ಕಲಬುರಗಿ; ಕಲಬುರಗಿ ವಿಭಾಗದ ಲೋಕೋಪಯೋಗಿ ಇಲಾಖೆಯಿಂದ 2023ನೇ ಸಾಲಿಗೆ ಇದೇ ಫೆಬ್ರವರಿ 22ರ ಬೆಳಗಿನ 6 ಗಂಟೆಯಿಂದ ಫೆಬ್ರವರಿ 24ರ ಬೆಳಗಿನ 6 ಗಂಟೆಯವರೆಗೆ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ರಸ್ತೆ ಸಂಚಾರ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ಕಲಬುರಗಿ ವಿಭಾಗದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಕಲಬುರಗಿ ವಿಭಾಗದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ 74 ರಾಜ್ಯ ಹೆದ್ದಾರಿಗಳ ರಸ್ತೆಗಳ ಮೇಲೆ ಹಾಗೂ 76 ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಸೇರಿದಂತೆ ಒಟ್ಟು 150 ಗಣತಿ ಕೇಂದ್ರಗಳಲ್ಲಿ ರಸ್ತೆ ಸಂಚಾರ ಸಮೀಕ್ಷೆ ಕಾರ್ಯ ನಡೆಸಲು ನಿರ್ಧರಿಸಲಾಗಿದೆ. ಮೇಲ್ಕಂಡ ದಿನದಂದು ನಡೆಯುವ ರಸ್ತೆ ಸಂಚಾರ ಸಮೀಕ್ಷೆ ಕಾರ್ಯದ ಸಂದರ್ಭದಲ್ಲಿ ಎಲ್ಲಾ ವಾಹನ ಚಾಲಕರು ಹಾಗೂ ಸಾರ್ವಜನಿಕರು ತಮ್ಮ ವಾಹನವನ್ನು ನಿಧಾನವಾಗಿ ಚಲಿಸಿ ಮುಂದೆ ಸಾಗಬೇಕು. ಇದಕ್ಕೆ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.
ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳನ್ನು 2023 ನೇ ಸಾಲಿಗೆ ಗಣತಿ ಮಾಡಲು ಇದೇ ಫೆಬ್ರವರಿ 23ರ ಬೆಳಗಿನ 6 ಗಂಟೆಯಿಂದ ಫೆಬ್ರವರಿ 24ರ ಬೆಳಗಿನ 6 ಗಂಟೆಯವರೆಗೆ ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಲೋಕೋಪಯೋಗಿ ಇಲಾಖೆಯ ಸಂಪರ್ಕ ಮತ್ತು ಕಟ್ಟಡಗಳು (ಈಶಾನ್ಯ) ಮುಖ್ಯ ಇಂಜಿನಿಯರರಾದ ಜಗನ್ನಾಥ ಹಲಿಂಗೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ರಸ್ತೆ ಸಂಚಾರ ಗಣತಿಗಾಗಿ ಈಶಾನ್ಯ ವಲಯದ ಕಲಬುರಗಿ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳ 329 ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ 597 ಗಣತಿ ಕೇಂದ್ರಗಳು ಸೇರಿದಂತೆ ಒಟ್ಟು 926 ಗಣತಿ ಕೇಂದ್ರಗಳನ್ನು ಆಯ್ಕೆ ಮಾಡಲಾಗಿದೆ.
ವಾಹನ ಸಂಚಾರ ವಿವರಗಳನ್ನು ಸಂಗ್ರಹಿಸಲು ಈಶಾನ್ಯ ವಲಯದ ವಿಭಾಗಗಳಲ್ಲಿ ಒಟ್ಟು 926 ಗಣತಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಸಹಾಯಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್‍ಗಳನ್ನು ನೇಮೀಸಲಾಗಿದೆ. ಈ ಗಣತಿ ನಡೆಸುವ ಸಂದರ್ಭದಲ್ಲಿ ವಾಹನ ಚಾಲಕರು ಮತ್ತು ಸಾರ್ವಜನಿಕರು ತಮ್ಮ ವಾಹನಗಳನ್ನು ನಿಧಾನವಾಗಿ ಚಲಿಸಿ ಗಣತಿ ಕಾರ್ಯಕ್ಕೆ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…