ಸುರಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುರುಪುರ ಅಜೀಂ ಪ್ರೇಮಜಿ ಪೌಂಡೇಶನ್ ಇವರುಗಳ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಅಲ್ದಾಳ್ ಗ್ರಾಮದಲ್ಲಿ ಅಂಗನವಾಡಿ ಮಕ್ಕಳಿಗೆ ಬಾಲ ಮೇಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಅಂಗನವಾಡಿ ಮೇಲ್ವಿಚಾರಕಿಯಾದ ಸಾವಿತ್ರಿ ಗಾಳಿ ಮಾತನಾಡುತ್ತಾ ಅಂಗನವಾಡಿ ಕೇಂದ್ರಗಳು ಮಕ್ಕಳ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಭದ್ರಬುನಾದಿ ಆಗಬೇಕು. ಮೂರರಿಂದ ಆರು ವರ್ಷದ ಮಕ್ಕಳಲ್ಲಿ ಗ್ರಹಿಸಿಕೊಳ್ಳುವ ಶಕ್ತಿ ಹೆಚ್ಚಾಗಿರುವುದರಿಂದ ಹಂತದಲ್ಲಿ ಮಕ್ಕಳಿಗೆ ಅನೇಕ ಅವಕಾಶಗಳು ಸಿಗುವಂತಾಗಬೇಕೆಂದು ಅಭಿಪ್ರಾಯಪಟ್ಟರು.
ಅಜೀಂ ಪ್ರೇಮ್ ಜಿ ಫೌಂಡೇಶನ್ ಸಂಪನ್ಮೂಲ ವ್ಯಕ್ತಿಯಾದ ಅನ್ವರ್ ಜಮಾದಾರ್ ಮಾತನಾಡುತ್ತಾ ಅಂಗನವಾಡಿ ಕೇಂದ್ರಗಳು ಮಕ್ಕಳಿಗೆ ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರ ಮೂಲಕ ಅವರಲ್ಲಿ ಕಲಿಕೆಯ ಪೂರ್ವಭಾವಿ ಅನೇಕ ಚಟುವಟಿಕೆ ಮಾಡುವುದರೊಂದಿಗೆ ಮಕ್ಕಳು ಮುಂದಿನ ಶಾಲಾ ಶಿಕ್ಷಣಕ್ಕೆ ಪೂರಕ ವಾತಾವರಣವನ್ನು ನಿರ್ಮಿಸುವುದು.
ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕಿಯರಾದ ಹನುಮಂತ ಪ್ರಮೀಳಾ ಹುಸೇನ್ ಬಿ ಹಾಗೂ ಪೇಟ್ ಅಮ್ಮಾಪುರ್ ಬಿ ಸರ್ಕಲ್ ನ ಎಲ್ಲಾ ಅಂಗನವಾಡಿ ಶಿಕ್ಷಕಿಯರು ಸಹಾಯಕರು ಗ್ರಾಮ ಪಂಚಾಯತ್ ಸದಸ್ಯರು ಊರಿನ ಪ್ರಮುಖರು ಮಕ್ಕಳು ಪಾಲಕರು ಹಾಗೂ ಅಜೀಮ್ ಪ್ರೇಮ್ ಜಿ ಫೌಂಡೇಶನ್ ನ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಕ್ಕಳು ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.