“ಗೋಧಿ ಬೆಳೆಯ ಕ್ಷೇತ್ರೋತ್ಸವ”

0
69

ಕಲಬುರಗಿ; ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಜ್ಞಾನ ಕೇಂದ್ರ, ಕೃಷಿ ಇಲಾಖೆ, ಆಳಂದ ಮತ್ತು ನಿಕ್ರಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಆಳಂದ ತಾಲೂಕಿನ ಸುಂಟನೂರ ಗ್ರಾಮದ ವೀರಭದ್ರಪ್ಪಾ ಬಿರಾದಾರ್ ರವರ ಹೊಲದಲ್ಲಿ ಗೋಧಿ ಬೆಳೆಯ ಕ್ಷೇತ್ರೋತ್ಸವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಮಲ್ಲಿಕಾರ್ಜುನ, ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಆಳಂದ ರವರು ಪ್ರಸಕ್ತ ಸನ್ನಿವೇಶದಲ್ಲಿ ಗೋಧಿ ಬೆಳೆಯ ವಿಸ್ತೀರ್ಣ ಕಡಿಮೆಯಾಗುತ್ತಿದ್ದು, ರೈತರು ಒಂದೇ ಬೆಳೆಯನ್ನು ನಿರಂತರವಾಗಿ ಬೆಳೆಯದೇ ಬೆಳೆಯ ಪರಿವರ್ತನೆ ಮಾಡುವ ಮೂಲಕ ಮಣ್ಣಿನ ಫಲವತ್ತತೆಯನ್ನು ಕಾಪಾಡುವುದರ ಜೊತೆಗೆ ಸಾಮಾನ್ಯವಾಗಿ ಪ್ರತಿವರ್ಷ ಕಾಡುವಂತಹ ರೋಗ ಮತ್ತು ಕೀಟಗಳ ಬಾಧೇಯನ್ನು ತಡೆಗಟ್ಟಬಹುದೆಂದರು.

Contact Your\'s Advertisement; 9902492681

ಮುಖ್ಯ ಆತಿಥಿಗಳಾಗಿ ಆಗಮಿಸಿದ ಸುಂಟನೂರ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಸುಜಾತ ಶಿವಾನಂದ ಸಾಗರ್ ರವರು ಮಾತನಾಡಿ ರೈತ ಬಾಂಧವರು ಕೃಷಿ ವಿಜ್ಞಾನಿಗಳ ನಿರಂತರ ಸಂಪರ್ಕದೊಂದಿಗೆ ಲಭ್ಯವಿರುವ ನೂತನ ತಂತ್ರಜ್ಞಾನಗಳನ್ನು ವ್ಯವಸ್ಥಿತವಾಗಿ ಬಳಸಿಕೊಂಡು ಕೃಷಿ ಮಾಡಿದರೆ ತಮ್ಮ ಬದುಕನ್ನು ಹಸನಾಗಿಸಿಕೊಳ್ಳಬಹುದೆಂದರು.

ಆರಂಭದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ರಾಜು ಜಿ. ತೆಗ್ಗಳ್ಳಿರವರು ಗೋಧಿ ಬೆಳೆಯಲ್ಲಿ ತಂತ್ರಜ್ಞಾನ ಅಳವಡಿಕೆಯ ಮಹತ್ವ ಮತ್ತು ಗೋಧಿಯಲ್ಲಿ ಕಂಡು ಬರುವ ಕೀಟಗಳ ನಿರ್ವಹಣಾ ಕ್ರಮಗಳನ್ನು ಅಳವಡಿಸಿಕೊಂಡು ರೈತರು ಆರ್ಥಿಕವಾಗಿ ಸಬಲರಾಗಬೇಕೆಂದು ಕರೆ ನೀಡಿದರು. ನಂತರ ರೈತರು ಕೃಷಿ ವಿಜ್ಞಾನಿಗಳೊಂದಿಗೆ ಸಂವಾದದ ಮೂಲಕ ಅನೇಕ ಸಲಹೆ ಸೂಚನೆಗಳನ್ನು ಪಡೆದರು.

ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ಅಂಬಿಕಾ, ಪಂಚಾಯತ್ ಅಭಿವೃದ್ದಿ ಅಧಿಕಾರಿ,  ಪಾರ್ವತಿ ಪೂಜಾರಿ ಹಾಗೂ ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿಯಲ್ಲಿ ಕೌಶ್ಯಲ್ಯ ಅಭಿವೃದ್ದಿ ನಿರ್ವಹಣೆ ತರಬೇತಿಗೆ ನಿಯೋಜನೆಗೊಂಡ ಮಹಾರಾಷ್ಟ್ರ ರಾಜ್ಯದ ವಿವಿಧ ಕೃಷಿ ವಿಜ್ಞಾನ ಕೇಂದ್ರಗಳ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರುಗಳು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿದ್ದರು. ಸುತ್ತಮುತ್ತಲಿನ ಗ್ರಾಮಗಳ ಅನೇಕ ರೈತರು ಭಾಗವಹಿಸಿ ಸಮಗ್ರವಾದ ಮಾಹಿತಿಯನ್ನು ಪಡೆದುಕೊಂಡರು. ಕಾರ್ಯಕ್ರಮವನ್ನು ಶ್ರೀ ನಿರಂಜನ್ ಧನ್ನಿ ನಿರೂಪಿಸಿದರೇ, ಡಾ. ವಿಜಯಸಿಂಗ ಠಾಕೂರ ರವರು ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here