ಬಿಸಿ ಬಿಸಿ ಸುದ್ದಿ

2023-24ನೇ ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು; 2023-24ನೇ ಸಾಲಿನ ಆಯವ್ಯಯವನ್ನು ಇಂದು ಸದನದಲ್ಲಿ ಮಂಡಿಸಿದ ಮುಖ್ಯಮಂತ್ರಿಗಳು ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ ಭಾರತ ಪುಟಿದೆದ್ದಿದೆ. ಇದೇ ಹಾದಿಯಲ್ಲಿ ಕರ್ನಾಟಕವೂ ದೃಢವಾಗಿ ಮುನ್ನಡೆಯುತ್ತಿದೆ ಎಂದು ತಿಳಿಸಿದರು.

ಜಾಗತಿಕವಾಗಿ ಹಲವಾರು ದೇಶಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆರ್ಥಿಕ ಸ್ಥಿರತೆಗಾಗಿ ತೆಗೆದುಕೊಂಡ ಕ್ರಮಗಳ ಫಲವಾಗಿ ಭಾರತವು ಶೇ. 6.5 ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಿರುವುದು ಗಮನಾರ್ಹವಾಗಿದೆ. ಇದೇ ಸಂದರ್ಭದಲ್ಲಿ ಜಿ-20 ಶೃಂಗಸಭೆಯ ಅಧ್ಯಕ್ಷತೆ ಭಾರತಕ್ಕೆ ಒಲಿದಿರುವುದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಜಾಗತಿಕ ಮನ್ನಣೆ ಸಿಕ್ಕಿರುವ ಪ್ರತೀಕವಾಗಿದೆ. ನಾನು ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಜಿ-20 ಶೃಂಗಸಭೆಗೆ ಪೂರ್ವಭಾವಿಯಾಗಿ ರಾಜ್ಯದಲ್ಲಿ 14 ಸಭೆಗಳು ನಡೆಯುತ್ತಿರುವುದು, ರಾಜ್ಯದ ಪ್ರಗತಿಪರ ಚಿಂತನೆ ಹಾಗೂ ಮುನ್ನಡೆಯನ್ನು ಜಾಗತಿಕ ಮಟ್ಟದಲ್ಲಿ ಅನಾವರಣಗೊಳಿಸಲು ದೊರೆತ ಸುವರ್ಣಾವಕಾಶ ಎಂದು ನಾನು ಭಾವಿಸಿದ್ದೇನೆ ಎಂದು ಹೇಳಿದರು.

ಆಯವ್ಯಯವು ಅಭಿವೃದ್ಧಿ ಮತ್ತು ಉತ್ತಮ ಭವಿಷ್ಯದ ಭರವಸೆಯಾಗಿದೆ. ಈ ಆರ್ಥಿಕ ವರ್ಷದಲ್ಲಿ ಕರ್ನಾಟಕದ ಉಜ್ವಲ ಭವಿಷ್ಯವನ್ನು ರೂಪಿಸುವ ಕಾರ್ಯಕ್ರಮಗಳನ್ನು ಅನುμÁ್ಠನಗೊಳಿಸುತ್ತಿರುವ ಸಾರ್ಥಕ ಭಾವದೊಂದಿಗೆ, ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ನಮ್ಮ ಕರ್ತವ್ಯಗಳು, ಗುರಿಗಳು ಹಾಗೂ ಫಲಿತಾಂಶಗಳ ದೂರದೃಷ್ಟಿಯೊಂದಿಗೆ ಈ ಆಯವ್ಯಯವನ್ನು ಮಂಡಿಸುತ್ತಿದ್ದೇನೆ.

ಹಣಕಾಸು ವರ್ಷದ ಮೊದಲ ಎರಡು ತಿಂಗಳಿನಲ್ಲಿಯೇ ಬಹಳಷ್ಟು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಮೂಲಕ ಆಯವ್ಯಯದ ಸಕಾಲಿಕ ಹಾಗೂ ತ್ವರಿತ ಅನುμÁ್ಠನಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಮಾನವ ಅಭಿವೃದ್ಧಿ ಮತ್ತು ಆರ್ಥಿಕ ಅಭಿವೃದ್ಧಿಗೆ ಸಮಾನ ಆದ್ಯತೆ ನೀಡಿ, ಸಮತೋಲನ ಕಾಯ್ದುಕೊಳ್ಳುವ ಪ್ರಯತ್ನ ಮಾಡಲಾಗಿದೆ.

ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣದ ಮಂತ್ರದೊಂದಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಮಹಿಳೆಯರು ಹಾಗೂ ಇತರ ದುರ್ಬಲ ವರ್ಗದವರ ಸ್ವಾಭಿಮಾನದ, ಸ್ವಾವಲಂಬನೆಯ ಬದುಕಿಗೆ ಬೆಂಬಲ ನೀಡಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿಯನ್ನು ಕ್ರಮವಾಗಿ ಶೇ. 15 ರಿಂದ ಶೇ. 17ಕ್ಕೆ ಹಾಗೂ ಶೇ. 3 ರಿಂದ ಶೇ. 7 ಕ್ಕೆ ಹೆಚ್ಚಿಸುವ ಹಾಗೂ 24,000 ಪೌರ ಕಾರ್ಮಿಕರ ಸೇವೆ ಖಾಯಂ ಮಾಡುವ ಐತಿಹಾಸಿಕ ಕ್ರಮಗಳನ್ನು ಕೈಗೊಂಡಿದ್ದೇವೆ.

ಜನರ ಅಭ್ಯುದಯ, ಅಗತ್ಯಗಳನ್ನೇ ಕೇಂದ್ರೀಕರಿಸಿದ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಡಿ.ಬಿ.ಟಿ. ಮೂಲಕ ಫಲಾನುಭವಿಗಳಿಗೆ ನೇರವಾಗಿ ಸವಲತ್ತುಗಳನ್ನು ವಿತರಿಸುವ ಮೂಲಕ ಪಾರದರ್ಶಕತೆ ಮೆರೆದಿದ್ದೇವೆ. ಕಟ್ಟಡ ನಿರ್ಮಾಣ ಕಾರ್ಮಿಕರು ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗೆ ವಿವಿಧ ಸವಲತ್ತುಗಳನ್ನು ನೀಡುವ ಮೂಲಕ ಶ್ರಮಿಕರ ಕುರಿತ ನಮ್ಮ ಕಾಳಜಿಯನ್ನು ಮೆರೆದಿದ್ದೇವೆ. ಆಸಿಡ್ ದಾಳಿ ಸಂತ್ರಸ್ತರ ಮಾಸಾಶನ 10 ಸಾವಿರ ರೂ. ಗಳಿಗೆ ಹೆಚ್ಚಳ, ವಿವಿಧ ಮಾಸಾಶನಗಳ ಹೆಚ್ಚಳ, ಜನರ ಮನೆ ಬಾಗಿಲಿಗೆ ಸೇವೆಗಳನ್ನು ಒದಗಿಸುವ ಯೋಜನೆಗಳು ಮತ್ತಿತರ ಉಪಕ್ರಮಗಳೊಂದಿಗೆ ಸ್ಪಂದನಾ ಶೀಲ ಸರ್ಕಾರದ ಕರ್ತವ್ಯ ನಿಭಾಯಿಸಿದ್ದೇವೆ.

ರೈತರ ಆದಾಯ ದ್ವಿಗುಣಗೊಳಿಸುವ ಮಹತ್ವಾಕಾಂಕ್ಷೆಯೊಂದಿಗೆ ಒಕ್ಕಲುತನದ ಪ್ರತಿ ಹಂತದಲ್ಲಿಯೂ ರೈತರಿಗೆ ಬೆಂಗಾವಲಾಗಿ ಪೆÇ್ರೀತ್ಸಾಹಿಸಿದ್ದೇವೆ. ಬೆಂಬಲ ಬೆಲೆ ಯೋಜನೆಯಡಿ ದಾಖಲೆ ಪ್ರಮಾಣದ ರಾಗಿ ಖರೀದಿ, ಕುಚ್ಚಲಕ್ಕಿ ಖರೀದಿಗೆ ಅವಕಾಶ ಒದಗಿಸುವುದರೊಂದಿಗೆ ಪ್ರವಾಹ ಸಂದರ್ಭದಲ್ಲಿ ಎನ್‍ಆರ್‍ಡಿಎಫ್ ಪರಿಹಾರ ಧನದೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಪರಿಹಾರವನ್ನು ದಾಖಲೆ ಅವಧಿಯಲ್ಲಿ ವಿತರಿಸಲಾಗಿದೆ. ತೊಗರಿ ಬೆಳೆ, ಅಡಿಕೆ ಬೆಳೆಗೆ ರೋಗ ಬಾಧೆ, ರಾಸುಗಳಿಗೆ ಚರ್ಮಗಂಟು ರೋಗಬಾಧೆ ಸಂಭವಿಸಿದಾಗಲೂ ಸರ್ಕಾರ ರೈತರ ನೆರವಿಗೆ ಧಾವಿಸಿದೆ. ರೈತರ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯುವುದನ್ನು ಉತ್ತೇಜಿಸಲು ಪ್ರಾರಂಭಿಸಲಾದ ರೈತ ವಿದ್ಯಾನಿಧಿ ಯೋಜನೆಯನ್ನು ಭೂರಹಿತ ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಟ್ಯಾಕ್ಸಿ ಚಾಲಕರು, ಆಟೋ ರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಿಸಿದ್ದೇವೆ.

ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಜನೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸ್ವಸ್ಥ, ಸುಶಿಕ್ಷಿತ, ಪ್ರಜ್ಞಾವಂತ ಪೀಳಿಗೆಯ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದೇವೆ. ಉದ್ಯೋಗ ಅವಕಾಶ ಸೃಜನೆಯ ಜೊತೆಗೆ, ಅದಕ್ಕೆ ತಕ್ಕಂತ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನೂ ನೀಡುವ ಮೂಲಕ ನಮ್ಮ ನಾಡಿನ ಯುವಕರು ಈ ಅವಕಾಶಗಳ ಸದ್ಬಳಕೆ ಮಾಡುವ ವಾತಾವರಣ ನಿರ್ಮಿಸುತ್ತಿದ್ದೇವೆ. ಪಾಲಿಟೆಕ್ನಿಕ್, ಐಟಿಐ ಹಾಗೂ ಎಂಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ, ಸಂಶೋಧನೆ ಮತ್ತು ಅಭಿವೃದ್ಧಿ ನೀತಿ, ಉದ್ಯೋಗ ನೀತಿ ಮತ್ತಿತರ ಉಪಕ್ರಮಗಳು ಕೈಗಾರಿಕೆಯ ಬೇಡಿಕೆಗೆ ಅನುಗುಣವಾದ ಮಾನವ ಸಂಪನ್ಮೂಲ ನಿರ್ಮಾಣಕ್ಕೆ ಪೂರಕವಾಗಿವೆ. ಆರೋಗ್ಯ ಕೇಂದ್ರಗಳ ಉನ್ನತೀಕರಣ, ನಮ್ಮ ಕ್ಲಿನಿಕ್ ಮತ್ತಿತರ ಕಾರ್ಯಕ್ರಮಗಳ ಮೂಲಕ ದ್ವಿತೀಯ ಮತ್ತು ತೃತೀಯ ಆರೈಕೆಗಳು ಬಡವರಿಗೆ ಸುಲಭವಾಗಿ, ಸುಗಮವಾಗಿ, ಸ್ಥಳೀಯವಾಗಿ ಒದಗಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ.

ರಾಜ್ಯದಲ್ಲಿ ಏಕರೂಪದ ಅಭಿವೃದ್ಧಿಯ ಆಶಯದೊಂದಿಗೆ ಕಳೆದ ವರ್ಷ ದೇಶದಲ್ಲಿಯೇ ಮೊದಲ ಬಾರಿಗೆ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳ ಪರಿಕಲ್ಪನೆಯನ್ನು ಪರಿಚಯಿಸಲಾಯಿತು. ಈ ತಾಲ್ಲೂಕುಗಳಲ್ಲಿ ಆಯಾ ಕ್ಷೇತ್ರದಲ್ಲಿ ಸಮಗ್ರ ಹಾಗೂ ಸಂಪೂರ್ಣ ಅಭಿವೃದ್ಧಿಗೆ ಫಲಿತಾಂಶ ಕೇಂದ್ರಿತ ಪ್ರಯತ್ನಗಳನ್ನು ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಪ್ರಯತ್ನಗಳು ಫಲ ನೀಡಲಿವೆ.

ದಾವೊಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಹಾಗೂ ನವೆಂಬರ್‍ನಲ್ಲಿ ಬೆಂಗಳೂರಿನಲ್ಲಿ ನಡೆದ ವಿಶ್ವ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸುವ ಮೂಲಕ ರಾಜ್ಯಕ್ಕೆ ಭಾರಿ ಪ್ರಮಾಣದ ಹೂಡಿಕೆಯನ್ನು ಆಕರ್ಷಿಸಲಾಗಿದೆ. ಈ ಒಪ್ಪಂದಗಳು ಕಾರ್ಯರೂಪಕ್ಕೆ ಬರಲು ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಿಸಲಾಗುತ್ತಿದೆ. ಭಾರತ ಸರ್ಕಾರದ ಕೈಗಾರಿಕೆ ಮತ್ತು ಹೂಡಿಕೆ ಉತ್ತೇಜನ ಇಲಾಖೆಯು ಇಚಿse oಜಿ ಆoiಟಿg ಃusiಟಿess ನಲ್ಲಿ ಕರ್ನಾಟಕ ಅತ್ಯುತ್ತಮ ಸಾಧನೆ ಮಾಡಿದ ರಾಜ್ಯ ಎಂದು ಗುರುತಿಸಿದೆ.

ಬೆಂಗಳೂರಿನಿಂದಾಚೆಗೂ ಹೂಡಿಕೆ ಮಾಡಲು ಉದ್ಯಮಿಗಳು ಮುಂದಾಗಿರುವುದು, ರಾಜ್ಯದ ಎಲ್ಲ ಪ್ರದೇಶಗಳ ಅಭಿವೃದ್ಧಿಯ ದೃಷ್ಟಿಯಿಂದ ಅತ್ಯಂತ ಆಶಾದಾಯಕ ಬೆಳವಣಿಗೆಯಾಗಿದೆ. ವಿವಿಧ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಗಳ ನಿರ್ಮಾಣ, ರೈಲ್ವೆ ಯೋಜನೆಗಳ ತ್ವರಿತ ಅನುμÁ್ಠನ ಹಾಗೂ ಜಲಸಾರಿಗೆಯ ಅವಕಾಶಗಳ ಸದ್ಬಳಕೆಗೆ ಆದ್ಯತೆ, ಬಂದರುಗಳ ಅಭಿವೃದ್ಧಿಗೆ ನೀಡಲಾಗುತ್ತಿರುವ ಮಹತ್ವ ಭವಿಷ್ಯದ ದಿನಗಳಲ್ಲಿ ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಟಿಸಲಿದೆ.

ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೇಂದ್ರ ಸರ್ಕಾರವು, ರಾಜ್ಯದ ಆರ್ಥಿಕತೆಯನ್ನು ಉತ್ತೇಜಿಸಲು ಸತತವಾಗಿ ರಾಜ್ಯಕ್ಕೆ ಸಂಪೂರ್ಣ ಬೆಂಬಲ ನೀಡುತ್ತಾ ಬಂದಿದೆ. ಈ ವರ್ಷದ ಕೇಂದ್ರ ಆಯವ್ಯಯದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಆಯವ್ಯಯದಲ್ಲಿ 5,300 ಕೋಟಿ ರೂ. ಒದಗಿಸಿರುವುದು, ರೈಲ್ವೆ ಯೋಜನೆಗಳಿಗೆ ಅತಿ ಹೆಚ್ಚು ಅಂದರೆ, 7,561 ಕೋಟಿ ರೂ. ಒದಗಿಸಿರುವುದು, ಕರಾವಳಿ ನಿಯಂತ್ರಣ ವಲಯದ ನಿಬರ್ಂಧಗಳನ್ನು ಸಡಿಲಿಸಿ, ಕರಾವಳಿಯಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಅವಕಾಶ ಕಲ್ಪಿಸಿರುವುದು, ರಾಷ್ಟ್ರೀಯ ಹೆದ್ದಾರಿ, ಬಂದರು, ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಬೆಂಬಲ ಡಬಲ್ ಇಂಜಿನ್ ಸರ್ಕಾರದ ಕ್ರಿಯಾಶೀಲತೆಗೆ ನಿದರ್ಶನವಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ವಾತಂತ್ರ್ಯದ ಅಮೃತ ಮಹೋತ್ಸವದಂದು ಮುಂದಿನ 25 ವರ್ಷಗಳು ಅಮೃತ ಕಾಲ, ಕರ್ತವ್ಯದ ಕಾಲ ಎಂದು ಕರೆ ನೀಡಿದ್ದಾರೆ. ಭವ್ಯ ಕರ್ನಾಟಕ ನಿರ್ಮಾಣ ಮಾಡುವ ಆಶಯ ಈ ಆಯವ್ಯಯದ್ದಾಗಿದೆ. ಸ್ವಸ್ಥ, ಸುಶಿಕ್ಷಿತ, ಸ್ವಾವಲಂಬಿ, ಸ್ವಾಭಿಮಾನಿ ಸಮಾಜ ನಿರ್ಮಾಣದ ಮೂಲಕ ಅಭಿವೃದ್ಧಿಯ ಅಮೃತ ಎಲ್ಲರೂ ಸವಿಯುವಂತಾಗಬೇಕು. ಇಂತಹ ಭವಿಷ್ಯದ ಮುನ್ನೋಟವಿರುವ, ವಾಸ್ತವದ ಸವಾಲುಗಳನ್ನು ಮೆಟ್ಟಿ, ಸಮೃದ್ಧ ಕರ್ನಾಟಕದ ಗುರಿಯನ್ನು ಸಾಧಿಸುವ ಹಂಬಲದೊಂದಿಗೆ ಈ ಆಯವ್ಯಯವನ್ನು ಮಂಡಿಸುತ್ತಿದ್ದೇನೆ.

ರಾಜ್ಯದ ಅರ್ಥವ್ಯವಸ್ಥೆ :

ರಾಷ್ಟ್ರೀಯ ಅಂಕಿ ಅಂಶಗಳ ಕಛೇರಿಯಿಂದ ಬಿಡುಗಡೆಯಾದ ಜಿಎಸ್‍ಡಿಪಿ ಅಂದಾಜುಗಳಂತೆ ರಾಜ್ಯದ ಆರ್ಥಿಕತೆಯು ಕೋವಿಡ್ ಪೂರ್ವ ಮಟ್ಟವನ್ನು ಮೀರಿ ಚೇತರಿಸಿಕೊಂಡಿದೆ ಎಂದು ಪುನರುಚ್ಚರಿಸಿದೆ. ಆದಾಗ್ಯೂ, ಜಾಗತಿಕ ಮಟ್ಟದಲ್ಲಿನ ಬೆಳವಣಿಗೆಗಳಿಂದ ರಾಜ್ಯವು 2022ರಲ್ಲಿ ಹಣದುಬ್ಬರದ ಒತ್ತಡಕ್ಕೆ ಒಳಗಾಯಿತು. ಆರ್‍ಬಿಐ ನಿಂದ ಸಮಯೋಚಿತ ಕ್ರಮಗಳು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡರ ಜನಪರ ನೀತಿಗಳಿಂದ ಹಣದುಬ್ಬರವನ್ನು ನಿಯಂತ್ರಿಸಲು ಸಾಧ್ಯವಾಗಿದೆ.

ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ ಮುಂಗಡ ಅಂದಾಜಿನಂತೆ 2022-23ರಲ್ಲಿ ರಾಜ್ಯವು ಶೇ. 7.9 ರಷ್ಟು ಬೆಳವಣಿಗೆ ದಾಖಲಿಸಿದೆ. ವಲಯವಾರು ಬೆಳವಣಿಗೆಯನ್ನು ಗಮನಿಸಿದಾಗ, ರಾಜ್ಯದ ಆರ್ಥಿಕತೆಯ ಬೆಳವಣಿಗೆಗೆ ಸೇವಾ ಮತ್ತು ಕೈಗಾರಿಕೆ ವಲಯವು ಪ್ರಮುಖ ಕಾರಣವಾಗಿದೆ. ಕಳೆದ ಸಾಲಿಗೆ ಹೋಲಿಸಿದರೆ 2022-23ರಲ್ಲಿ ಸೇವಾ ವಲಯವು ಶೇ.9.2 ರಷ್ಟು ಮತ್ತು ಕೈಗಾರಿಕಾ ವಲಯವು ಶೇ.5.1 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಅಕಾಲಿಕ ಹವಾಮಾನ ಪರಿಸ್ಥಿತಿಗಳ ಹೊರತಾಗಿಯು ಕೃಷಿ ವಲಯವು ಶೇ.5.5 ರಷ್ಟು ಬೆಳವಣಿಗೆಯನ್ನು ಹೊಂದಿದೆ. ಇದೆಲ್ಲವುಗಳ ಪರಿಣಾಮವಾಗಿ ರಾಜ್ಯದ ತಲಾ ಆದಾಯ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2.04 ಲಕ್ಷ ರೂ. ಗಳಿಂದ 3.32 ಲಕ್ಷ ರೂ. ಗಳಿಗೆ ಹೆಚ್ಚಿದೆ.

ಆರ್ಥಿಕ ವರ್ಷ 2022-23ರ ಹೆಚ್ಚಿನ ಜಿ.ಎಸ್.ಡಿ.ಪಿ. ಬೆಳವಣಿಗೆ ದರವು ಬಂಡವಾಳ ವೆಚ್ಚವನ್ನು ಹೆಚ್ಚಿಸಲು, ಹೂಡಿಕೆಯನ್ನು ಆಕರ್ಷಿಸಲು ಮತ್ತು ಬೃಹತ್ ಮಟ್ಟದಲ್ಲಿ ಉದ್ಯೋಗವನ್ನು ಸೃಷ್ಠಿಸಲು ರಾಜ್ಯ ಸರ್ಕಾರವು ಕೈಗೊಂಡ ಕೇಂದ್ರೀಕೃತ ಕ್ರಮಗಳಿಗೆ ಪ್ರತಿಬಿಂಬವಾಗಿದೆ.

ರಾಜ್ಯದ ಹಣಕಾಸು ಪರಿಸ್ಥಿತಿ:

2022-23ರಲ್ಲಿ ರಾಜ್ಯದ ಹಣಕಾಸಿನ ಪರಿಸ್ಥಿತಿಯು ಸದೃಢವಾಗಿದ್ದು, ಉತ್ತಮ ಬೆಳವಣಿಗೆ ಕಂಡಿದೆ. ಆರ್ಥಿಕ ಚಟುವಟಿಕೆಗಳ ವೃದ್ಧಿಯಿಂದ ರಾಜ್ಯದ ರಾಜಸ್ವ ಸಂಗ್ರಹಣೆಯಲ್ಲಿ ಹೆಚ್ಚಳವಾಗಿದೆ.

ಆರ್ಥಿಕ ಬೆಳವಣಿಗೆಯೊಂದಿಗೆ ಬೇಡಿಕೆ ಹೆಚ್ಚಾದ್ದರಿಂದ ವಾರ್ಷಿಕ ಜಿಎಸ್‍ಟಿ ಸಂಗ್ರಹಣೆಯು 2021-22ರ ಜನವರಿ ತಿಂಗಳ ಅಂತ್ಯಕ್ಕೆ ಹೋಲಿಸಿದರೆ ಶೇ.26 ರಷ್ಟು ಬೆಳವಣಿಗೆಯಾಗಿರುತ್ತದೆ. ಅದೇ ರೀತಿ ಮೋಟಾರು ವಾಹನಗಳ ತೆರಿಗೆ ಮತ್ತು ಮುದ್ರಾಂಕ ಮತ್ತು ನೋಂದಣಿ ಶುಲ್ಕವು ಸಹ ಹೆಚ್ಚಳವಾಗಿರುತ್ತದೆ. ಒಟ್ಟಾರೆಯಾಗಿ, ಆರ್ಥಿಕ ವರ್ಷ 2021-22ಕ್ಕೆ ಹೋಲಿಸಿದರೆ ಜನವರಿ ಅಂತ್ಯದವರೆಗೆ ರಾಜ್ಯದ ಸ್ವಂತ ತೆರಿಗೆಗಳ ಸಂಗ್ರಹವು ಶೇ. 21 ರಷ್ಟು ಹೆಚ್ಚಾಗಿದೆ.

ಕೇಂದ್ರ ಸರ್ಕಾರದ ನೇರ ಮತ್ತು ಪರೋಕ್ಷ ತೆರಿಗೆಯ ಹೆಚ್ಚಳದಿಂದ ರಾಜ್ಯದ ತೆರಿಗೆ ಪಾಲು 4,813 ಕೋಟಿ ರೂ.ಗಳಷ್ಟು ಹೆಚ್ಚಳವಾಗಿದೆ. ಮುಂದುವರೆದು ಕೇಂದ್ರ ಸರ್ಕಾರವು 2023-24 ನೇ ಸಾಲಿಗೆ ರಾಜ್ಯಕ್ಕೆ 37,252 ಕೋಟಿ ರೂ.ಗಳ ತೆರಿಗೆ ಪಾಲನ್ನು ಅಂದಾಜಿಸಿದೆ. ಇದು 2022-23ರ ಆಯವ್ಯಯ ಅಂದಾಜಿಗೆ ಹೋಲಿಸಿದರೆ ಶೇ.25 ರಷ್ಟು ಹೆಚ್ಚಾಗಿದೆ. ಕೇಂದ್ರ ಸರ್ಕಾರವು ರಾಜ್ಯದ ತೆರಿಗೆ ಪಾಲನ್ನು ಹೆಚ್ಚಿಸಿರುವುದರಿಂದ ರಾಜ್ಯ ಸರ್ಕಾರವು ವಿತ್ತೀಯ ಸುಸ್ಥಿರತೆಯನ್ನು ಕಂಡುಕೊಳ್ಳಲು ಸಹಕಾರಿಯಾಗಲಿದೆ.

ರಾಜ್ಯದ ಸ್ವಂತ ರಾಜಸ್ವ ಸಂಗ್ರಹಣೆ ಮತ್ತು ಕೇಂದ್ರ ಸರ್ಕಾರದ ತೆರಿಗೆ ಪಾಲಿನ ಹೆಚ್ಚಳವು 2022-23ರ ಪರಿಷ್ಕøತ ಅಂದಾಜಿನಲ್ಲಿ ರಾಜ್ಯದ ರಾಜಸ್ವ ಕೊರತೆಯನ್ನು 8,703 ಕೋಟಿ ರೂ.ಗಳಷ್ಟು ಕಡಿಮೆ ಮಾಡಲು ಸಹಕಾರಿಯಾಗಿದೆ. ಇದರೊಂದಿಗೆ ವಿತ್ತೀಯ ಸುಸ್ಥಿರತೆಯ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಅಂದಾಜಿಸಿದ ಸಾಲವನ್ನು ಪೂರ್ಣಪ್ರಮಾಣದಲ್ಲಿ ಪಡೆಯದೆ ನಿಯಂತ್ರಿಸಲಾಗುವುದು.

ಕೋವಿಡ್-19 ಪಿಡುಗಿನ ಕೆಲವು ವರ್ಷಗಳನ್ನು ಹೊರತುಪಡಿಸಿದರೆ, ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಅಧಿನಿಯಮ, 2002ರಲ್ಲಿ ನಿರ್ದಿಷ್ಟಪಡಿಸಲಾದ ವಿತ್ತೀಯ ಮಾನದಂಡಗಳನ್ನು ರಾಜ್ಯವು ಪಾಲಿಸುತ್ತಾ ಬಂದಿದೆ. ಆದಾಗ್ಯೂ ಕೋವಿಡ್-19 ಪಿಡುಗಿನಿಂದಾಗಿ, ರಾಜ್ಯದ ಆರ್ಥಿಕ ಪರಿಸ್ಥಿತಿಯು ತೀವ್ರವಾಗಿ ಬಾಧಿಸಲ್ಪಟ್ಟಿದ್ದು, ಇದರಿಂದ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡಗಳ ಪಾಲನೆಯಾಗಿಲ್ಲ.

ನಮ್ಮ ಸರ್ಕಾರವು ಅನುμÁ್ಠನಗೊಳಿಸಿದ ಹಲವಾರು ಪ್ರಗತಿಪರ ನೀತಿಗಳ ಪರಿಣಾಮವಾಗಿ ಹಾಗೂ ವಿತ್ತೀಯ ಕ್ರೋಡೀಢೀಕರಣ ಮತ್ತು ವಿತ್ತೀಯ ಶಿಸ್ತಿಗೆ ತೋರಿದ ಅಚಲ ಬದ್ಧತೆಯಿಂದಾಗಿ ರಾಜ್ಯದ ಆರ್ಥಿಕತೆಯನ್ನು ಪುನಃ ಪ್ರಗತಿ ಪಥದಲ್ಲಿ ಕೊಂಡೊಯ್ಯಲು ಸಾಧ್ಯವಾಗಿರುತ್ತದೆ. ರಾಜಸ್ವ ಸಂಗ್ರಹಣೆ ಇಲಾಖೆಗಳಿಗೆ ತೆರಿಗೆ ಸಂಗ್ರಹಣೆಯಲ್ಲಿ ಸಂಪೂರ್ಣ ಸ್ವಾತಂತ್ರ್ಯ ನೀಡಿ ಹಾಗೂ ತೆರಿಗೆ ಸಿಬ್ಬಂದಿಗಳನ್ನು ನಿರಂತರವಾಗಿ ಪೆÇ್ರೀತ್ಸಾಹಿಸಿ, ರಾಜ್ಯದ ರಾಜಸ್ವಗಳನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದ್ದೇವೆನೆ. ನಮ್ಮ ಸರ್ಕಾರದ ಸಂಘಟಿತ ಪ್ರಯತ್ನಗಳ ಫಲವಾಗಿ ಇಂದು, ನಾನು ಈ ಘನ ಸದನದಲ್ಲಿ 2023-24ನೇ ಸಾಲಿನ ಆಯವ್ಯಯವನ್ನು ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮ, 2002ರ ಎಲ್ಲಾ ಮಾನದಂಡಗಳನ್ನು ಪೂರೈಸುವ ಮೂಲಕ ರಾಜಸ್ವ ಹೆಚ್ಚಳದ ಆಯವ್ಯಯವನ್ನು ಮಂಡಿಸುತ್ತಿದ್ದೇನೆಂದು ಹೆಮ್ಮೆಯಿಂದ ಹೇಳಿದರು.

ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ:

ಶಿಕ್ಷಣ ಹಾಗೂ ಆರೋಗ್ಯ ಸೇವೆಗಳು ಎಲ್ಲ ವರ್ಗಗಳ, ಎಲ್ಲ ಪ್ರದೇಶಗಳ ಜನರಿಗೆ ಸುಲಭವಾಗಿ ದೊರೆಯುವಂತೆ ಮಾಡುವುದು ನಮ್ಮ ಆದ್ಯತೆಯಾಗಿದೆ.  ಅಂತೆಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು, ಹಿಂದುಳಿದ ವರ್ಗಗಳು ಅಲ್ಪಸಂಖ್ಯಾತ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಜಾರಿಯಲ್ಲಿರುವ ಯೋಜನೆಗಳನ್ನು ಸರಳ, ಸುಗಮಗೊಳಿಸುವ ಜೊತೆಗೆ ನೂತನ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.

