ಕಲಬುರಗಿ:ಶಹಬಾದ ನಗರದ ಸುರಕ್ಷಾ ಸೌಹಾರ್ದ ಪತ್ತಿನ ಸಹಕಾರಿ ಸಂಘದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಹಾಬಾದ ನಗರದ ಸುರಕ್ಷಾ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಡಾ.ಅಹ್ಮದ್ ಪಟೇಲ್ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ,ಶೌರ್ಯ ಮತ್ತು ಸಾಹಸ ಇಂದಿನ ಯುವಕರಿಗೆ ಸ್ಪೂರ್ತಿ. ಜೀಜಾಬಾಯಿ ಅವರು ಶಿವಾಜಿ ಮಹಾರಾಜರಿಗೆ ಚಿಕ್ಕಂದಿನಲ್ಲೆರಾಮಾಯಣ, ಮಹಾಭಾರತದ ಕಥೆಗಳು, ದೇಶಕಟ್ಟುವಲ್ಲಿ ಹೋರಾಡಿದ ಮಹಾಪುರುಷರ ಜೀವನ ಸಾಧನೆಗಳನ್ನು ಹೇಳಿ ಅವರಲ್ಲಿ ಆದರ್ಶಗಳನ್ನು ತುಂಬುತ್ತಿದ್ದರು. ಜೀಜಾಬಾಯಿಯವರಂತೆ ನಮ್ಮ ಮಕ್ಕಳಿಗೆ ಉತ್ತಮ ಜೀವನ ಮೌಲ್ಯಗಳನ್ನು ಹೇಳಿಕೊಡಬೇಕು. ಶಿವಾಜಿಯವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಶಹಾಬಾದ ನಗರಸಭೆಯ ನಾಮನಿರ್ದೇಶಿತ ಸದಸ್ಯ ದತ್ತಾ ಫಂಡ್ ಹಾಗೂ ನಿಂಗಣ್ಣ ಸಂಗಾವಿಕರ್ ಮಾತನಾಡಿ, ಶಿವಾಜಿ ಮಹಾರಾಜರು ಹೊಂದಿದ್ದ ಹೋರಾಟ ಮನೋಭಾವ, ತೋರಿದ ಧೈರ್ಯ, ಶೌರ್ಯ ಯುವಕರಿಗೆ ಸ್ಪೂರ್ತಿಯಾಗಿದೆ.ರಾಷ್ಟ್ರವನ್ನು ಪರಕೀಯರ ಆಡಳಿತದಿಂದ ಮುಕ್ತಗೊಳಿಸಿ ರಕ್ಷಿಸುವಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅಪಾರವಾದದಾಗಿದೆ. ಇಂತಹ ಮಹಾನ್ ವ್ಯಕ್ತಿಯು ಯಾವುದೇ ಒಂದು ಜನಾಂಗಕ್ಕೆ ಮಾತ್ರ ಸೀಮಿತಗೊಳ್ಳದೆ ರಾಷ್ಟ್ರನಾಯಕರಾಗಿ ಧರ್ಮ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿ ತ್ಯಾಗ, ಬಲಿದಾನದ ಪರಿಣಾಮವಾಗಿ ಇಂದು ಸಮಾಜದಲ್ಲಿ ಜನರು ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗಿದೆ ಎಂದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಮರಾಠಾ ಸಮಾಜದ ಯುವಕರು ಹಾಜರಿದ್ದರು.