ಬಿಸಿ ಬಿಸಿ ಸುದ್ದಿ

ಶಿವರಾತ್ರಿ; ದೀಪೋತ್ಸವ, ಸಂಗೀತೋತ್ಸವ

ಕಲಬುರಗಿ: ನಗರದ ಬರುವ ಬಸವೇಶ್ವರ ಆಸ್ಪತ್ರೆ ಎದುರುಗಡೆ ಬರುವ ವಿದ್ಯಾನಗರ ಕಾಲೋನಿಯ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಫೆಬ್ರವರಿ 18, ಶನಿವಾರ ಶಿವರಾತ್ರಿ ನಿಮಿತ್ಯ ಸಾಯಂಕಾಲ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದೀಪೋತ್ಸವ ಹಾಗು ಸಂಗೀತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯಾನಗರ ವೆಲ್‍ಫೇರ್ ಸೊಸೈಟಿಯ ಕಾರ್ಯದರ್ಶಿ ಶಿವರಾಜ ಅಂಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ಸಾಯಂಕಾಲ 6:45ಕ್ಕೆ ದೀಪೋತ್ಸವ ಕಾರ್ಯಕ್ರಮವನ್ನು ಕಲಬುರಗಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಅವಿನಾಶ ಕುಲಕರ್ಣಿಯವರು ಉದ್ಘಾಟಿಸಲಿದ್ದಾರೆ. (ವಿಶ್ವನಾಥ ರಟಕಲ್ ಅವರ ಪ್ರಾಯೋಜಕತ್ವದಲ್ಲಿ) ಹಿರಿಯ ಸಂಗೀತ, ಆಕಾಶವಾಣಿ ಮತ್ತು ದೂರದರ್ಶನ ಕಲಾವಿದರಾದ ಅಮರಪ್ರಿಯ ಹಿರೇಮಠ ಸಂಗೀತೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. (ಉಮೇಶ ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ)

ಕಾರ್ಯಕ್ರಮಕ್ಕೆ ಎಂ.ಬಿ. ನಗರ ಪೊಲೀಸ್ ಇನ್ಸಪೆಕ್ಟರ್ ಚಂದ್ರಶೇಖರ ತಿಗಡಿ, ಮಹಾನಗರಪಾಲಿಕೆ ವಾರ್ಡ ನಂ. 45ರ ಸದಸ್ಯರಾದ ಯಂಕಮ್ಮ ಜಿ. ಗುತ್ತೇದಾರ ಅತಿಥಿಗಳಾಗಿ ಆಗಮಿಸಲಿದ್ದಾರೆ. ವಿದ್ಯಾನಗರ ವೆಲ್‍ಫೇರ್ ಸೊಸೈಟಿಯ ಅಧ್ಯಕ್ಷರಾದ ಮಲ್ಲಿನಾಥ ದೇಶಮುಖರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಯಂಕಾಲ 6:30ರಿಂದ 10:30ರ ವರೆಗೆ ವೀರಭದ್ರೇಶ್ವರ ಸಂಗೀತ ಕಲಾ ಬಳಗದ ಸಂಗಮೇಶ ಶಾಸ್ತ್ರಿ ಮಾಶಾಳ, ಸೂರ್ಯಕಾಂತ ದಂಡೋತಿ, ವಿನೋದ ದಸ್ತಾಪುರ, ಸಿದ್ದಣ್ಣ ದೇಸಾಯಿ ಕಲ್ಲೂರ ಹಾಗು ಮನೋಹರ ಟೆಂಗಳಿ ಅವರಿಂದ ಸಂಗೀತ ಕಾರ್ಯಕ್ರಮ ಜರುಗುವುದು ನಂತರ ವಿದ್ಯಾನಗರ ಅಕ್ಕಮಹಾದೇವಿ ಮಹಿಳಾ ಟಸ್ಟ ಇವರಿಂದ ವಿಶೇಷ ಭಜನಾ ಕಾರ್ಯಕ್ರಮ ಜರುಗುವುದು.

ಸದರಿ ಕಾರ್ಯಕ್ರಮದಲ್ಲಿ ವಿದ್ಯಾನಗರ ವೆಲ್‍ಫೇರ ಸೊಸೈಟಿಯ ಅಕ್ಕಮಹಾದೇವಿ ಮಹಿಳಾ ಟಸ್ಟ ಹಾಗೂ ಮಲ್ಲಿಕಾರ್ಜುನ ತರುಣಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು ವಿದ್ಯಾನಗರ ಹಾಗೂ ಸುತ್ತಮುತ್ತಲಿನ ಬಡಾವಣೆಯ ಸಾರ್ವಜನಿಕರು ಸದರಿ ಕಾಂiÀರ್iಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಶಿವರಾಜ ಅಂಡಗಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

3 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

13 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago