಗೂ ಯಾವುದೇ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಯಾವೊಂದೂ ಯೋಜನೆ ಪ್ರಕಟಿಸಿಲ್ಲ ಎಂದು ದೂರಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…