ಗಾಣಿಗ, ಈಡಿಗ ನಿಗಮ ರಚನೆ ಶಾಸಕ ಸುಭಾಷ್ ಗುತ್ತೇದಾರ ಸಂತಸ

ಕಲಬುರಗಿ: ಬಿಲ್ಲವ/ಈಡಿಗ ಮತ್ತು ಗಾಣಿಗ ಸಮುದಾಯಗಳ ನಿಗಮ ಮಂಡಳಿ ರಚಿಸಿ ರಾಜ್ಯ ಸರ್ಕಾರದಿಂದ ಆದೇಶವನ್ನು ಹೊರಡಿಸಿರುವುದಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿಎಂ ಬಸವರಾಜ ಬೊಮ್ಮಾಯಿಯವರು ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಿದ್ದಾರೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ ಅಂತ ಹೇಳಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.

ಈಡಿಗ ಅಭಿವೃದ್ಧಿ ಮಂಡಳಿ ಸ್ಥಾಪಿಸುವ ಜತೆಗೆ 500 ಕೋಟಿ ಅನುದಾನ ಮೀಸಲಿಡಬೇಕು. ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಬೇಕು. ಸ್ವಯಂ ಉದ್ಯೋಗ, ತರಬೇತಿ ನೀಡಿ ಸಾಲ ಸೌಲಭ್ಯ ನೀಡಬೇಕು ಎಂದು ಸಮುದಾಯದವರು ಹೇಳಿದ್ದರು.

ಇದಲ್ಲದೇ ಗಾಣಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮವನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಅದಲ್ಲದೆ ಈಡಿಗ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರದಿಂದ ಆದೇಶ ಹೊರಡಿಸಿರುವುದನ್ನು ಸ್ವಾಗತಿಸಲಾಗುವುದು ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಬೇಡಿಕೆ ಇರುವ ವಿವಿಧ ಸಮುದಾಯಗಳ ನಿಗಮ ಮಂಡಳಿಗಳನ್ನು ಸ್ಥಾಪಿಸಲು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420