ಕಳೆದ ಆಯವ್ಯಯದಲ್ಲಿ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳನ್ನು ಗುರುತಿಸಿ ಅಂತಹ ತಾಲ್ಲೂಕುಗಳಲ್ಲಿ ಶಿಕ್ಷಣ, ಆರೋಗ್ಯ ಮತ್ತು ಪೌಷ್ಟಿಕತೆ ಸಂಬಂಧಿಸಿದ ಸೂಚ್ಯಂಕಗಳನ್ನು ರಾಜ್ಯ ಸರಾಸರಿಗಿಂತ ಹೆಚ್ಚು ಮಾಡಲು 3,000 ಕೋಟಿ ರೂ. ಗಳ ಯೋಜನೆಗಳನ್ನು ನಾನು ಘೋಷಿಸಿದ್ದೇನೆ. ಇದರಡಿಯಲ್ಲಿ ತೆಗೆದುಕೊಂಡಿರುವ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿಯಲ್ಲಿ ಮೂಲಭೂತ ಸೌಕರ್ಯ ಹಾಗೂ ಅಗತ್ಯ ಮಾನವ ಸಂಪನ್ಮೂಲಗಳನ್ನು ಒದಗಿಸಿ ಸರ್ಕಾರದ ವಿವಿಧ ಸೇವೆಗಳನ್ನು ಜನರಿಗೆ ತಲುಪಿಸಲು ಕ್ರಮವಹಿಸಲಾಗುವುದು.

2022-23ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಬಿಸಿಯೂಟ ತಯಾರಕರು, ಬಿಸಿಯೂಟ ಸಹಾಯಕರು, ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು, ಗ್ರಾಮ ಸಹಾಯಕರು, ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರುಗಳ ಗೌರವಧನ ಹೆಚ್ಚಿಸಲಾಗಿದೆ. ಇದರಿಂದ 4.45 ಲಕ್ಷ ಜನರಿಗೆ ಫಲ ದೊರೆತಿದ್ದು, ಒಟ್ಟು 775 ಕೋಟಿ ರೂ. ಗಳನ್ನು ಪ್ರಸಕ್ತ ವರ್ಷದಲ್ಲಿ ಬಿಡುಗಡೆ ಮಾಡಲಾಗಿದೆ.

ಸಮಾಜದ ಏಳಿಗೆಗೆ ಮಾನವ ಅಭಿವೃದ್ಧಿ ಸೂಚ್ಯಂಕವನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ  ಶಿಕ್ಷಣ, ಆರೋಗ್ಯ ಹಾಗೂ ಪೌಷ್ಟಿಕತೆ ವಲಯಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರು ಹಾಗೂ ಸಹಾಯಕರು ಮತ್ತು ಗ್ರಂಥಪಾಲಕರ ಸೇವೆಯನ್ನು ಗುರುತಿಸಿ, ಅವರಿಗೆ ನೀಡುವ ಮಾಸಿಕ ಗೌರವಧನವನ್ನು 1,000 ರೂ. ದಂತೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ 725 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. 2022-23ನೇ ಸಾಲಿನಲ್ಲಿ ಈ ಸೌಲಭ್ಯವನ್ನು ಭೂರಹಿತ ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರು ಹಾಗೂ ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದ್ದು, ಹೆಚ್ಚುವರಿಯಾಗಿ 3 ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯನ್ನು ರಾಜ್ಯದ ಸಿಂಪಿಗರ ಮಕ್ಕಳಿಗೂ ವಿಸ್ತರಿಸಲಾಗುವುದು.

ರಾಜ್ಯದ ಶಿಕ್ಷಣ ವಲಯದಲ್ಲಿ ಈ ದಿನ ಅವಿಸ್ಮರಣೀಯ ದಿನವಾಗಲಿದೆ. ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹೊಂದಲು ಅನುವು ಮಾಡಿಕೊಡುವ ದೃಷ್ಟಿಯಿಂದ ʻಮುಖ್ಯಮಂತ್ರಿ ವಿದ್ಯಾಶಕ್ತಿʼ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಇದರಡಿಯಲ್ಲಿ ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳು ಅನುಕೂಲ ಪಡೆಯಲಿದ್ದಾರೆ.

ರಾಜ್ಯದಲ್ಲಿ ಈಗಾಗಲೇ 19 ಲಕ್ಷ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ ಸಾರ್ವಜನಿಕ ಬಸ್ಸುಗಳ ಸೇವೆಯನ್ನು ಅವಲಂಬಿಸಿರುತ್ತಾರೆ. ಇಂತಹ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವರ್ಷದಲ್ಲಿ ಸಾರಿಗೆ ನಿಗಮಗಳ ಮೂಲಕಳಿಂದ 100 ಕೋಟಿ ರೂ. ವೆಚ್ಚದಲ್ಲಿ 1,000 ಹೊಸ ಕಾರ್ಯಾಚರಣೆಗಳನ್ನು ಮಾಡಲು ʻಮಕ್ಕಳ ಬಸ್ಸುʼ ಎಂಬ ಯೋಜನೆಯನ್ನು ಪ್ರಾರಂಭಿಸಲಾಗುವುದು. ಉದ್ದೇಶಿಸಲಾಗಿದೆ. ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ರಾಜ್ಯ ಸರ್ಕಾರವು ಶಾಲಾ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವ ಮೂಲಕ ವಿದ್ಯಾರ್ಥಿಗಳಿಗೆ ಕಲಿಕಾ ವಾತಾವರಣವನ್ನು ಕಲ್ಪಿಸುವ ಉದ್ದೇಶವನ್ನು ಹೊಂದಿದೆ.  ಈ ನಿಟ್ಟಿನಲ್ಲಿ ವಿವೇಕ ಯೋಜನೆಯಡಿಯಲ್ಲಿ 7,601 ಶಾಲಾ ಮತ್ತು ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿಗಳನ್ನು 1,194 ಕೋಟಿ ರೂ. ವೆಚ್ಚದಲ್ಲಿ ಅನುμÁ್ಠನಗೊಳಿಸಲಾಗುತ್ತಿದೆ. ಅಲ್ಲದೇ ಇಲಾಖೆಯ ಇತರೆ ಯೋಜನೆಗಳಡಿ ಹೆಚ್ಚುವರಿಯಾಗಿ 1,955 ಕೊಠಡಿಗಳನ್ನು 382 ಕೋಟಿ ರೂ. ವೆಚ್ಚದಲ್ಲಿ ಅನುಮೋದಿಸಲಾಗಿದೆ. ಒಟ್ಟಾರೆಯಾಗಿ ಹಿಂದಿನ ವರ್ಷದಲ್ಲಿ 1,576 ಕೋಟಿ ರೂ. ಗಳ ವೆಚ್ಚದಲ್ಲಿ 9,556 ಶಾಲಾ ಕಾಲೇಜುಗಳ ಕೊಠಡಿಗಳನ್ನು ನಿರ್ಮಾಣ ಮಾಡಲು ಕೈಗೊಂಡಿರುವ ಈ ಕ್ರಮವು ರಾಜ್ಯದ ಇತಿಹಾಸದಲ್ಲಿ ದಾಖಲೆಯಾಗಿದೆ. ಈ ಎಲ್ಲಾ ಕೆಲಸಗಳು ತ್ವರಿತಗತಿಯಲ್ಲಿ ಮುಂದುವರೆಯುತ್ತಿದ್ದು, ಶೀಘ್ರದಲ್ಲಿಯೇ ಪೂರ್ಣ ಗೊಳಿಸಲಾಗುವುದು.

ಉತ್ತಮ ಮೂಲಭೂತ ಸೌಕರ್ಯಗಳು ಮತ್ತು ಸೂಕ್ತ ಕಲಿಕಾ ಸಂಪನ್ಮೂಲಗಳನ್ನು ಮಕ್ಕಳಿಗೆ ಒದಗಿಸಲು ಹೊಸ ಕೇಂದ್ರ ಪುರಸ್ಕೃತ ಯೋಜನೆಯಾದ “ಪಿಎಂ ಶ್ರೀ” ಯನ್ನು 100 ಕೋಟಿ ರೂ. ವೆಚ್ಚದಲ್ಲಿ ಅನುμÁ್ಠನಗೊಳಿಸಲಾಗುವುದು.

ನರೇಗಾ ಸಂಯೋಜನೆಯೊಂದಿಗೆ 250 ಕೋಟಿ ರೂ. ಅಂದಾಜು ವೆಚ್ಚದಲ್ಲಿ 7,750 ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಶೌಚಾಲಯಗಳ ಸಂಪೂರ್ಣ ಬೇಡಿಕೆಯನ್ನು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಮಾರ್ಚ್ 2023ರ ಅಂತ್ಯದಲ್ಲಿ 2,169 ಶೌಚಾಲಯಗಳು ಪೂರ್ಣಗೊಳ್ಳಲಿವೆ. ಉಳಿದ 5,581 ಶೌಚಾಲಯಗಳನ್ನು 2023-24ನೇ ಸಾಲಿನಲ್ಲಿ ನಿರ್ಮಿಸಲಾಗುವುದು. ಇದಕ್ಕೆ ಒಟ್ಟು 80 ಕೋಟಿ ರೂ. ಹಂಚಿಕೆ ಮಾಡಿದ್ದು, ಅದರಲ್ಲಿ 50 ಕೋಟಿ ರೂ. ಗಳನ್ನು ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಒದಗಿಸಲಾಗಿದೆ.

ರಾಜ್ಯದ 93 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಒದಗಿಸಲು ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ 632 ಕೋಟಿ ರೂ. ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು.
ಕಳೆದ ವರ್ಷದಲ್ಲಿ 2,284 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಿದ್ದು, ಪ್ರಸಕ್ತ ವರ್ಷದಲ್ಲಿ ಹೆಚ್ಚುವರಿಯಾಗಿ 1,230 ಕೊಠಡಿಗಳ ನಿರ್ಮಾಣ. ಹಳೆಯ ಮತ್ತು ಅಧಿಕ ಮಳೆಯಿಂದಾಗಿ ಹಾನಿಯಾಗಿರುವ 2,777 ಕೊಠಡಿಗಳ ದುರಸ್ತಿ. ಅಧಿಕ ದಾಖಲಾತಿಯಿರುವ ಶಾಲಾ-ಕಾಲೇಜುಗಳಲ್ಲಿ ಹೆಚ್ಚುವರಿ ಶೌಚಾಲಯಗಳ ನಿರ್ಮಾಣ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿಯಾಗಿ 260 ತರಗತಿ ಕೊಠಡಿಗಳ ನಿರ್ಮಾಣ. ಆಯ್ದ 60 ತಾಲ್ಲೂಕುಗಳಲ್ಲಿ ತಲಾ ಒಂದು ಪದವಿ ಪೂರ್ವ ಕಾಲೇಜನ್ನು ಗುರುತಿಸಿ ವಿಜ್ಞಾನ ಶಿಕ್ಷಣಕ್ಕಾಗಿ ಅಗತ್ಯ ಸೌಲಭ್ಯ ನೀಡುವ ಮೂಲಕ ಆದರ್ಶ ಪದವಿ ಪೂರ್ವ ಕಾಲೇಜುಗಳ ಅಭಿವೃದ್ಧಿಗೆ ಕ್ರಮ. 30 ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯಗಳಲ್ಲಿ ಡಾರ್‍ಮೆಂಟರಿ ನಿರ್ಮಾಣ, 47 ವಸತಿ ಶಾಲೆಗಳ ದುರಸ್ತಿ ಮತ್ತು ಸ್ಮಾರ್ಟ್ ಕೊಠಡಿಗಳ ಅಭಿವೃದ್ಧಿ ಮಾಡಲಾಗುವುದು.

ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವ ಮೂಲಕ ವಿದ್ಯಾರ್ಥಿಗಳ ಕಲಿಕೆಯ ಮಟ್ಟವನ್ನು ಹೆಚ್ಚಿಸಿ, ಫಲಿತಾಂಶ ಉತ್ತಮ ಪಡಿಸಲು 135 ಕೋಟಿ ರೂ. ಅನುದಾನದಲ್ಲಿ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮತ್ತು ಆವಿμÁ್ಕರಾತ್ಮಕ ಮನೋಭಾವ ಬೆಳೆಸಲು 73 ಕರ್ನಾಟಕ ಪಬ್ಲಿಕ್ ಶಾಲೆಗಳು ಮತ್ತು 50 ಆದರ್ಶ ವಿದ್ಯಾಲಯಗಳಲ್ಲಿ 15 ಕೋಟಿ ರೂ. ವೆಚ್ಚದಲ್ಲಿ “ʻಸೃಷ್ಟಿʼ” ಟಿಂಕರಿಂಗ್ ಪ್ರಯೋಗಾಲಯಗಳ ಸ್ಥಾಪನೆ. ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಹೊಂದಿಲ್ಲದ 23 ತಾಲ್ಲೂಕುಗಳಲ್ಲಿ ಹೊಸದಾಗಿ ಶಾಲೆಗಳನ್ನು ನಿರ್ಮಿಸಲು ಮತ್ತು ಕಾರ್ಯನಿರ್ವಹಿಸುತ್ತಿರುವ 46 ಶಾಲೆಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು.

ಪ್ರಚಲಿತ ವಿದ್ಯಮಾನಗಳ ಕುರಿತು ಆಸಕ್ತಿ ಹಾಗೂ ಅರಿವು ಹೊಂದಲು ಅನುವಾಗುವಂತೆ 24,347 ಶಾಲೆಗಳಲ್ಲಿ 20 ಕೋಟಿ ರೂ. ಅನುದಾನದಲ್ಲಿ ಪುಸ್ತಕ, ಪತ್ರಿಕೆ ಹಾಗೂ ನಿಯತಕಾಲಿಕೆಗಳನ್ನು ಒದಗಿಸುವ ಮೂಲಕ ಗ್ರಂಥಾಲಯಗಳ ಬಲವರ್ಧನೆ ಹಾಗೂ ರೀಡಿಂಗ್ ಕಾರ್ನರ್ಗಳನ್ನು ಸ್ಥಾಪಿಸಲಾಗುವುದು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಉದ್ದೇಶದಿಂದ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಜೆ-ಪಾಲ್ ಲ್ಯಾಬ್ ಸಹಯೋಗದೊಂದಿಗೆ ಪರಿಹಾರಾತ್ಮಕ ಚಟುವಟಿಕೆ ʻಅಭ್ಯುದಯʼ ಕಾರ್ಯಕ್ರಮ ಅನುμÁ್ಠನ ಮಾಡಲಾಗುವುದು.

ಬೀದರ್, ಹಾವೇರಿ, ಚಾಮರಾಜನಗರ, ಬಾಗಲಕೋಟೆ, ಕೊಡಗು, ಕೊಪ್ಪಳ ಮತ್ತು ಹಾಸನ ಜಿಲ್ಲೆಗಳಲ್ಲಿ 7 ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ ಮತ್ತು ಮಂಡ್ಯ ವಿಶ್ವವಿದ್ಯಾಲಯವನ್ನು ಸಂಯೋಜಿತ ವಿಶ್ವವಿದ್ಯಾಲಯವನ್ನಾಗಿ ಪರಿವರ್ತಿಸಲಾಗಿದೆ. ಈ ವರ್ಷದಲ್ಲಿ ಚಿಕ್ಕಮಗಳೂರಿನಲ್ಲಿ ಹೊಸ ವಿಶ್ವವಿದ್ಯಾಲಯವನ್ನು ತಂತ್ರಜ್ಞಾನದ ಗರಿಷ್ಠ ಬಳಕೆಯೊಂದಿಗೆ ಮತ್ತು ಕಡಿಮೆ ಮಾನವ ಸಂಪನ್ಮೂಲಗಳನ್ನು ಒಳಗೊಂಡಂತೆ ಸ್ಥಾಪಿಸಲಾಗುವುದು ಮತ್ತು ಶಿಗ್ಗಾಂವ್ ತಾಲ್ಲೂಕಿನ ಬಂಕಾಪುರದಲ್ಲಿರುವ ಪಾಲಿಟೆಕ್ನಿಕ್‍ನ್ನು ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನಾಗಿ ಉನ್ನತೀಕರಿಸಲಾಗುವುದು.

