ಬಿಸಿ ಬಿಸಿ ಸುದ್ದಿ

ಸೊಂತ ಗುಡಿಸಲು ಧ್ವಂಸ: ಕಂದಾಯ ಅಧಿಕಾರಿಗಳಿಂದ ಸರ್ವೆ

ಕಮಲಾಪುರ: ತಾಲ್ಲೂಕಿನ ಸೊಂತ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ನಿರ್ಮಿಸಿಕೊಂಡಿದ್ದ ನಾಲ್ಕು ಕುಟುಂಬಗಳ ಗುಡಿಸಲುಗಳ ದ್ವಂಸ ಸಂಬಂಧ ಗ್ರಾಮದಲ್ಲಿ ಉಂಟಾಗಿದ್ದ ವಿವಾದ ಸಂಬಂಧ ಬುಧವಾರ ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆ ಅಧಿಕಾರಿಗಳು ಜಂಟಿ ಸರ್ವೆ ನಡೆಸಿದರು.

ಪೆÇಲೀಸ್ ಬಿಗಿ ಬಂದೋಬಸ್ತ್‍ನೊಂದಿಗೆ ಸರ್ವೆ ಇಲಾಖೆಯ ಕಾಂತು ರಾಠೋಡ್, ಕಂದಾಯ ನಿರೀಕ್ಷಕರ ನೇತೃತ್ವದಲ್ಲಿ ಸರ್ವೆ ನಡೆಸಲಾಯಿತು.

‘ಗ್ರಾಮದ ಸರ್ವೆ ನಂ.3 ರಲ್ಲಿರುವ ನಿಗದಿಪಡಿಸಲಾಗಿರುವ 1.20 ಸ್ಮಶಾನ ಭೂಮಿಯನ್ನು ಅಳತೆ ಮಾಡಿ ಗುರುತಿನ ಕಲ್ಲು ನೆಡಲಾಯಿತು. ಸರ್ಕಾರಿ ಜಾಗದಲ್ಲಿ ವಾಸವಿದ್ದ ನಾಲ್ಕು ಬೋವಿ ಕುಟುಂಬದ ಗುಡಿಸಲುಗಳು ಸ್ಮಶಾನ ಭೂಮಿಯಿಂದ ಹೊರಗಿವೆ. ಯಾವುದೇ ಒತ್ತುವರಿ ಮಾಡಿಕೊಂಡಿಲ್ಲ’ ಈ ಬಡ ದಲಿತರು ಸರ್ವೆ 323 ರಲ್ಲಿ ವಾಸವಿದ್ದಾರೆ ಎಂದು ಹೇಳಿ ಗುರುತಿನ ಕಲ್ಲು ಬಂದೋಬಸ್ತ ಮಾಡಿದರೂ
ಸಿಪಿಐ ವಿ.ನಾರಾಯಣ್ ನೇತೃತ್ವದಲ್ಲಿ ಪಿಎಸ್‍ಐ ಮುದ್ದಾರೆಡ್ಡಿ ಬಿಗಿ ಪೆÇಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಸರ್ವೆ ಸಮಯದಲ್ಲಿ ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ಬೋವಿ ವಡ್ಡರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕುಸ್ತಿ, ಕಲ್ಯಾಣ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಧಾನ ಕಾರ್ಯದರ್ಶಿ ಜಿ.ಶಿವಶಂಕರ್, ಅನಿಲ ಜಾಧವ, ವಿಠಲ ನೆಲೋಗಿ, ಕೃಷ್ಣ ಕುಶಾಳ್ಕರ್, ಮಲ್ಲಿಕಾರ್ಜುನ ಚೌದ್ರಿ, ಸಕ್ಕೂಬಾಯಿ ಸೇರಿದಂತೆ ಮನೆ ಕಳೆದುಕೊಂಡ ಸಂತ್ರಸ್ತರು ಹಾಜರಿದ್ದರು.

ಸ್ಮಶಾನ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಗ್ರಾಮದ ಪ್ರಮುಖರು ಜೆಸಿಬಿಗಳನ್ನು ಬಳಸಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿದ್ದ ಬೋವಿ ಸಮಾಜದ ಮನೆಗಳನ್ನು ನೆಲಸಮ ಮಾಡಿದ್ದರು. ಈಗ ಸರ್ವೆಯಿಂದ ಸತ್ಯಾಂಶ ಹೊರಬಂದಿದೆ. ಬಡ ದಲಿತ ಕುಟುಂಬಗಳ ಮೇಲೆ ದೌರ್ಜನ್ಯ ಎಸಗಿ ಮನೆಗಳನ್ನು ಧ್ವಂಸ ಮಾಡಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ದಲಿತ ಮುಖಂಡ ಸೂರ್ಯಕಾಂತ ನಿಂಬಾಳ್ಕರ್ ಒತ್ತಾಯಿಸಿದ್ದಾರೆ.

ಕಳೆದ ಆರು ತಿಂಗಳಿಂದ ಈ ಬಡ ಕುಟುಂಬಗಳಿಗೆ ನ್ಯಾಯ ಒದಗಿಸದೆ ಯಾರು ಕಾನೂನು ಕೈಗೆತ್ತಿಕೊಂಡು ಬಡವರ ಮೇಲೆ ದಬ್ಬಾಳಿಕೆ ಮಾಡಿ ರಾಥೋರಾತ್ರಿ ಜೆಸಿಪಿ ತಂದು ಮನೆಗಳನ್ನು ನೆಲೆಸನ್ನು ಮಾಡಿರುವ ಆರೋಪಿಗಳನ್ನು ಬಂಧಿಸದೆ ಮತ್ತು ಅವರ ಮೇಲೆ ಕ್ರಮ ಕೈಗೊಳ್ಳದೆ ಬೇಜವಾಬ್ದಾರಿ ಹಾಗೂ ಅಧಿಕಾರ ದುರುಪಯೋಗ ಮಾಡಿಕೊಂಡು ಬಡವರಿಗೆ ಅನ್ಯಾಯ ಮಾಡಿರುವ ದಲಿತ ವಿರೋಧಿ ತಹಸಿಲ್ದಾರ್ ಇವರನ್ನು ಕೂಡಲೇ ವಜಾ ಗೊಳಿಸಬೇಕು ಮತ್ತು ಮನೆ ಕಳೆದುಕೊಂಡಿರುವ ನಾಲ್ಕು ಕುಟುಂಬಗಳಿಗೆ ಸರ್ಕಾರ ಕೂಡಲೇ ಹಕ್ಕುಪತ್ರ ವಿತರಣೆ ಮಾಡಬೇಕು ಮತ್ತು ಮನೆಗಳನ್ನು ಕಟ್ಟಿ ಕೊಡಬೇಕೆಂದು ರೈತ ಕಾರ್ಮಿಕ ಮುಖಂಡ ಸುನಿಲ್ ಮಾರುತಿ ಮಾನ್ಪಡೇ ಒತ್ತಾಯಿಸಿದ್ದಾರೆ

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

7 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

18 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

18 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

20 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

20 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

20 hours ago