ಬಡಮಕ್ಕಳ ಭವಿಷ್ಯ ರೂಪಿಸಲು ಮುಂದಾಗಿ

0
14

ಕಲಬುರಗಿ: ಗ್ರಾಮೀಣ ಪ್ರದೇಶದ ಅನೇಕ ಕಡುಬಡವರ ಮಕ್ಕಳು ವಸತಿ ಶಾಲೆಗೆ ಬರುತ್ತಿದ್ದು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡುವ ಮೂಲಕ ಅವರ ಭವಿಷ್ಯ ವನ್ನು ಬೆಳಗಲು ಶಿಕ್ಷಕರು ಶ್ರಮಿಸಬೇಕೆಂದು ಹಿರಿಯ ಶ್ರೆಣಿಯ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುಶಾಂತ ಎಮ್ ಚೌಗಲೆ ಕರೆ ನೀಡಿದರು.

ನಗರದ ಮೊರಾರ್ಜಿ ದೇಸಾಯಿ ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಸಾಮಾಜಿಕ ನ್ಯಾಯದಿನದ ಅಂಗವಾಗಿ ವಸತಿ ಶಾಲೆಗಳ ಪ್ರಾಂಶುಪಾಲರು ಮತ್ತು ನಿಲಯಪಾಲಕರಿಗೆ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ,ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಸಿಗಬೇಕೆಂಬುದು ಡಾ.ಬಿ.ಆರ್.ಅಂಬೇಡ್ಕರ್,ಬಸವಣ್ಣ ಸೇರಿದಂತೆ ಅನೇಕ ಮಹಾತ್ಮರ ಆಶಯವಾಗಿದೆ.

Contact Your\'s Advertisement; 9902492681

ಆ ದಿಸೆಯಲ್ಲಿ ಪ್ರಯೊಬ್ಬರು ತಮ್ಮ ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಿದರೆ ಅವರ ಕನಸು ನನಸಾಗಿಸಲು ಸಾಧ್ಯ. ಪೆÇೀಕ್ಸೋ ಕೇಸ್ ಗಳು ಇಂದು ಖಾಯಿಲೆಯಂತೆ ವ್ಯಾಪಕವಾಗಿ ಹರಡುತ್ತಿವೆ. ಇದು ಅತ್ಯಂತ ಆತಂಕಕಾರಿ ಬೆಳವಣಿಗೆ. ಶಿಕ್ಷಕರು, ಪೆÇೀಷಕರು ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕೆಂದು ಕಿವಿಮಾತು ಹೇಳಿದರು.

ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ರಾಜಕುಮಾರ ಕಡಗಂಚಿ,ಬಾಲನ್ಯಾಯ ಮಂಡಳಿ ಸದಸ್ಯೆ ಗೀತಾ ಸಜ್ಜನಶೆಟ್ಟಿ ಮಾತನಾಡಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ ಅಧ್ಯಕ್ಷತೆ ವಹಿಸಿದ್ದರು.ಸಹಾಯಕ ನಿರ್ದಶಕ ವಿಜಯಕುಮಾರ್ ಪುಲಾರಿ,ಕ್ರೈಸ್ ಜಿಲ್ಲಾ ಸಮನ್ವಯಾಧಿಕಾರಿ ಶಿವರಾಮ ಚವ್ಹಾಣ ವೇದಿಕೆ ಮೇಲಿದ್ದರು.

ವಾರ್ಡನ್ ಸಂಘದ ಅಧ್ಯಕ್ಷ ವಿದ್ಯಾಧರ ಕಾಂಬಳೆ ನಿರೂಪಿಸಿದರು. ಪ್ರಾಚಾರ್ಯರಾದ ಡಾ.ಬಿ.ಅರ್.ತಳವಾರ ಸ್ವಾಗತಿಸಿದರು. ಡಾ.ರಾಜಶೇಖರ ಮಾಂಗ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಲೀಲಾ ಮಳ್ಳಿ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here