ಸುರಪುರ: ವಿದ್ಯಾರ್ಥಿಗಳು ಸತತ ಅಧ್ಯಾಯನ ನಿರಂತರ ಪರಿಶ್ರಮದಿಂದ ಮಾತ್ರ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಕೆ.ವೈ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಡಾ. ಸುರೇಶ ಸಜ್ಜನ್ ಹೆಳಿದರು.
ರಂಗಂಪೇಟೆಯ ಬಸವೇಶ್ವರ ಮಹಾವಿದ್ಯಾಲಯದಲ್ಲಿ ಇಂದು ನಡೆದ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೆಳನ ಹಾಗೂ ಪಿ.ಯು.ಸಿ ದ್ವಿತಿಯ ವರ್ಷದ ಮತ್ತು ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಹಾಗೂ ಉತ್ತಮ ಗುರಿ ಉದ್ದೆಶ ಹೊಂದಿರುವುದರ ಜೊತೆಗೆ ಅತ್ಯಂತ ಪರಿಶ್ರಮದ ಅಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.
ಮುಖ್ಯ ಅತಿಥಿಗಳಾಗಿ ಯಾದಗಿರಿ ಜಿಲ್ಲಾ ಕ.ಸಾ.ಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ ವಿಶ್ವನಾಥರೆಡ್ಡಿ ದರ್ಶನಾಪೂರ ಹಾಗೂ ನಮ್ಮ ಕರ್ನಾಟಕ ಸೇನೆಯ ರಾಜ್ಯಧ್ಯಕ್ಷ ಬಸವರಾಜ ಪಡಕೋಟೆ, ಸುರಪುರ ನಗರ ಯೋಜನೆಯ ಪ್ರಾಧಿಕಾರ ಅಧ್ಯಕ್ಷ ಪ್ರಕಾಶ ಸಜ್ಜನ್, ಸಹಕಾರಿ ಯುನಿಯನ್ ಉಪಾಧ್ಯಕ್ಷ ಕೆ. ನಾರಾಯಣ, ನಿರ್ದೇಶಕ ಶಾಂತರೆಡ್ಡಿ ಚೌದ್ರಿ ಮುದ್ನುರು, ರಾಯಚೂರು ವಿ.ವಿ ಅಕಾಡೆಮಿಕ್ ಕೌನ್ಸಿಲ್ ಸದಸ್ಯ ಡಾ. ಮಲ್ಲಿಕಾರ್ಜುನ ಕುಲಕರ್ಣಿ, ಕಾಲೇಜಿನ ಪ್ರಾಚಾರ್ಯ ವಿರೇಶ ಹಳಿಮನಿ ವೇದಿಕೆಮೇಲಿದ್ದರು. ಬಸವಪ್ರಭು ವಿದ್ಯಾವರ್ಧಕ ಸಂಸ್ಥೆಯ ಕಾರ್ಯದರ್ಶಿ ಪ್ರಕಾಶ ಅಂಗಡಿ ಕನ್ನೆಳ್ಳಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದಲ್ಲಿ ಅಭ್ಯಾಸಮಾಡಿ ಸರಕಾರಿ ಮತ್ತು ಅರೆಸರಕಾರಿ ವೃತ್ತಿಗೆ ಆಯ್ಕೆಯಾದ ವಿರೇಶ ಬಿರಾದರ, ರಾಮನಗೌಡ ತಾಳಿಕೋಟಿ, ಮಹೇಶ ಶಾಮರಾವ, ಕಲ್ಯಾಣ ಕುಮಾರ ಹುಣಸಗಿ, ಪವನಕುಮಾರ ವಿಭೂತೆ ಹಾಗೂ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಮಹೇಶ ಗೊಡ್ರಿಹಾಳ ಅವರನ್ನು ಸನ್ಮಾನಿಸಿ ಅಭಿನಂಧಿಸಲಾಯಿತು. ಇದೆ ಸಂದರ್ಭದಲ್ಲಿ ಸರ್ವಜ್ಞ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಕೂಡ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಚಟುವಟಿಕೆ, ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ ಸಮಾರಂಭ ಜರಗಿದವು. ಕಾರ್ಯಕ್ರಮದಲ್ಲಿ ಚನ್ನಪ್ಪ ಠಾಣಾಗುಂದಿ, ನುರಂದಪ್ಪ ಲೆವಡಿ, ಶಿವಶರಣಪ ಹೆಡಿಗಿನಾಳ, ಸಿದ್ದಣಗೌಡ ಹೆಬ್ಬಾಳ, ಮಲ್ಲು ಬಾದ್ಯಾಪುರ, ಬಲಭೀಮ ಪಾಟೀಲ್, ರುದ್ರಪ್ಪ ಕೆಂಭಾವಿ, ಮೌನೇಶ ರುಕ್ಮಾಪುರ, ವೆಂಕಟೇಶ ರತ್ತಾಳ ಸೇರಿದಂತೆ ಅನೇಕರು ಪಾಲ್ಕೊಂಡಿದ್ದರು, ಮೌನೇಶ ರಾಯನಪಾಳ್ಯಾ ಪ್ರಾರ್ಥಿಸಿದರು, ಹಣಮಂತ್ರಾಯ ದೇವತ್ಕಲ್ ನಿರೂಪಿಸಿದರು, ಪ್ರವೀಣ ಜಕಾತಿ ಸ್ವಾಗತಿಸಿದರು, ಸಿದ್ದಪ್ರಸಾದ ಪಾಟೀಲ್ ವಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…