ಕಲಬುರಗಿ: ಸೌದಿ ಅರೇಬಿಯಾದ ಮಕ್ಕಾ ಮತ್ತು ಮದೀನಾ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಯಚೂರು ಮೂಲದ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಮಂದಿ ಮೃತಪಟ್ಟಿರುವ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಕಲಬುರಗಿ ಮಹೇಬೂಬ್ ನಗರದ ನಿವಾಸಿ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಝೈನುದ್ದೀನ್ ಸಾಹೇಬ್ ಮತ್ತು ರಾಯಚೂರು ಜಿಲ್ಲೆಯ ನೂರ್ ಬಾಗ್ ನಿವಾಸಿ ಶಫೀದ್ ಹುಸೈನ್ ಸುಲ್ಲದ್, ರೆಹನಾ ಬೇಗಮ್, ಬಡೇಜಾನ್ ಸುಲ್ಲದ್, ಸಿರಾಜ್ ಬೇಗಮ್ ಸುಲ್ಲದ್, ಸಮೀರ್ ಸುಲ್ಲದ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮಕ್ಕಾದಲ್ಲಿ ಉಮ್ರಾ ನಿರ್ವಹಿಸಿ ಮದೀನಾಕ್ಕೆ ತೆರಳುತ್ತಿದ್ದವರನ್ನು ಕರೆದೊಯ್ಯುತ್ತಿದ್ದ ಬಸ್ಸಿನ ನಡುವೆ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದು, ಮೃತ ಝೈನುದ್ದೀನ್ ಕುಟುಂಬ ಸದಸ್ಯರು ಮಕ್ಕಾಕ್ಕೆ ತೆರಳಿ ಅಲ್ಲೇ ಅಂತಿಮ ಸಂಸ್ಕಾರ ನಡೆಸಲಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.