ಕಳೆದ ಆಯವ್ಯಯದಲ್ಲಿ ಘೋಷಿಸಿದಂತೆ ಮುಂದಿನ 5 ವರ್ಷಗಳಲ್ಲಿ ಐಐಟಿ ಮಾದರಿಯಲ್ಲಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗಳಾಗಿ ಉನ್ನತೀಕರಿಸಲು ಬೆಂಗಳೂರು, ಹಾವೇರಿ, ಹಾಸನ, ಕೆ.ಆರ್.ಪೇಟೆ, ತಳ್ಕಲ್, ರಾಮನಗರ ಹಾಗೂ ಕಾರವಾರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಗುರುತಿಸಲಾಗಿದೆ. ಪೆÇ್ರ. ಸಡಗೋಪನ್ ನೇತೃತ್ವದ ತಜ್ಞರ ಸಮಿತಿಯು ಕೆಐಟಿಗಳಾಗಿ ಅಭಿವೃದ್ಧಿಪಡಿಸಲು ಅಗತ್ಯವಿರುವ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳ ಕುರಿತು ವರದಿ ಸಲ್ಲಿಸಿದೆ. ಸದರಿ ಸಮಿತಿಯ ಶಿಫಾರಸ್ಸಿನನ್ವಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಉದ್ದೇಶಕ್ಕಾಗಿ 50 ಕೋಟಿ ರೂ. ಗಳನ್ನು ನೀಡಲಾಗಿದೆ.

ಉನ್ನತ ಶಿಕ್ಷಣ ಪಡೆಯಲು ಇರುವ ಭಾμÉಯ ತೊಡಕು ನಿವಾರಿಸಲು ಕರ್ನಾಟಕದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಹಾಗೂ ವೃತ್ತಿಪರ ಕೋರ್ಸುಗಳಲ್ಲಿ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅನುವಾಗುವಂತೆ ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್ ಪುಸ್ತಕಗಳು ಹಾಗೂ ಪಠ್ಯ ವಿಷಯಗಳನ್ನು ಮುಂದಿನ ಒಂದು ವರ್ಷದಲ್ಲಿ ಭಾμÁಂತರಿಸಲು ಕ್ರಮ ಕೈಗೊಳ್ಳಲಾಗುವುದು.

ವಿಜ್ಞಾನ ಮತ್ತು ತಂತ್ರಜ್ಞಾನದ ವೃತ್ತಿಪರ ಕೋಸ್ರ್ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದಕ್ಕೆ ರಾಜ್ಯದಲ್ಲಿ 100 ಆಯ್ದ ಪದವಿ ಕಾಲೇಜುಗಳಲ್ಲಿ ಪೆÇ್ರ. ಸಿ.ಎನ್.ಆರ್. ರಾವ್ ವಿಜ್ಞಾನ ಕಾರ್ಯಕ್ರಮದಡಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲಾಗುವುದು.

ʻಹಳ್ಳಿ ಮುತ್ತುʼ ಎಂಬ ಯೋಜನೆಯಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣವನ್ನು ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಅವರು ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸಲಾಗುವುದು.

ಸಾರ್ವಜನಿಕ ವಿಶ್ವವಿದ್ಯಾಲಯಗಳ ಆಡಳಿತ ವ್ಯವಸ್ಥೆಯನ್ನು ಉತ್ತಮ ಪಡಿಸಲು 10 ಸುಶಾಸನ ಸೂಚ್ಯಂಕಗಳನ್ನು ರಚಿಸಲಾಗಿದೆ. ಇದರನ್ವಯ ಅತ್ಯುತ್ತಮ ಸಾಧನೆ ಮಾಡುವ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷ ರೂ. ಗಳಂತೆ ಪೆÇ್ರೀತ್ಸಾಹಧನ ನೀಡಲಾಗುವುದು.

ಬೆಂಗಳೂರು ನಗರದ ಕೇಂದ್ರ ಭಾಗದ 5 ಕಿ.ಮೀ. ವ್ಯಾಪ್ತಿಯೊಳಗಿರುವ ಪಾರಂಪರಿಕ ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಪ್ರದೇಶವನ್ನು ಪಾರಂಪರಿಕ ಮತ್ತು ಶೈಕ್ಷಣಿಕ ಜಿಲ್ಲೆಯಾಗಿ ಘೋಷಿಸುವ ನಿಟ್ಟಿನಲ್ಲಿ ಕಾರ್ಯಸಾಧ್ಯತೆ ಅಧ್ಯಯನ ಮಾಡಲಾಗುವುದು.
ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ ಮತ್ತು ಡಿಜಿ-ಲಾಕರ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಕ್ರಮ ವಹಿಸಲಾಗುವುದು. ಪಿ.ಹೆಚ್.ಡಿ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳಲ್ಲಿ ಸರಳ ಹಾಗೂ ಪಾರದರ್ಶಕ ಪ್ರವೇಶಾವಕಾಶಕ್ಕೆ ಏಕರೂಪ ವ್ಯವಸ್ಥೆ ಕಲ್ಪಿಸಲಾಗುವುದು.

ಪ್ರತಿ ಜಿಲ್ಲೆಯಲ್ಲಿ ಒಂದರಂತೆ, ಅತಿ ಹೆಚ್ಚು ದಾಖಲಾತಿ ಹೊಂದಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್‍ಗಳಿಗೆ ʻವೃದ್ಧಿʼ ಯೋಜನೆಯಡಿ ತಲಾ 2 ಕೋಟಿ ರೂ. ನಂತೆ ಒಟ್ಟು 124 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಇವುಗಳನ್ನು ಅತ್ಯುತ್ತಮ ಉನ್ನತ ಶಿಕ್ಷಣ ಸಂಸ್ಥೆಗಳಾಗಿ ರೂಪಿಸಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಅನ್ನು ಪ್ರಾರಂಭಿಸಲಾಗುವುದು. ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗೂ ದೇಶಕ್ಕಾಗಿ ಸಮರ್ಪಣಾ ಭಾವವನ್ನು ಮೂಡಿಸಲು ರಾಜ್ಯದಲ್ಲಿ ಈ ವರ್ಷ 2 ಹೊಸ ಎನ್.ಸಿ.ಸಿ. ಘಟಕಗಳನ್ನು ಸ್ಥಾಪಿಸಲಾಗುವುದು.

ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಉನ್ನತ ಶಿಕ್ಷಣವನ್ನು ಬಲಪಡಿಸಲು ಒಟ್ಟು 125 ಕೋಟಿ ರೂ. ವೆಚ್ಚದಲ್ಲಿ ಈ ಕೆಳಕಂಡ ಯೋಜನೆಗಳನ್ನು ರೂಪಿಸಲಾಗಿದೆ. ಕೊಠಡಿಗಳು, ಶೌಚಾಲಯಗಳು ಮತ್ತು ವಿಜ್ಞಾನ ಪ್ರಯೋಗಾಲಯಗಳನ್ನು ನಿರ್ಮಾಣ ಮಾಡಲಾಗುವುದು. “`ವಿದ್ಯಾವರ್ಧಿನಿ”’ ಯೋಜನೆಯಡಿ ಎಲ್ಲಾ  ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್ಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳು ಹಾಗೂ ಶೈಕ್ಷಣಿಕ ಉಪಕರಣಗಳನ್ನು ಒದಗಿಸಲಾಗುವುದು. ವಿದ್ಯಾರ್ಥಿನಿಯರ ದೈಹಿಕ ಸಾಮಥ್ರ್ಯ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಎಲ್ಲಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಯೋಗ ತರಬೇತಿ ನೀಡಲಾಗುವುದು.

ಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯ’ ಎಂಬ ಧ್ಯೇಯದೊಂದಿಗೆ ಆರೋಗ್ಯ ಸೇವೆಗಳನ್ನು ತಳಹಂತದಲ್ಲಿಯೂ ಬಲಪಡಿಸಲು ಹಾಗೂ ಜನರಿಗೆ ಸ್ಥಳೀಯವಾಗಿ, ಸುಲಭವಾಗಿ ತಜ್ಞರ ಸೇವೆಯನ್ನು ಒದಗಿಸಲು 2022-23ನೇ ಸಾಲಿನಲ್ಲಿ ಘೋಷಿಸಿದಂತೆ 100 ಸಮುದಾಯ ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ 53 ಸಮುದಾಯ ಆರೋಗ್ಯ ಕೇಂದ್ರಗಳು, 26 ತಾಲ್ಲೂಕು ಆಸ್ಪತ್ರೆ ಹಾಗೂ ಒಂದು1 ಜಿಲ್ಲಾ ಆಸ್ಪತ್ರೆಯನ್ನು ಉನ್ನತೀಕರಿಸಿ, ಲೋಕಾರ್ಪಣೆ ಮಾಡಲಾಗಿದ್ದು, ಉಳಿದ ಕಾಮಗಾರಿಗಳು ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿವೆ. ಇದಕ್ಕಾಗಿ ಒಟ್ಟು 781 ಕೋಟಿ ರೂ. ಗಳನ್ನು ಒದಗಿಸಲಾಗಿದೆ.  ರಾಜ್ಯದ 45 ತಾಲ್ಲೂಕು ಆಸ್ಪತ್ರೆಗಳನ್ನು ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಮ್ಯಾಪಿಂಗ್ ಮಾಡುವ ಮೂಲಕ ಸ್ಥಳೀಯವಾಗಿ ಹೃದ್ರೋಗ ಚಿಕಿತ್ಸೆ ಒದಗಿಸಲು ಕ್ರಮ ವಹಿಸಲಾಗಿದೆ.

ತಾಲ್ಲೂಕು ಆಸ್ಪತ್ರೆಗಳಿಲ್ಲದ ಖಾನಾಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮಥ್ರ್ಯದ ತಾಲ್ಲೂಕು ಆಸ್ಪತ್ರೆಯನ್ನಾಗಿ ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು.

ಆಯುμÁ್ಮನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಹೆಚ್ಚಿನ ಖಾಸಗಿ ಆಸ್ಪತ್ರೆಗಳನ್ನು ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ರಕ್ತಹೀನತೆಯ ದೊಡ್ಡ ಸವಾಲನ್ನು ಎದುರಿಸಲು ಬಹು ಆಯಾಮಗಳ ದೃಷ್ಟಿಕೋನದೊಂದಿಗೆ ವಿಶೇಷ ಯೋಜನೆಯನ್ನು ರೂಪಿಸಲಾಗಿದೆ. ಇದರಡಿಯಲ್ಲಿ ಐiಜಿe ಅಥಿಛಿಟe ಂಠಿಠಿಡಿoಚಿಛಿh ಮೂಲಕ ಆರೋಗ್ಯ ಪುಷ್ಟಿ ಎಂಬ ಯೋಜನೆಯನ್ನು ಅನುμÁ್ಠನಗೊಳಿಸಲು ತೀರ್ಮಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ ನವಜಾತ ಶಿಶುಗಳು, ಮಕ್ಕಳು, ಹದಿಹರೆಯದವರು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಲ್ಲಿ ಮತ್ತು ಸಂತಾನೋತ್ಪತ್ತಿ ವಯಸ್ಸಿನ (15-49 ವರ್ಷಗಳು) ಮಹಿಳೆಯರಲ್ಲಿ ರಕ್ತಹೀನತೆ ಹಾಗೂ ಅಪೌಷ್ಟಿಕತೆಯನ್ನು ನಿವಾರಿಸಲು ಉದ್ದೇಶಿತ ಪರೀಕ್ಷೆ, ಚಿಕಿತ್ಸೆ, ಜನಜಾಗೃತಿ ಹಾಗೂ ತರಬೇತಿಗೆ 100 ಕೋಟಿ ರೂ. ಗಳನ್ನು ಒದಗಿಸಲಾಗಿದೆ.

ಮನೆ ಮನೆಗೆ ಆರೋಗ್ಯ ಎಂಬ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಗ್ರಾಮೀಣ ಜನತೆಗೆ 2023-24ನೇ ಸಾಲಿನಲ್ಲಿ ಎರಡು ಬಾರಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರಗಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಆಯೋಜಿಸಲಾಗುವುದು. ಇದರಿಂದ ತೀವ್ರವಾದ ಕಾಯಿಲೆಗಳನ್ನು ಆರಂಭದಲ್ಲಿಯೇ ಪತ್ತೆಹಚ್ಚಿ ಜನರ ಆರೋಗ್ಯ ಕಾಪಾಡುವ ಗುರಿ ಹೊಂದಲಾಗಿದೆ. ಇದರೊಂದಿಗೆ ಈ ಯೋಜನೆಯಡಿ ದೀರ್ಘಕಾಲಿಕ ಕಾಯಿಲೆಗಳಿಂದ ಬಳಲುತ್ತಿರುವವರ ಮನೆ ಬಾಗಿಲಿಗೆ ಔಷಧಿಗಳನ್ನು ತಲುಪಿಸಲು ಸಹ ಕ್ರಮವಹಿಸಲಾಗುವುದು.

ಜನಸಾಮಾನ್ಯರ ಮೆದುಳಿನ ಆರೋಗ್ಯ ಕಾಪಾಡಲು ಮತ್ತು ಅದರ ಬಗ್ಗೆ ಅರಿವು ಮೂಡಿಸಲು ನಿಮ್ಹಾನ್ಸ್ ಸಹಯೋಗದೊಂದಿಗೆ ಕರ್ನಾಟಕ ಮೆದುಳು ಆರೋಗ್ಯ ಯೋಜನೆಯನ್ನು 25 ಕೋಟಿ ರೂ. ವೆಚ್ಚದಲ್ಲಿ ಇಡೀ ರಾಜ್ಯಕ್ಕೆ ವಿಸ್ತರಿಸಲಾಗುವುದು.

ಕ್ಯಾನ್ಸರ್ ರೋಗವು ಆರಂಭಿಕ ಹಂತದಲ್ಲಿಯೇ ಪತ್ತೆಯಾದರೆ ಸಕಾಲಿಕ ಚಿಕಿತ್ಸೆಯಿಂದ ರೋಗಿಗಳು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಸ್ತನ, ಬಾಯಿ ಮತ್ತು ಗರ್ಭಕಂಠದ ಕ್ಯಾನ್ಸರ್ ಪತ್ತೆ ಹಚ್ಚಲು ʻಜೀವಸುಧೆʼ ಎಂಬ ವ್ಯಾಪಕ ತಪಾಸಣಾ ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜಿಸಲಾಗುವುದು. ಅಗತ್ಯವಿರುವವರಿಗೆ ಹೆಚ್ಚಿನ ಚಿಕಿತ್ಸೆಯನ್ನು ಪಡೆಯಲು ತೃತೀಯ ಆರೈಕೆ ಆಸ್ಪತ್ರೆಗಳಿಗೆ ಕಳುಹಿಸಲಾಗುವುದು. ಕ್ಯಾನ್ಸರ್ ಪತ್ತೆಗೆ ಅಗತ್ಯವಿರುವ ಸಾಧನಗಳ ಖರೀದಿಗಾಗಿ 12 ಕೋಟಿ ರೂ. ಅನುದಾನ ಒದಗಿಸಲಾಗುವುದು.

ಮಕ್ಕಳ ಆರೋಗ್ಯದ ರಕ್ಷಣೆಗೆ ಮುನ್ನೆಚ್ಚರಿಕೆಯ ಕ್ರಮವಾಗಿ ಗ್ರಾಮೀಣ ಪ್ರದೇಶಗಳಲ್ಲಿ ವರ್ಷಕ್ಕೆರಡು ಬಾರಿ ನವಜಾತ ಶಿಶುಗಳಿಂದ 6 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆ ಮಾಡಲು ʻ“ವಾತ್ಸಲ್ಯʼ” ಯೋಜನೆ ರೂಪಿಸಲಾಗುವುದು. ಇದರ ಮೂಲಕ ಮಕ್ಕಳಲ್ಲಿ ಆರೋಗ್ಯ ನ್ಯೂನತೆಗಳು ಹಾಗೂ ಸಮಸ್ಯೆಗಳನ್ನು ಪ್ರಾರಂಭದಲ್ಲಿಯೇ ಪತ್ತೆ ಮಾಡಿ, ಸೂಕ್ತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಮಕ್ಕಳಲ್ಲಿ ಸಂಭಾವ್ಯ ದೈಹಿಕ ನ್ಯೂನತೆಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಸ್ವಸ್ಥ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಇದು ಮಹತ್ವಪೂರ್ಣ ಕ್ರಮವಾಗಿದೆ.

