ವಾಡಿ: ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕುವ ಕೇಂದ್ರ ಸರ್ಕಾರದ ಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ತಾಪುರ ತಾಲೂಕು ಅಧ್ಯಕ್ಷ ಸಿದ್ದರಾಜ ಮಲಕಂಡಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಸ್ವಾತಂತ್ರ್ಯದ ಮೇಲೆ ಸರ್ಕಾರವೇ ಕಡಿವಾಣ ಹಾಕಿರೋದು ಒಳ್ಳೆಯ ಬೆಳವಣಿಗೆಯಲ್ಲ. ೨೦೦೨ರಲ್ಲಿ ಗುಜರಾತ್ ರಾಜ್ಯದಲ್ಲಿ ಭುಗಿಲೆದ್ದ ಕೋಮು ದಳ್ಳುರಿಯಲ್ಲಿ ಸಾವಿರಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಲಾಯಿತು.
ಈ ಘಟನೆಯ ಕುರಿತು ಬಿತ್ತರಿಸಲಾದ ಬಿಬಿಸಿಯ ಸಾಕ್ಷಚಿತ್ರಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಮೋದಿ ಸರ್ಕಾರವನ್ನು ಟೀಕೆ ಮಾಡಿದ ಮಾಧ್ಯಮ ಸಂಸ್ಥೆಗಳನ್ನು ಮನಸೋಯಿಚ್ಚೆ ಗುರಿಪಡಿಸಿದ್ದು ಮಾಧ್ಯಮ ಸ್ವಾತಂತ್ರ್ಯದ ಮೇಲೆ ನಡೆಸಿದ ಪ್ರಹಾರವಾಗಿದೆ ದೂರಿದ್ದಾರೆ. ಕೋವಿಡ್ ವೇಳೆ ದೈನಿಕ್ ಭಾಸ್ಕರ್ ಪತ್ರಿಕೆಯ ಮೇಲೂ ದಾಳಿ ನಡೆದಿತ್ತು. ಜಾರಿ ನಿರ್ದೇಶನಾಲಯ (ಇಡಿ), ಸರ್ಕಾರವು ತನಗೆ ಲಭ್ಯವಿರುವ ಎಲ್ಲಾ ಧಮನಕಾರಿ ಅಸ್ತ್ರಗಳನ್ನು ರಾಜಕೀಯ ಪ್ರೇರಿತ ಕಾರ್ಯಾಚರಣೆಗೆ ಬಳಸುತ್ತಿದೆ.
ರಾಜಕೀಯ ವ್ಯವಸ್ಥೆಯನ್ನು ಮತ್ತು ಸರ್ಕಾರದ ಆಡಳಿತ ವೈಖರಿಯನ್ನು ಪ್ರಶ್ನಿಸುವುದು ಮಾಧ್ಯಮಗಳ ಪರಮ ಸ್ವಾತಂತ್ರ್ಯ. ಇದನ್ನು ಕಟ್ಟಿಹಾಕುವ ಅಪ್ರಜಾತಾಂತ್ರಿಕ ದೋರಣೆಯನ್ನು ಕೇಂದ್ರ ಸರ್ಕಾರ ಹೊಂದಿರುವುದು ನಿಜಕ್ಕೂ ಬೇಸರ ತರಿಸಿದೆ. ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ಪ್ರಜೆಗಳ ದನಿಯಾಗುವ ಮತ್ತು ಸರ್ಕಾರದ ಜನವಿರೋಧಿ ಕ್ರಮಗಳನ್ನು ಪ್ರಶ್ನಿಸುವ ಮಾಧ್ಯಮ