ಬಿಸಿಯೂಟ ನೌಕರರ ಬೇಡಿಕೆಗಳಿಗಾಗಿ ಪ್ರತಿಭಟನೆ

0
11

ಸುರಪುರ: ರಾಜ್ಯದಲ್ಲಿನ ಅಕ್ಷರ ದಾಸೋಹ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ತಹಸೀಲ್ದಾರ್ ಕಚೇರಿ ಮುಂದೆ ಬಿಸಿಯೂಟ ನೌಕರರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಖಾ ಕುಲಕರ್ಣಿ ಮಾತನಾಡಿ,ರಾಜ್ಯದಲ್ಲಿನ ಅಕ್ಷರ ದಾಸೋಹ ನೌಕರರ ಬೇಡಿಕೆಗಳಿಗಾಗಿ ಅನೇಕ ವರ್ಷಗಳಿಂದ ಪ್ರತಿಭಟನೆ ನಡೆಸಿದರು ಸರಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.ಅಲ್ಲದೆ 60 ವರ್ಷ ವಯಸ್ಸಾಗಿದೆ ಎಂದು 6500 ಜನ ನೌಕರರನ್ನು ಯಾವುದೇ ಸೌಲಭ್ಯ ನೀಡದೆ ಕೆಲಸದಿಂದ ತೆಗೆಯುತ್ತಿರುವುದು ಸರಿಯಲ್ಲ ಅವರಿಗೆ ಎಲ್ಲಾ ಸೌಲಭ್ಯ ನೀಡಬೇಕು.ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ತೆಗೆದು ಹಾಕಲಾಗುತ್ತಿದ್ದು ಅವರೆಲ್ಲರಿಗೂ ನಿವೃತ್ತಿ ಸೌಲಭ್ಯ ನೀಡಬೇಕು.

Contact Your\'s Advertisement; 9902492681

ಬಿಸಿಯೂಟ ನೌಕರರನ್ನು ಖಾಯಂ ಮಾಡಬೇಕು,ಬಿಸಿಯೂಟದ ಜವಬ್ದಾರಿ ಯಾವುದೇ ಖಾಸಗಿ ಸಂಸ್ಥೆಗಳಿಗೆ ಕೊಡದೇ ಸರಕಾರವೇ ನೋಡಿಕೊಳ್ಳಬೇಕು,ಶಿಕ್ಷಣ ಇಲಾಖೆಯ ಶಿಫಾರಸ್ಸಿನಂತೆ 6 ಸಾವಿರ ಮತ್ತು 5 ಸಾವಿರ ಹೆಚ್ಚಳ ಮಾಡಬೇಕು,ಬೇಸಿಗೆ ಮತ್ತು ದಸರಾ ರಜೆಗಳಲ್ಲಿಯೂ ವೇತನ ನೀಡಬೇಕು,ಶಾಲಾ ಅವಧಿಯ ನಂತರ ನರೇಗಾ ಯೋಜನೆಯಡಿ ಶಾಲಾ ಕೈತೋಟದ ಕೆಲಸ ನೀಡಿ ವೇತನ ನೀಡಬೇಕು,ಎಲ್ಲಾ ಬಿಸಿಯೂಟದ ನೌಕರರಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ವೇತನ ನೀಡಬೇಕು,ಪ್ರತಿ ಶಾಲೆಯಲ್ಲಿ ಇಬ್ಬರು ಅಡುಗೆ ನೌಕರರನ್ನು ನೇಮಕ ಮಾಡಿಕೊಳ್ಳಬೇಕು ಎನ್ನುವುದು ಸೇರಿದಂತೆ ಅನೇಕ ಬೇಡಿಕೆಗಳಿಗಾಗಿ ಒತ್ತಾಯಿಸಿದರು.

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಉಪ ತಹಸೀಲ್ದಾರ್ ಮೂಲಕ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಮುಖಂಡರಾದ ಅಧ್ಯಕ್ಷೆ ಶಹಜಾದಿ ಬೇಗಂ,ಗೌರವಾಧ್ಯಕ್ಷ ಸುವರ್ಣ,ಖಜಾಂಚಿ ಸೌಭಾಗ್ಯ ಮಾಲಗತ್ತಿ,ಪಾರ್ವತಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here