ರಾಜ್ಯದ ತಾಲ್ಲೂಕು ಆಸ್ಪತ್ರೆಗಳಲ್ಲಿ ಹೆರಿಗೆಯಾದ ತಾಯಂದಿರು ಮತ್ತು ನವಜಾತ ಶಿಶುಗಳಿಗೆ ಸುರಕ್ಷಿತವಾಗಿ ಮನೆಗೆ ತಲುಪಿಸಲು ಸಾರಿಗೆ ಸೌಲಭ್ಯ ಕಲ್ಪಿಸಲು 12.5 ಕೋಟಿ ರೂ. ವೆಚ್ಚದಲ್ಲಿ ಹೊಸ ʻ”ನಗು ಮಗುʼ” ವಾಹನಗಳನ್ನು ಒದಗಿಸಲಾಗುವುದು.

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಹಾಗೂ ಸ್ಥಳೀಯವಾಗಿಯೇ ಪ್ರಯೋಗಾಲಯಗಳ ಸೇವೆಗಳನ್ನು ಒದಗಿಸಲು 129 ತಾಲ್ಲೂಕು ಪ್ರಯೋಗಾಲಯಗಳನ್ನು, ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಪ್ರಯೋಗಾಲಯಗಳನ್ನು ಹಾಗೂ ಬೆಂಗಳೂರಿನಲ್ಲಿ ರಾಜ್ಯ ರೆಫರಲ್ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು.

ಆರೋಗ್ಯ ಇಲಾಖೆಯ ಸೇವೆಗಳನ್ನು ಇನ್ನಷ್ಟು ಸರಳ ಮತ್ತು ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಯೋಜನೆಗಳನ್ನು ಡಿಜಿಟಲೀಕರಣಗೊಳಿಸಲಾಗುವುದು. ರೋಗಿಗಳ ಆರೋಗ್ಯ ದಾಖಲೆಗಳನ್ನು ಒಂದೆಡೆ ಸುರಕ್ಷಿತವಾಗಿ ಕ್ರೂಢೀಕರಿಸಲಾಗುವುದು. ರೋಗಿಗಳ ಸಮ್ಮತಿಯೊಂದಿಗೆ ವೈದ್ಯಕೀಯ ದಾಖಲಾತಿಗಳು ತಕ್ಷಣವಾಗಿ ಲಭ್ಯಪಡಿಸುವ ಮೂಲಕ ಅವರ ಮುಂದಿನ ಚಿಕಿತ್ಸೆಗೆ ಇದರಿಂದ ಸಹಾಯವಾಗುತ್ತದೆ.

ಕೇಂದ್ರದ ಸಹಭಾಗಿತ್ವದಲ್ಲಿ ಯಾದಗಿರಿ, ಹಾವೇರಿ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಕಾರ್ಯಾರಂಭಗೊಳಿಸಲಾಗಿದೆ. ರಾಜ್ಯ ಸರ್ಕಾರದ ವತಿಯಿಂದ 500 ಕೋಟಿ ರೂ. ಗಳ ವೆಚ್ಚದಲ್ಲಿ ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ.  ಮಂಡ್ಯ ಮತ್ತು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಸ್ನಾತಕೋತ್ತರ ಪದವಿ ಕೋಸ್ರ್ಗಳನ್ನು ಪ್ರಾರಂಭಿಸಲಾಗಿದೆ.

ಸಾರ್ವಜನಿಕರಿಗೆ ತೃತೀಯ ಆರೈಕೆ ಸೇವೆಗಳನ್ನು ಒದಗಿಸಲು ಚಾಮರಾಜನಗರದಲ್ಲಿ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯನ್ನು 2022-23ನೇ ಸಾಲಿನಲ್ಲಿ ಪ್ರಾರಂಭಿಸಲಾಗಿದೆ. ಕೊಡಗು ಮತ್ತು ಕಾರವಾರದಲ್ಲಿ ಪ್ರಗತಿಯಲ್ಲಿರುವ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಗಳ ನಿರ್ಮಾಣವನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು. ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 500 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದನ್ನು ಉತ್ತೇಜಿಸಲು ಸರ್ಕಾರ ಒತ್ತು ನೀಡಿದೆ. ಸ್ವಸಹಾಯ ಗುಂಪುಗಳಿಗೆ ಪ್ರಮಾಣಿತ ಉತ್ಪನ್ನಗಳನ್ನು ತಯಾರಿಸಲು ನೆರವಾಗುವ ಸ್ತ್ರೀ ಸಾಮಥ್ರ್ಯ ಯೋಜನೆಯಡಿ 50 ಸಾವಿರ ಸ್ವಸಹಾಯ ಗುಂಪುಗಳಿಗೆ ತಲಾ ಒಂದು1 ಲಕ್ಷ ರೂ. ನಂತೆ ಒಟ್ಟು 500 ಕೋಟಿ ರೂ. ಗಳ ಸಮುದಾಯ ಬಂಡವಾಳ ನಿಧಿ ನೀಡಲು ಕ್ರಮ ವಹಿಸಲಾಗುತ್ತಿದೆ. ವಿವಿಧ ಸ್ವಯಂ ಉದ್ಯೋಗ ಯೋಜನೆಗಳಡಿ 7,239 ಸ್ವಸಹಾಯ ಸಂಘಗಳಿಗೆ 108 ಕೋಟಿ ರೂ. ಸಮುದಾಯ ಬಂಡವಾಳ ನಿಧಿ ಹಾಗೂ 5.68 ಲಕ್ಷ ಸ್ವ-ಸಹಾಯ ಗುಂಪುಗಳಿಗೆ ಬ್ಯಾಂಕ್ ಸಂಪರ್ಕದಡಿ 11,391 ಕೋಟಿ ರೂ. ಸಾಲವನ್ನು ಒದಗಿಸಲಾಗಿದೆ. ವೈಯಕ್ತಿಕ ಮತ್ತು ಗುಂಪುಗಳನ್ನೊಳಗೊಂಡ 9,688 ಫಲಾನುಭವಿಗಳಿಗೆ ಕಿರು ಉದ್ದಿಮೆ ಪ್ರಾರಂಭಿಸಲು ಬ್ಯಾಂಕ್ ಮೂಲಕ ಸಾಲ ಸೌಲಭ್ಯವನ್ನು ಒದಗಿಸಲಾಗಿದೆ.

ಸಹಕಾರ ವಲಯದಲ್ಲಿ ಕಳೆದ ವರ್ಷದಲ್ಲಿ 40,000 ಮಹಿಳಾ ಸ್ವಸಹಾಯ ಗುಂಪುಗಳಿಗೆ 1,600 ಕೋಟಿ ರೂ. ಗಳಷ್ಟು ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ವಿತರಿಸಲಾಗಿದೆ. ಇದಕ್ಕಾಗಿ ಸರ್ಕಾರದಿಂದ 96 ಕೋಟಿ ರೂ. ಬಡ್ಡಿ ಸಹಾಯಧನ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 45,000 ಮಹಿಳಾ ಸ್ವಸಹಾಯ ಗುಂಪುಗಳಿಗೆ 1,800 ಕೋಟಿ ರೂ. ಗಳಷ್ಟು ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ ಗುರಿ ಹೊಂದಲಾಗಿದೆ.

ಅಪೌಷ್ಟಿಕತೆ ನಿವಾರಣೆ ಹಾಗೂ ತಾಯಿ, ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುವ ಅಂಗನವಾಡಿಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕಳೆದ ಆಯವ್ಯಯದಲ್ಲಿ ಘೋಷಿಸಿದಂತೆ ಸ್ವಂತ ಕಟ್ಟಡವಿಲ್ಲದ 1,000 ಅಂಗನವಾಡಿಗಳಿಗೆ ಕಟ್ಟಡಗಳನ್ನು ನಿರ್ಮಿಸಲು ಅನುದಾನ ನೀಡಲಾಗಿದೆ.

ಜನಸಂಖ್ಯೆಗೆ ಅನುಗುಣವಾಗಿ ಅಂಗನವಾಡಿಗಳ ಕೊರತೆಯನ್ನು ಎದುರಿಸುತ್ತಿರುವ ಪ್ರದೇಶಗಳಲ್ಲಿ, ರಾಜ್ಯ ಸರ್ಕಾರದ ಅನುದಾನದಲ್ಲಿಯೇ 2022-23ನೇ ಸಾಲಿನಲ್ಲಿ 3,538 ಹೊಸ ಅಂಗನವಾಡಿ ಕೇಂದ್ರಗಳನ್ನು 270 ಕೋಟಿ ರೂ. ಗಳ ವೆಚ್ಚದಲ್ಲಿ ಪ್ರಾರಂಭಿಸಲು ಕ್ರಮ ವಹಿಸಲಾಗಿದೆ.

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವುದನ್ನು ಪೆÇ್ರೀತ್ಸಾಹಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ಉದ್ದೇಶಕ್ಕೆ ಹಿಂದಿನ ವರ್ಷದಲ್ಲಿ ಸ್ತ್ರೀ ಸಾಮಥ್ರ್ಯ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿಯಲ್ಲಿ ಸ್ವ-ಸಹಾಯ ಗುಂಪುಗಳಿಗೆ ಬಂಡವಾಳ ನಿಧಿ ನೀಡಲು ಅವಕಾಶ ಮಾಡಲಾಗಿತ್ತು ಹಾಗೂ ಸಹಕಾರ ವಲಯದಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ಒದಗಿಸಲು ಅವಕಾಶ ನೀಡಲಾಗಿದೆ. ಈ ಧ್ಯೇಯೋದ್ದೇಶವನ್ನು ಮುಂದುವರೆಸುತ್ತಾ ನಮ್ಮ ಸರ್ಕಾರವು ʻಗೃಹಿಣಿ  ಶಕ್ತಿʼ ಯೋಜನೆಯನ್ನು

ಜಾರಿಗೊಳಿಸಲು ನಿರ್ಧರಿಸಿದೆ. ಇದರಡಿಯಲ್ಲಿ: ಸರ್ಕಾರಿ ಮತ್ತು ಖಾಸಗಿ ಹೆಣ್ಣು ಮಕ್ಕಳ ಹಾಸ್ಟೆಲ್ಗಳ ಗುಣಮಟ್ಟ ಸೂಚ್ಯಂಕ ಪಟ್ಟಿಯನ್ನು ಆನ್-ಲೈನ್ ವೇದಿಕೆಯಲ್ಲಿ ಸೃಜಿಸಲಾಗುವುದು. ಇದರಿಂದ ಪರಸ್ಥಳದ ವಿದ್ಯಾರ್ಥಿಗಳು ಮತ್ತು ಯುವ ಉದ್ಯೋಗಿಗಳು ತಮ್ಮ ಅವಶ್ಯಕತೆ, ದೂರ, ಗುಣಮಟ್ಟ, ಶುಲ್ಕ ಹಾಗೂ ಇತರ ಮಾನದಂಡಗಳಿಗೆ ಅನುಗುಣವಾಗಿ ಸೂಕ್ತ ಹಾಸ್ಟೆಲನ್ನು ಆಯ್ಕೆ ಮಾಡಲು ಸಾಧ್ಯವಾಗುವುದು.

ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ನೀಡುತ್ತಿರುವ ಮಾಸಾಶನವನ್ನು ಈಗಾಗಲೇ 3,000 ರೂ. ಗಳಿಂದ 10,000 ರೂ. ಗಳಿಗೆ ಹೆಚ್ಚಿಸಲಾಗಿದೆ. ಇವರಿಗೆ ಬದುಕಿನಲ್ಲಿ ಇನ್ನಷ್ಟು ಭದ್ರತೆಯನ್ನು ಒದಗಿಸಲು ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಮತ್ತು ಸ್ವಯಂ ಉದ್ಯೋಗಕ್ಕಾಗಿ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಬಡ್ಡಿ ರಹಿತ ಸಾಲವನ್ನು ನೀಡಲಾಗುವುದು. ಇದಲ್ಲದೆ, ಉತ್ಕೃಷ್ಟ ಚಿಕಿತ್ಸೆಗೆ ಮತ್ತು ಕಾನೂನು ನೆರವು ನೀಡಲು ಮಹಿಳಾ ಅಭಿವೃದ್ಧಿ ನಿಗಮದಲ್ಲಿ ವಿಶೇಷ ನಿಧಿ ಸ್ಥಾಪಿಸಲಾಗುವುದು.

. ವಿಶೇಷಚೇತನರು ಸ್ವತಂತ್ರವಾಗಿ ತಮ್ಮ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು ಹಾಗೂ ಸ್ವಾವಲಂಬನೆಯ ಜೀವನ ನಡೆಸಲು ಅನುವಾಗುವಂತೆ ʻಸ್ವಚೇತನʼ ಎಂಬ ಯೋಜನೆಯಡಿ 5,000 ಅರ್ಹ ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು 50 ಕೋಟಿ ರೂ. ಗಳ ವೆಚ್ಚದಲ್ಲಿ ಒದಗಿಸಲಾಗುವುದು. ಈ ವರ್ಷದಲ್ಲಿ ಅತಿ ಹೆಚ್ಚು ಅನುದಾನ ನೀಡಲಾಗುತ್ತಿದ್ದು, ಇದು ವಿಶೇಷಚೇತನರ ಕಲ್ಯಾಣಕ್ಕೆ ನಮ್ಮ ಸರ್ಕಾರದ ಬದ್ಧತೆಯನ್ನು ಬಿಂಬಿಸುತ್ತದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆಯನ್ನು ಗುರುತಿಸಿರುವ ರಾಜ್ಯ ಸರ್ಕಾರವು 2023-24ನೇ ಸಾಲಿನಿಂದ ಅವರಿಗೆ ಉಪಧನವನ್ನು ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 40 ಕೋಟಿ ರೂ. ಗಳ ಅನುದಾನ ಮೀಸಲಿಡಲಾಗಿದೆ.

25 ವರ್ಷಗಳ ಅರ್ಹತಾ ಸೇವೆಯನ್ನು ಪೂರ್ಣಗೊಳಿಸಿದ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂ. ಗಳು ಹಾಗೂ ಅಂಗನವಾಡಿ ಸಹಾಯಕಿಯರಿಗೆ 30,000 ರೂ. ಗಳ ಆರ್ಥಿಕ ಭದ್ರತೆಯನ್ನು ಒಂದು ಬಾರಿಗೆ ನೀಡಿ ಸ್ವಯಂ ನಿವೃತ್ತಿಗೆ ಅವಕಾಶ ಕಲ್ಪಿಸಲಾಗುವುದು.

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮಹಿಳೆಯರು ದುಡಿಮೆಯಲ್ಲಿ ತೊಡಗಿಸಿಕೊಳ್ಳಲು ಉತ್ತಮ ಶಿಶುಪಾಲನಾ ಸೌಲಭ್ಯಗಳು ಅಗತ್ಯವಾಗಿದೆ. ಇದಕ್ಕಾಗಿ 2022-23ನೇ ಸಾಲಿನ ಆಯವ್ಯಯದಲ್ಲಿ ಪ್ರಸ್ತಾಪಿಸಿದ್ದ ಕಾರ್ಯಕ್ರಮವನ್ನು ವಿಸ್ತರಿಸಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗಾಗಿ ನಗರ ಪ್ರದೇಶದಲ್ಲಿ 4,000 ಶಿಶುಪಾಲನಾ ಕೇಂದ್ರಗಳು ಮತ್ತು ಗ್ರಾಮೀಣ ಭಾಗದಲ್ಲಿ ನರೇಗಾ ಯೋಜನೆಯ ಒಗ್ಗೂಡಿಸುವಿಕೆಯ ಮೂಲಕ 500 ಶಿಶುವಿಹಾರಗಳನ್ನು ಪ್ರಾರಂಭಿಸಲಾಗುವುದು.

ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ ಮಹಿಳಾ ಆಯವ್ಯಯದಲ್ಲಿ ಒಟ್ಟಾರೆ 46,278 ಕೋಟಿ ರೂ. ಒದಗಿಸಲಾಗಿದೆ. ಮಕ್ಕಳ ಅಭ್ಯುದಯಕ್ಕೆ ಆಯವ್ಯಯದಲ್ಲಿ ಒಟ್ಟಾರೆ  47,256 ಕೋಟಿ ರೂ.  ಒದಗಿಸಲಾಗಿದೆ.

ಕರ್ನಾಟಕ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾಯ್ದೆ 2013ರ ಅನುμÁ್ಠನದ 10 ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಈ ಕಾಯ್ದೆಯನ್ನು ಇನ್ನಷ್ಟು ಸುಧಾರಿಸಲು ಸೆಕ್ಷನ್ 7(ಡಿ) ಪರಿಷ್ಕರಣೆ ಸೇರಿದಂತೆ ಹಲವಾರು ಸಲಹೆಗಳು ಬಂದಿವೆ. ಈ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಈ ನಡೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕ್ಷೇಮಾಭಿವೃದ್ಧಿ ಕುರಿತು ನಮ್ಮ ಸರ್ಕಾರಕ್ಕೆ ಇರುವ ಬದ್ಧತೆಗೆ ನಿದರ್ಶನವಾಗಿದೆ.

ಅಮೃತ ಜ್ಯೋತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಗಂಗಾಕಲ್ಯಾಣ ಯೋಜನೆಯಡಿ ವಿವಿಧ ನಿಗಮಗಳ ಮೂಲಕ 17,000 ಫಲಾನುಭವಿಗಳಿಗೆ 675 ಕೋಟಿ ರೂ. ಸಹಾಯಧನವನ್ನು ಡಿ.ಬಿ.ಟಿ. ಮೂಲಕ ಅನುμÁ್ಠನಗೊಳಿಸುವ ಗುರಿಯನ್ನು ಹೊಂದಲಾಗಿದೆ. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಂದ ಸರ್ಕಾರಿ ಉದ್ಯೋಗಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 9,500 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ.

ಗ್ರಾಮೀಣ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಸತಿ ಯೋಜನೆಗಳಲ್ಲಿ ಘಟಕ ಸಹಾಯಧನ 1.75 ಲಕ್ಷ ರೂ. ಗಳಿಂದ 2 ಲಕ್ಷ ರೂ. ಗಳಿಗೆ ಹೆಚ್ಚಳ ಮಾಡಲಾಗಿದೆ. ಭೂ ಒಡೆತನ ಯೋಜನೆಯಡಿ ಘಟಕ ವೆಚ್ಚದ ಮೊತ್ತವನ್ನು 15 ಲಕ್ಷ ರೂ. ಗಳಿಂದ 20 ಲಕ್ಷ ರೂ. ಗಳಿಗೆ ಹಾಗೂ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ 25 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ.

ಮೊದಲ ಬಾರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರು ಸ್ವಯಂಉದ್ಯೋಗ ಕೈಗೊಳ್ಳಲು ವಿದ್ಯುತ್ ಚಾಲಿತ ತ್ರಿಚಕ್ರ ಸರಕು ವಾಹನ ಖರೀದಿಗೆ 50 ಸಾವಿರ ರೂ. ಧನ ಸಹಾಯ ನೀಡುವ ಕಾರ್ಯಕ್ರಮವನ್ನು ಅನುμÁ್ಠನಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಮುಂದುವರೆಸಿ ʻಬಾಬು ಜಗಜೀವನ್ರಾಮ್ ಸ್ವಯಂ ಉದ್ಯೋಗ ಯೋಜನೆʼಯಡಿಯಲ್ಲಿ ಎಲೆಕ್ಟ್ರಿಕ್ ತ್ರಿಚಕ್ರ ಅಥವಾ ನಾಲ್ಕು ಚಕ್ರದ ಸರಕು ವಾಹನಗಳನ್ನು ಖರೀದಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ಫಲಾನುಭವಿಗಳಿಗೆ ಶೇ.50 ರಷ್ಟು 2 ಲಕ್ಷ ರೂ. ವರೆಗೂ ಸಹಾಯಧನವನ್ನು ನೀಡಲಾಗುವುದು. ಇದಕ್ಕಾಗಿ 400 ಕೋಟಿ ರೂ. ವೆಚ್ಚವಾಗಲಿದೆ.

ಮೆಟ್ರಿಕ್ ನಂತರದಲ್ಲಿ ಶಾಲೆಯಿಂದ ಹೊರಗುಳಿಯುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸಂಖ್ಯೆಯನ್ನು ತಗ್ಗಿಸಲು 100 ಕ್ರೈಸ್ ವಸತಿ ಶಾಲೆಗಳನ್ನು ಉನ್ನತೀಕರಿಸಿ ಪದವಿ ಪೂರ್ವ ಶಿಕ್ಷಣ ಪ್ರಾರಂಭಿಸಲಾಗುವುದು. ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಎಮ್, ಐಐಎಸ್‍ಸಿ, ಎನ್‍ಐಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 2 ಲಕ್ಷ ರೂ. ಗಳ ಪೆÇ್ರೀತ್ಸಾಹಧನ ನೀಡುತ್ತಿದ್ದು, ಸದರಿ ಪೆÇ್ರೀತ್ಸಾಹಧನದ ಮೊತ್ತವನ್ನು 4 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗುವುದು. ಐಎಸ್‍ಇಸಿ ಸಂಸ್ಥೆಯಲ್ಲಿ ಪಿ.ಹೆಚ್.ಡಿ ಮಾಡುವ 5 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಡಾ.|| ಬಿ.ಆರ್. ಅಂಬೇಡ್ಕರ್ ಫೆಲೋಶಿಪ್ ನೀಡಲು 2 ಕೋಟಿ ರೂ. ಕಾರ್ಪಸ್ ಪಂಡ್ ಸ್ಥಾಪಿಸಲಾಗುವುದು.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ಪ್ರತಿ ಶಾಲೆಗೆ 18 ಕೋಟಿ ರೂ. ವೆಚ್ಚದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ. ಬೈಲಹೊಂಗಲ ತಾಲ್ಲೂಕಿನಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳನ್ನು 217 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿ, ಸೈನಿಕ್ ಸ್ಕೂಲ್ ಸೊಸೈಟಿ ಸಹಯೋಗದೊಂದಿಗೆ ಪ್ರಾರಂಭ ಮಾಡಲಾಗಿದೆ. ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ವಿವಿಧ ಕಾಮಗಾರಿಗಳಿಗಾಗಿ ಹಿಂದಿನ ಸರ್ಕಾರಗಳು ಕೇವಲ 54.14 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದ್ದು, ನಮ್ಮ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ 261.53 ಕೋಟಿ ರೂ. ಗಳನ್ನು ಒದಗಿಸಿ ಮಾಸ್ಟರ್‍ಪ್ಲಾನ್ ನಂತೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 50 ಕನಕದಾಸ ವಿದ್ಯಾರ್ಥಿ ನಿಲಯಗಳ ಸುಸಜ್ಜಿತ ಕಟ್ಟಡ ನಿರ್ಮಿಸಲು ಟೆಂಡರ್ ಕರೆಯಲಾಗಿದೆ. ಈ ಸಂಬಂಧ ಘಟಕ ವೆಚ್ಚವನ್ನು 3.5 ಕೋಟಿ ರೂ. ಗಳಿಂದ 5 ಕೋಟಿ ರೂ. ಗಳಿಗೆ ಹೆಚ್ಚಿಸಲಾಗಿದೆ. ಹಿಂದುಳಿದ ವರ್ಗಗಳ ಇಲಾಖಾ ವಿದ್ಯಾರ್ಥಿ ನಿಲಯಗಳಲ್ಲಿ ಬೇಡಿಕೆ ಮತ್ತು ಹಂಚಿಕೆಯನ್ನು ಸರಿದೂಗಿಸುವ ಉದ್ದೇಶದಿಂದ ತಾಲ್ಲೂಕುವಾರು ಅರ್ಜಿಗಳನ್ನು ಆಹ್ವಾನಿಸಿ ಸಿ.ಇ.ಟಿ. ಕೌನ್ಸಿಲಿಂಗ್ ಮಾದರಿಯಲ್ಲಿ ಪ್ರವೇಶ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ಒದಗಿಸಲು ವಿದ್ಯಾರ್ಥಿ ನಿಲಯಗಳ ಮಾಸಿಕ ಭೋಜನ ವೆಚ್ಚವನ್ನು 150 ರೂ.  ಗಳಷ್ಟು ಹೆಚ್ಚಿಸಲಾಗಿದೆ.
ಬೆಂಗಳೂರಿನಲ್ಲಿ ಪ್ರಸಕ್ತ ವರ್ಷದಲ್ಲಿ 20,000 ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು.

ಈ ಯೋಜನೆಯಡಿ ಇಚ್ಛೆಪಡುವ ಮನೆಯನ್ನು ಆನ್ಲೈನ್ನಲ್ಲಿ ಫಲಾನುಭವಿಗಳೇ ಆಯ್ಕೆ ಮಾಡಿಕೊಳ್ಳುವ ಪಾರದರ್ಶಕ ವ್ಯವಸ್ಥೆಯನ್ನು ರೂಪಿಸಲಾಗಿದೆ. ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಎಲ್ಲಾ ವಸತಿ ರಹಿತರಿಗೆ ವಸತಿ ಸೌಲಭ್ಯವನ್ನು ಕಲ್ಪಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಹೆಚ್ಚು ಜನರಿಗೆ ವಸತಿ ಸೌಲಭ್ಯ ಕಲ್ಪಿಸಲು ಈ ತಾಲ್ಲೂಕುಗಳಲ್ಲಿ ಆದ್ಯತೆ ನೀಡಲಾಗುವುದು.  ಈ ಉದ್ದೇಶಕ್ಕೆ ಪ್ರಸಕ್ತ ವರ್ಷದಲ್ಲಿ 500 ಕೋಟಿ ರೂ. ಗಳನ್ನು ಒದಗಿಸಲಾಗಿದ್ದು, ಅವಶ್ಯಕತೆ ಇದ್ದಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗುವುದು.
ಅತಿವೃಷ್ಟಿಯಿಂದ ಸಂಪೂರ್ಣವಾಗಿ ಹಾನಿಯಾಗಿರುವ ಮನೆಗಳ ಪುನರ್ ನಿರ್ಮಾಣಕ್ಕೆ ನೀಡುತ್ತಿರುವ ಸಹಾಯಧನವನ್ನು ನಮ್ಮ ಸರ್ಕಾರವು 5 ಲಕ್ಷ ರೂ. ಗಳಿಗೆ ಹೆಚ್ಚಿಸಿದೆ. ವಿವಿಧ ವರ್ಗಗಳಡಿಯಲ್ಲಿ ಕಳೆದ 4 ವರ್ಷಗಳಲ್ಲಿ 3,01,884 ಮನೆಗಳ ಪುನರ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಇದಕ್ಕೆ ಇಲ್ಲಿಯವರೆಗೂ 2,627 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ.

ಸರ್ಕಾರಿ ಮಾಲೀಕತ್ವದಲ್ಲಿ ಇರುವ ಕೊಳೆಗೇರಿ ಪ್ರದೇಶಗಳಲ್ಲಿ ವಾಸಿಸುವ 1.14 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಿದ್ದು, ವμÁರ್ಂತ್ಯದಲ್ಲಿ ಎಲ್ಲಾ 3.36 ಲಕ್ಷ ಕುಟುಂಬಗಳಿಗೂ ಭೂಮಾಲೀಕತ್ವದ ಹಕ್ಕುಪತ್ರವನ್ನು ನೀಡಲಾಗುವುದು. ಕರ್ನಾಟಕ ಗೃಹ ಮಂಡಳಿಯ ಅನುಮೋದನೆಯಾಗಿದ್ದ 38 ಯೋಜನೆಗಳು ಜಮೀನಿನ ವ್ಯಾಜ್ಯ, ಭೂ ಮಾಲೀಕರ ಸಮಸ್ಯೆ ಮತ್ತಿತರ ಕಾರಣದಿಂದ ಕಳೆದ 10 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದವು. ಈ ಎಲ್ಲ ತೊಡಕುಗಳನ್ನು ನಿವಾರಿಸಿ, ಮಾರ್ಗಸೂಚಿಗಳನ್ನು ಮಾರ್ಪಾಡುಗೊಳಿಸಿ 3,382 ಎಕರೆ ಪ್ರದೇಶದಲ್ಲಿ 48,000 ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮ ವಹಿಸಲಾಗಿದೆ.

ಕರ್ನಾಟಕ ಗೃಹ ಮಂಡಳಿ ವತಿಯಿಂದ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಇದುವರೆಗೆ 06 ವಸತಿ ಯೋಜನೆಗಳನ್ನು ಪೂರ್ಣಗೊಳಿಸಲಾಗಿದ್ದು, ಈ ಯೋಜನೆಗಳಿಂದ ಒಟ್ಟು 6,142 ನಿವೇಶನಗಳ ಅಭಿವೃದ್ಧಿಯನ್ನು ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅಂದಾಜು 2,000 ಎಕರೆ ಜಮೀನನ್ನು ವಸತಿ ಯೋಜನೆಗಾಗಿ ಸಂಗ್ರಹಿಸಿ, ಅಂದಾಜು 30,000 ಸ್ವತ್ತುಗಳನ್ನು ಅಭಿವೃದ್ಧಿ ಪಡಿಸಿ, ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು. ʻನಮ್ಮ ನೆಲೆʼ” ಎಂಬ ಹೊಸ ಯೋಜನೆಯಡಿ ಕರ್ನಾಟಕ ಗೃಹ ಮಂಡಳಿಯಿಂದ ಅಭಿವೃದ್ಧಿಪಡಿಸುವ ನಿವೇಶನಗಳ ಪೈಕಿ ಮೂರನೇ ಒಂದು ಭಾಗವನ್ನು, ಅಂದರೆ 10,000 ನಿವೇಶನಗಳನ್ನು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಹಂಚಿಕೆ ಮಾಡಲಾಗುವುದು.

ರಾಜ್ಯದಲ್ಲಿರುವ ಇಎಸ್‍ಐ ಆಸ್ಪತ್ರೆಗಳನ್ನು ಇನ್ನಷ್ಟು ಬಲಪಡಿಸಲು 7 ಆಸ್ಪತ್ರೆಗಳಲ್ಲಿ ಐ.ಸಿ.ಯು ಸ್ಥಾಪಿಸಲು, 6 ಆಸ್ಪತ್ರೆಗಳಲ್ಲಿ ಆಯುμï ಘಟಕ ಪ್ರಾರಂಭಿಸಲು ಹಾಗೂ ಜಿಲ್ಲೆಗೊಂದರಂತೆ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಾಗಿ ಉನ್ನತೀಕರಿಸಲು ಕೇಂದ್ರ ಕಾರ್ಮಿಕ ಮಂತ್ರಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಹೊಸದಾಗಿ ಪ್ರಾರಂಭಿಸಿರುವ 19 ಇಎಸ್‍ಐ ಚಿಕಿತ್ಸಾಲಯಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ 6 ಹೊಸ ಇಎಸ್‍ಐ ಚಿಕಿತ್ಸಾಲಯಗಳನ್ನು ಪ್ರಾರಂಭಿಸಲು ಯೋಜಿಸಲಾಗಿದೆ.

ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ತರಬೇತಿಯನ್ನು ಉಚಿತವಾಗಿ ಬಿಪಿಎಲ್ ಕುಟುಂಬಗಳ ಒಟ್ಟು 12,110 ಯುವಕ-ಯುವತಿಯರಿಗೆ ನೀಡಲಾಗಿದ್ದು, ತರಬೇತಿ ಪಡೆದ ಫಲಾನುಭವಿಗಳು ಸ್ವಯಂ ಉದ್ಯೋಗ ಚಟುವಟಿಕೆಗಳನ್ನು ಪ್ರಾರಂಭಿಸಿದ್ದಾರೆ.

“ʻಕಲಿಕೆ ಜೊತೆಗೆ ಕೌಶಲ್ಯ”ʼ ಎಂಬ ವಿನೂತನ ಕಾರ್ಯಕ್ರಮದಡಿ ಕೈಗಾರಿಕಾ ಆದ್ಯತಾ ಮತ್ತು ಉದ್ಯಮಶೀಲತಾ ತರಬೇತಿಗಳನ್ನು ಸರ್ಕಾರಿ ಪ್ರಥಮ ದರ್ಜೆ, ಇಂಜಿನಿಯರಿಂಗ್, ಹಾಗೂ ಐ.ಟಿ.ಐ ಕಾಲೇಜುಗಳ ಮೂಲಕ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಇದೇ ಮಾದರಿಯಲ್ಲಿ ಕ್ರೈಸ್ ಸಂಸ್ಥೆಯ ಅಧೀನದ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೂ ಹೆಚ್ಚುವರಿ ತಾಂತ್ರಿಕ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು.

ಕೇಂದ್ರ ಸರ್ಕಾರವು, ರಾಜ್ಯದ ಆರ್ಥಿಕತೆಯನ್ನು ಉತ್ತೇಜಿಸಲು ಸತತವಾಗಿ ರಾಜ್ಯಕ್ಕೆ ಸಂಪೂರ್ಣ ಬೆಂಬಲ ನೀಡುತ್ತಾ ಬಂದಿದೆ. 2019-20 ರಿಂದ 2022-23 ರವರೆಗೂ, ಕೇಂದ್ರ ಸರ್ಕಾರವು ನಮ್ಮ ರಾಜ್ಯಕ್ಕೆ ಒಟ್ಟು 2,77,711 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ 1,20,493 ಕೋಟಿ ರೂ. ಗಳು ತೆರಿಗೆಯಲ್ಲಿ ರಾಜ್ಯದ ಪಾಲಾಗಿದ್ದು, 1,57,218 ಕೋಟಿ ರೂ. ಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನ, ಕೋವಿಡ್ ಲಸಿಕೆ, ಜಲಜೀವನ್ ಮಿಷನ್, ಅಮೃತ್ ಯೋಜನೆ, ಸ್ಮಾರ್ಟ್ ಸಿಟಿ ಯೋಜನೆ, ಫಸಲ್ ಬಿಮಾ ಯೋಜನೆ, ನರೇಗ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಸೇರಿದಂತೆ 105 ಕೇಂದ್ರ ಪುರಸ್ಕೃತ ಯೋಜನೆಗಳಡಿ ಬಿಡುಗಡೆ ಮಾಡಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯವು ಕಳೆದ 5 ವರ್ಷಗಳಲ್ಲಿ 23 ಲಕ್ಷ ವೈಯಕ್ತಿಕ ಕಾಮಗಾರಿಗಳನ್ನು ಅನುμÁ್ಠನಗೊಳಿಸುವ ಮೂಲಕ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಈ ಯೋಜನೆಯಡಿ ವಿವಿಧ ಇಲಾಖೆಗಳೊಂದಿಗೆ ಒಗ್ಗೂಡಿಸಿ ಅನುμÁ್ಠನಗೊಳಿಸಿರುವ ಕಾಮಗಾರಿಗಳಲ್ಲಿ 2.25 ಲಕ್ಷ ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ, 25 ಸಾವಿರ ಎಕರೆ ಪ್ಲಾಂಟೇಷನ್, 25 ಸಾವಿರ ಎಕರೆ ರೇμÉ್ಮ ಪ್ರದೇಶ ವಿಸ್ತರಣೆ, 1.25 ಲಕ್ಷ ಎಕರೆ ಕೃಷಿ ಅರಣ್ಯೀಕರಣ ಸೇರಿರುತ್ತದೆ.  ಅಲ್ಲದೆ 12,547 ಶಾಲಾ ಕಾಂಪೌಂಡ್, 2,331 ಆಟದ ಮೈದಾನಗಳು, 17,574 ಶೌಚಾಲಯಗಳು, 3,117 ಅಂಗನವಾಡಿ ಕಟ್ಟಡಗಳು, 4.95 ಲಕ್ಷಗಳ ಜಾನುವಾರು ಶೆಡ್‍ಗಳ ನಿರ್ಮಾಣವಾಗಿವೆ.  ಜೊತೆಗೆ 42,717 ಸಾಂಪ್ರದಾಯಿಕ ಜಲಮೂಲಗಳ ಪುನರುಜ್ಜೀವನ, 1.34 ಲಕ್ಷ ರಸ್ತೆ ಕಾಮಗಾರಿಗಳು ಹಾಗೂ 13,500 ಕಿ.ಮೀ. ರಸ್ತೆ ಬದಿ ನೆಡುತೋಪುಗಳೂ ಸೇರಿವೆ. ಈ ಯೋಜನೆಯಡಿಯಲ್ಲಿ 2023-24ನೇ ಸಾಲಿನಲ್ಲಿ 1,800 ಕೋಟಿ ರೂ. ವೆಚ್ಚದಲ್ಲಿ 88 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ.

ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಮತ್ತು ಜನರಿಗೆ ಗ್ರಾಮ ಪಂಚಾಯಿತಿಗಳ ಮುಖಾಂತರ ಸ್ಥಳೀಯವಾಗಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಅವಕಾಶ ಮಾಡಲಾಗುವುದು. ಪ್ರಸ್ತುತ ಗ್ರಾಮ ಪಂಚಾಯಿತಿಗಳಿಗೆ, ಜನಸಂಖ್ಯೆ ಆಧರಿಸಿ 12 ಲಕ್ಷ ರೂ. ಗಳಿಂದ 35 ಲಕ್ಷ ರೂ. ಗಳವರೆಗೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ. 2023-24ನೇ ಸಾಲಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ 22 ರಿಂದ 60 ಲಕ್ಷ ರೂ. ಗಳಷ್ಟು ಅನುದಾನ ಲಭ್ಯಪಡಿಸಲು 780 ಕೋಟಿ ರೂ. ಗಳ ಒಂದು ಬಾರಿಯ ವಿಶೇಷ ಅನುದಾನ ಒದಗಿಸಲಾಗುವುದು.

ಪಂಚಾಯತ್ ರಾಜ್ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಹಾಗೂ ಜನರ ಅವಶ್ಯಕತೆಗೆ ತಕ್ಕಂತೆ ಯೋಜನೆಗಳನ್ನು ರೂಪಿಸುವ ಉದ್ದೇಶದಿಂದ ಜಿಲ್ಲಾ ಯೋಜನಾ ಸಮಿತಿಗಳನ್ನು ಬಲಪಡಿಸಲಾಗುವುದು. ಪಂಚಾಯತ್ ರಾಜ್ ಸಂಸ್ಥೆಗಳ ವಿವಿಧ ಹಂತದ ಕಾರ್ಯನಿರ್ವಹಣೆ ಕುರಿತಂತೆ ಖesಠಿoಟಿsibiಟiಣಥಿ ಒಚಿಠಿಠಿiಟಿg ಮಾಡಲಾಗುವುದು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ 2021-22ರಲ್ಲಿ 1,500 ಕೋಟಿ ರೂ. ಒದಗಿಸಿದ್ದು, ಹಿಂದಿನ ಆಯವ್ಯಯದಲ್ಲಿ ನಮ್ಮ ಸರ್ಕಾರ 3,000 ಕೋಟಿ ರೂ. ಗಳಿಗೆ ಹೆಚ್ಚಿಸಿದೆ. ಈ ಅನುದಾನದಲ್ಲಿ 3,155 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಪ್ರಾದೇಶಿಕ ಅಸಮತೋಲನೆಯನ್ನು ಸರಿಪಡಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 5,000 ಕೋಟಿ ರೂ. ಮೌಲ್ಯದ ಕಾಮಗಾರಿಗಳನ್ನು ಅನುμÁ್ಠನಗೊಳಿಸಲಾಗುವುದು.

ವಿದ್ಯುತ್ ಕ್ಷೇತ್ರದಲ್ಲಿ ಬೆಳಕು ಯೋಜನೆಯಡಿ 124 ಕೋಟಿ ರೂ. ವೆಚ್ಚದಲ್ಲಿ 2.35 ಲಕ್ಷ ವಿದ್ಯುತ್ ರಹಿತ ಮನೆಗಳಿಗೆ ವಿದ್ಯುತ್ ಸಂಪರ್ಕ, 24 ಗಂಟೆಗಳಲ್ಲಿಯೇ ವಿದ್ಯುತ್ ಪರಿವರ್ತಕ ಬದಲಾಯಿಸುವ ಕಾರ್ಯಕ್ರಮದಡಿ 1.37 ಲಕ್ಷ ವಿಫಲ ಪರಿವರ್ತಕಗಳ ಬದಲಾವಣೆ, 67,713 ಹೊಸ ವಿದ್ಯುತ್ ಪರಿವರ್ತಕಗಳ ಅಳವಡಿಕೆ ಮತ್ತು ಗಂಗಾ ಕಲ್ಯಾಣ ಯೋಜನೆಯಡಿ 4,268 ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕವೂ ಸೇರಿ ಹಲವು ಜನಸ್ನೇಹಿ ಕ್ರಮಗಳನ್ನು ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ 10 ಜಿಡಬ್ಲ್ಯೂ ಸಾಮಥ್ರ್ಯದ ನವೀಕರಿಸಬಹುದಾದ ಇಂಧನ ಉತ್ಪಾದನೆಯ ಗುರಿಯೊಂದಿಗೆ ʻಕರ್ನಾಟಕ ನವೀಕರಿಸಬಹುದಾದ ಇಂಧನ ನೀತಿ 2022-27ʼ ಜಾರಿಗೊಳಿಸಲಾಗಿದೆ. ಕಳೆದ ವರ್ಷ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಗ್ರೀನ್ ಹೈಡ್ರೋಜನ್ ಒಳಗೊಂಡಂತೆ ನವೀಕರಿಸಬಹುದಾದ ಇಂಧನಗಳ ಹೂಡಿಕೆಗೆ ಸುಮಾರು 1.68 ಲಕ್ಷ ಕೋಟಿ ರೂ. ಮೌಲ್ಯದ ಎಂಒಯು ಗಳನ್ನು ಸಹಿ ಮಾಡಲಾಗಿದೆ.

ಹಲವಾರು ವರ್ಷಗಳಿಂದ ಸಂಕಷ್ಟದಲ್ಲಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಕಳೆದೆರಡು ಸಾಲಿನಲ್ಲಿ 31,869 ಕೋಟಿ ರೂ. ಗಳ ಅನುದಾನ ಒದಗಿಸುವ ಮೂಲಕ ನಮ್ಮ ಸರ್ಕಾರವು ಕಾಯಕಲ್ಪ ನೀಡಿದೆ. ಇದರಲ್ಲಿ 25,445 ಕೋಟಿ ರೂ. ಗಳನ್ನು ಉಚಿತ ವಿದ್ಯುತ್ ಯೋಜನೆಗಳಾದ ರೈತರ ಪಂಪ್‍ಸೆಟ್ ಯೋಜನೆ ಹಾಗೂ ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಯೋಜನೆಗಳಿಗೆ ನೀಡಲಾಗಿದೆ. 924 ಕೋಟಿ ರೂ. ಗಳ ಬಂಡವಾಳ ಹೂಡಿಕೆಯನ್ನು ಮಾಡಿದೆ. ಇದರ ಜೊತೆ 5,500 ಕೋಟಿ ರೂ. ಗಳ ವಿಶೇಷ ಆರ್ಥಿಕ ನೆರವು ಹಾಗೂ 2,564 ಕೋಟಿ ರೂ. ಗಳ ಹಿಂದಿನ ಸಾಲವನ್ನು ಹೊಂದಾಣಿಕೆಯ ಮೂಲಕ ಕೈಬಿಡಲಾಗಿದೆ. 2022-23 ಆರ್ಥಿಕ ವರ್ಷದಲ್ಲಿ ವಿದ್ಯುತ್ ಉತ್ಪದನಾ ಕಂಪನಿಗಳ ಹಿಂಬಾಕಿ ಪಾವತಿಗಾಗಿ ರಾಜ್ಯ ಸರ್ಕಾರವು ಸುಮಾರು 13,709 ಕೋಟಿ ರೂ. ಗಳ ಸಾಲಕ್ಕೆ ಖಾತರಿ ಯನ್ನು ನೀಡಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ರಾಜ್ಯದ ಇಂಧನ ಕಂಪನಿಗಳಿಗೆ 13,743 ಕೋಟಿ ರೂ. ಗಳ ಅನುದಾನವನ್ನು ನೀಡಲಾಗುವುದು.

2022-23ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ 4,221 ಕೋಟಿ ರೂ. ವೆಚ್ಚದಲ್ಲಿ 818 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿ ಹಾಗೂ 1,093 ಕಿ.ಮೀ. ಜಿಲ್ಲಾ ಮತ್ತು ಇತರೆ ರಸ್ತೆಗಳ ಅಭಿವೃದ್ಧಿ, 135 ಸೇತುವೆಗಳ ನಿರ್ಮಾಣ ಪೂರ್ಣಗೊಳಿಸಲಾಗಿದೆ. ಜೀವಿತಾವಧಿ ಪೂರ್ಣಗೊಂಡಿರುವ 1,008 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿಗಳ ನವೀಕರಣವನ್ನು 440 ಕೋಟಿ ರೂ. ಮೊತ್ತದಲ್ಲಿ ಅನುμÁ್ಠನಗೊಳಿಸಲಾಗುತ್ತಿದೆ. ಮಾರ್ಚ್ 2023ರ ಅಂತ್ಯದೊಳಗೆ 3,720 ಕೋಟಿ ರೂ. ಗಳ ವೆಚ್ಚದಲ್ಲಿ 948 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿ ಹಾಗೂ 1,364 ಕಿ.ಮೀ. ಉದ್ದದ ಜಿಲ್ಲಾ ಮತ್ತು ಇತರೆ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುವುದು.

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಮತ್ತು ಸುಗಮ ಸಂಚಾರಕ್ಕೆ ಅನುವಾಗುವಂತೆ, ಯೋಜನೆ ಮತ್ತು ರಸ್ತೆಗಳ ಆಸ್ತಿ ನಿರ್ವಹಣಾ ಕೇಂದ್ರದ ವತಿಯಿಂದ 124 ಕೋಟಿ ರೂ. ವೆಚ್ಚದಲ್ಲಿ 145 ರಸ್ತೆ ಸುರಕ್ಷತಾ ಕಪ್ಪು ಸ್ಥಳ ನಿವಾರಣಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ.

ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳೊಂದಿಗೆ ಸಂಪರ್ಕ ಕಲ್ಪಿಸಲು, ಪ್ರಾದೇಶಿಕ ಅಸಮತೋಲನವನ್ನು ಸರಿದೂಗಿಸಲು ಹಾಗೂ ಲಾಸ್ಟ್ ಮೈಲ್ ಕನೆಕ್ಟಿವಿಟಿ ನೀಡಲು, ಬಾಹ್ಯ ನೆರೆವಿನ ಯೋಜನೆಯಾದ ಕೆಶಿಪ್-4 ರಡಿ 2,943 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿ ರಸ್ತೆಯನ್ನು ನಿರ್ಮಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.  ಈ ಯೋಜನೆಗೆ 5,000 ಕೋಟಿ ರೂ. ವೆಚ್ಚವಾಗಬಹುದೆಂದು ಅಂದಾಜಿಸಲಾಗಿದೆ. ಜಿಲ್ಲಾ ಕೇಂದ್ರಗಳಲ್ಲಿ ಸಂಪರ್ಕ ಜಾಲವನ್ನು ವಿಸ್ತರಿಸಲು ಹಾಗೂ ಗ್ರಾಮೀಣ ರಸ್ತೆಗಳಿಗೆ ಸಂಪರ್ಕ ಕಲ್ಪಿಸಲು ಅನುಮೋದನೆಗೊಂಡಿರುವ 5,000 ಕಿ.ಮೀ. ಉದ್ದದ  ಜಿಲ್ಲಾ ಪ್ರಮುಖ  ರಸ್ತೆಗಳ ಕಾಮಗಾರಿಗಳಿಗೆ 1,500 ಕೋಟಿ ರೂ. ಗಳ ಅನುದಾನವನ್ನು ಆಯವ್ಯಯದಲ್ಲಿ ಒದಗಿಸಲಾಗುವುದು.

ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ, ಹೊಸ ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಗೊಳಿಸಿ ಸ್ಪರ್ಧಾತ್ಮಕ ಬಿಡ್ ಪ್ರಕ್ರಿಯೆ ಮೂಲಕ ಪಿಪಿಪಿ ಮಾದರಿಯಲ್ಲಿ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು. ಮೈಸೂರು ವಿಮಾನ ನಿಲ್ದಾಣವನ್ನು ಉನ್ನತೀಕರಿಸಲು ಭೂ ಸ್ವಾಧೀನಕ್ಕಾಗಿ ಕ್ರಮ ವಹಿಸಲಾಗಿದ್ದು, ಇದಕ್ಕಾಗಿ 320 ಕೋಟಿ ರೂ. ಗಳಷ್ಟು ಹಂಚಿಕೆ ಮಾಡಲಾಗಿದೆ. ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಈಗಾಗಲೇ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗಿದ್ದು, ಪ್ರಸ್ತುತ ಸಾಲಿನಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು.

ರಾಜ್ಯದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ಹಾಗೂ ವಿವಿಧ ವಲಯಗಳಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ʻಕರ್ನಾಟಕ ಉದ್ಯೋಗ ನೀತಿ 2022-25ʼ, ʻಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ʼ ಹಾಗೂ ʻವಿಶೇಷ ಹೂಡಿಕೆ ಪ್ರದೇಶ ಕಾಯಿದೆ, 2022ʼ ಅನ್ನು ಜಾರಿಗೊಳಿಸಲಾಗಿದೆ. 2023-24ನೇ ಸಾಲಿನಲ್ಲಿ ನಾಲ್ಕು ಹೂಡಿಕೆ ಪ್ರದೇಶಗಳು ಮತ್ತು ಕೈಗಾರಿಕಾ ಪ್ರದೇಶಗಳನ್ನು ವಿಶೇಷ ಹೂಡಿಕೆ ಪ್ರದೇಶಗಳೆಂದು ʻಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮ, 2022ʼ ರಡಿ ಅಧಿಸೂಚಿಸಲಾಗುವುದು. ಇದಕ್ಕೆ ಅಗತ್ಯವಿರುವ ಅನುದಾನವನ್ನು ಒದಗಿಸಲಾಗುವುದು.

ದೇವನಹಳ್ಳಿಯಲ್ಲಿ ಸ್ಥಾಪಿಸಲಾಗಿರುವ ಡಾ|| ಬಿ.ಆರ್. ಅಂಬೇಡ್ಕರ್ ಕೌಶಲ್ಯ ಅಭಿವೃದ್ಧಿ ಕೇಂದ್ರದ ವಿಸ್ತರಣೆಗೆ 2 ಕೋಟಿ ರೂ. ಅನುದಾನವನ್ನು ನೀಡಲಾಗುವುದು. ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ ಸೇವಾ ವಲಯದಲ್ಲಿನ ಮಹಿಳಾ ಉದ್ದಿಮೆದಾರರಿಗೆ 2 ಕೋಟಿ ರೂ. ವರೆಗೆ ಶೇ.4ರ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ನೀಡುತ್ತಿದ್ದು, ಇದನ್ನು 5 ಕೋಟಿ ರೂ. ವರೆಗೆ ಹೆಚ್ಚಿಸಲಾಗುವುದು. ರಾಜ್ಯ ಸರ್ಕಾರವು ಖನಿಜಾನ್ವೇಷಣೆ, ಗಣಿ ಹರಾಜು ಮತ್ತು ಪ್ರಾರಂಭಿಸುವಿಕೆಯಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಕೇಂದ್ರ ಗಣಿ ಮಂತ್ರಾಲಯ ʻರಾಷ್ಟ್ರೀಯ ಖನಿಜ ವಿಕಾಸ ಪುರಸ್ಕಾರʼ ಪ್ರಶಸ್ತಿ ನೀಡಿರುತ್ತದೆ.

ನಮ್ಮ ರಾಜ್ಯದ ನೇಕಾರರ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಗೆ ವಿಶೇಷ ನೆರವು ನೀಡಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ನೇಕಾರ ಸಮ್ಮಾನ್ ಯೋಜನೆಯಡಿ ನೀಡಲಾಗುತ್ತಿದ್ದ ಸಹಾಯಧನ 3,000 ರೂ. ಗಳಿಂದ 5,000 ರೂ. ಗಳಿಗೆ ಹೆಚ್ಚಿಸಲಾಗಿದೆ. ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ವಿದ್ಯುತ್ ಮಗ್ಗ ನೇಕಾರರು ಮತ್ತು ಮಗ್ಗ ಪೂರ್ವ ಕಾರ್ಮಿಕರಿಗೂ ಸಹ ನೇಕಾರ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ.

ನೇಕಾರ್ ಸಮ್ಮಾನ್ ಯೋಜನೆಯಿಂದ ಸುಮಾರು 1.5 ಲಕ್ಷ ನೇಕಾರರಿಗೆ ಅನುಕೂಲವಾಗಲಿದ್ದು 75 ಕೋಟಿ ರೂ. ಗಳನ್ನು ನೇರ ನಗದು ವರ್ಗಾವಣೆ ಮೂಲಕ ನೇಕಾರರ ಖಾತೆಗೆ ಜಮೆ ಮಾಡಲಾಗಿದೆ. ಐದು ಹೆಚ್‍ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ಉಚಿತ ವಿದ್ಯುತ್ ಒದಗಿಸಲಾಗುವುದು ಮತ್ತು ಈixeಜ ಅhಚಿಡಿges ನಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗುವುದು.

ನೇಕಾರರ ಪ್ಯಾಕೇಜ್ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಾಮಾನ್ಯ ವರ್ಗದ ಫಲಾನುಭವಿಗಳಿಂದ ಸ್ಥಾಪಿಸಲಾಗುವ ಅತಿ ಸಣ್ಣ ಘಟಕಗಳಿಗೆ ಒಂದು ಕೋಟಿ ರೂ. ವರೆಗಿನ ಜವಳಿ ಮತ್ತು ಸಿದ್ಧ ಉಡುಪು ಘಟಕಗಳಿಗೆ ಶೇ.50 ರಷ್ಟು ಅಥವಾ ಗರಿಷ್ಠ 50 ಲಕ್ಷ ರೂ. ಗಳ ಬಂಡವಾಳ ಸಹಾಯಧನ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ನೂತನ ಜವಳಿ ಹಾಗೂ ಸಿದ್ಧ ಉಡುಪು ನೀತಿ 2019-24 ಅನ್ನು ಪರಿಷ್ಕರಿಸಲಾಗಿದ್ದು, ಅದರ ಪರಿಣಾಮವಾಗಿ ರಾಜ್ಯದಲ್ಲಿ 4,292 ಕೋಟಿ ರೂ. ಗಳ ಬಂಡವಾಳ ಹೂಡಿಕೆ ಮಾಡಲು ಉದ್ಯಮಿಗಳು ಮುಂದೆ ಬಂದಿದ್ದು, ಇದರಿಂದಾಗಿ ಸುಮಾರು 44,257 ಜನರಿಗೆ ಉದ್ಯೋಗ ಸೃಜನೆಯಾಗಲಿದೆ.

ಬೆಂಗಳೂರು ಸಮಗ್ರ ಅಭಿವೃದ್ಧಿ :

ವಿಶ್ವದಲ್ಲಿಯೇ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿರುವ ನಗರ ಬೆಂಗಳೂರು. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿಯ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ರೂಪಿಸುವುದರೊಂದಿಗೆ ಜನರ ಬದುಕಿನ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳಿಗೂ ನಮ್ಮ ಸರ್ಕಾರ ಆದ್ಯತೆ ನೀಡಿದೆ.

ದೇಶದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಾರಿಗೆ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಹಲವಾರು ಸಂಸ್ಥೆಗಳ ಕಾರ್ಯಾಚರಣೆಯನ್ನು ಸಮನ್ವಯಿಸಲು ಉನ್ನತಾಧಿಕಾರದ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರವನ್ನು ರಚಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ಯೋಜನೆಯ ಎರಡನೇ ಹಂತವನ್ನು ಅನುμÁ್ಠನಗೊಳಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ರಾಜ್ಯ ಸರ್ಕಾರದ ವತಿಯಿಂದ 200 ಕೋಟಿ ರೂ. ಆರ್ಥಿಕ ನೆರವು ನೀಡಲಾಗುವುದು.

ಬೆಂಗಳೂರು ನಗರದಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಒಂದೇ ವಾಹನದಲ್ಲಿ ಹಸಿ ಕಸ ಹಾಗೂ ಒಣ ಕಸ ಸಂಗ್ರಹಿಸುವ ವಿನ್ಯಾಸದ ಆಟೋ ಟಿಪ್ಪರುಗಳು ಹಾಗೂ ಕಾಂಪಾಕ್ಟರುಗಳು ಕಾರ್ಯಾಚರಣೆ ಮಾಡಲಿವೆ. ಆಯಾ ವಾರ್ಡ್‍ಗಳಲ್ಲಿಯೇ ತ್ಯಾಜ್ಯ ಸಂಸ್ಕರಣೆ ಮಾಡಲು ಪ್ರತಿ ವಾರ್ಡ್‍ಗೆ ಒಂದರಂತೆ ಆಧುನಿಕ ತಂತ್ರಜ್ಞಾನ ಆಧಾರಿತ ವಾಸನೆರಹಿತ ತ್ಯಾಜ್ಯ ಸಂಸ್ಕರಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಬೆಂಗಳೂರು ಪಬ್ಲಿಕ್ ಶಾಲೆಗಳನ್ನು ಕಾರ್ಯಗತಗೊಳಿಸಲಾಗಿದೆ.  ಮುಂದುವರೆದು, ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ಬಿಬಿಎಂಪಿ ಶಾಲೆಗಳ ಅಭಿವೃದ್ಧಿಗಾಗಿ 180 ಕೋಟಿ ರೂ. ಗಳ ವೆಚ್ಚದಲ್ಲಿ ಯೋಜನೆಗಳನ್ನು ತಯಾರಿಸಿದ್ದು, ಸದರಿ ಕಾಮಗಾರಿಗಳನ್ನು 2023-24 ನೇ ಸಾಲಿನಲ್ಲಿ ಪೂರ್ಣ ಗೊಳಿಸಲಾಗುವುದು.

ಸಂಸ್ಕೃತಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ :

ಕರ್ನಾಟಕ ರಾಜ್ಯವು ಸಾಂಸ್ಕೃತಿಕವಾಗಿ, ನೈಸರ್ಗಿಕವಾಗಿ ಅತ್ಯಂತ ಶ್ರೀಮಂತವಾಗಿದ್ದು, ಈ ಸಂಪನ್ಮೂಲಗಳನ್ನು ಅತ್ಯಂತ ಸಮರ್ಥವಾಗಿ, ಸುಸ್ಥಿರವಾಗಿ ಬಳಸಲು ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ. ನಮ್ಮ ನಾಡು, ನುಡಿ, ಸಂಸ್ಕೃತಿ ಬಿಂಬಿಸಲು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಕರ್ನಾಟಕದ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಬಂಜಾರ ಸಂಸ್ಕೃತಿ ಮತ್ತು ಭಾμÁ ಅಕಾಡೆಮಿಯನ್ನು ಹಾಗೂ ಉಡುಪಿ ಜಿಲ್ಲೆಯಲ್ಲಿ ಯಕ್ಷರಂಗಾಯಣವನ್ನು ಸ್ಥಾಪಿಸಲಾಗಿದೆ. ಕರ್ನಾಟಕ ರಾಜ್ಯದ ಕನ್ನಡ ಮಾತೆಯಾದ ʻಶ್ರೀ ಭುವನೇಶ್ವರಿʼ ತಾಯಿಯ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಅನ್ನು ಬೆಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗುವುದು. ʻನಮ್ಮ ಜಿಲ್ಲೆ ನಮ್ಮ ಸಂಸ್ಕೃತಿʼ ಎಂಬ ಕಾರ್ಯಕ್ರಮದಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಎಲ್ಲಾ ವರ್ಗದ ಸ್ಥಳೀಯ ಕಲಾವಿದರನ್ನು ಒಳಗೊಂಡಂತೆ ಜಾನಪದ ಹಬ್ಬವನ್ನು ಆಯೋಜನೆ ಮಾಡಲಾಗುವುದು.

ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು :

ನಮ್ಮ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಹಲವು ಸಕಾರಾತ್ಮಕ ಬೆಳವಣಿಗೆಗಳನ್ನು ನಾವು ಕಂಡಿದ್ದೇವೆ. ರಾಜ್ಯದ ತಲಾ ಆದಾಯ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2.04 ಲಕ್ಷ ರೂ. ಗಳಿಂದ 3.32 ಲಕ್ಷ ರೂ. ಗಳಿಗೆ ಹೆಚ್ಚಿದೆ. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ದೇಶದ ಸರಾಸರಿಗಿಂತ ಕಡಿಮೆಯಾಗಿದ್ದು, ಅಭಿವೃದ್ಧಿಯ ಬೆಳವಣಿಗೆ ದರ ಹೆಚ್ಚಾಗಿದೆ. ಶಿಶು ಮರಣ ದರ ಹಾಗೂ ತಾಯಿ ಮರಣ ದರ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ.

ಇದಲ್ಲದೆ ರಾಜ್ಯದಲ್ಲಿ ಪ್ರವಾಹ, ಬೆಳೆನಷ್ಟ, ಮಾನವ-ವನ್ಯಪ್ರಾಣಿ ಸಂಘರ್ಷ, ಜಾನುವಾರುಗಳಿಗೆ ಸಾಂಕ್ರಾಮಿಕದಂತಹ ಸಂಕಷ್ಟಗಳು ತಲೆದೋರಿದಾಗಲೆಲ್ಲ ನಮ್ಮ ಸರ್ಕಾರ ಜನರ ನೆರವಿಗೆ ಧಾವಿಸಿದೆ. ಸಕಾಲದಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ. ಡಯಾಲಿಸಿಸ್ ಸೈಕಲ್ ಹೆಚ್ಚಳ, ಕಾಕ್ಲಿಯರ್ ಇಂಪ್ಲಾಂಟ್, ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ನೆರವಿನಂತಹ ಸೂಕ್ಷ್ಮ ಕ್ರಮಗಳನ್ನು ಕೈಗೊಂಡಿದ್ದೇವೆ. ಆ ಮೂಲಕ ಸ್ಪಂದನಾಶೀಲ ಹಾಗೂ ಸಂವೇದನಾಶೀಲ ಸರ್ಕಾರವಾಗಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ. ತಂತ್ರಜ್ಞಾನದ ಸದ್ಬಳಕೆಯೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಈಸ್ ಆಫ್ ಲಿವಿಂಗ್ ಆಶಯವನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಒತ್ತು ನೀಡುತ್ತಿದೆ.

ರಾಜ್ಯದ ಆಡಳಿತ ವ್ಯವಸ್ಥೆಯನ್ನು ಬಲಪಡಿಸಿ, ನಾಗರಿಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸಲು ಹಾಗೂ ಯುವ ಜನತೆಗೆ ಹೆಚ್ಚಿನ ಉದ್ಯೋಗವಕಾಶವನ್ನು ಒದಗಿಸಲು ನಮ್ಮ ಸರ್ಕಾರವು ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆ.  ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನಮ್ಮ ಸರ್ಕಾರವು ನಿರ್ಧರಿಸಿದೆ. ಈ ಎಲ್ಲಾ ಹುದ್ದೆಗಳ ಆಯ್ಕೆ ಪ್ರಕ್ರಿಯೆಯನ್ನು 2023-24ನೇ ಸಾಲಿನಲ್ಲಿಯೇ ಪೂರ್ಣಗೊಳಿಸಿ ನೇಮಕಾತಿ ಆದೇಶವನ್ನು ನೀಡಲಾಗುವುದು ಎಂದು ತಿಳಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago