ಕಲಬುರಗಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿನಲ್ಲಿ ಕಡಲೆಕಾಳು ಪ್ರತಿ ಕ್ವಿಂಟಾಲ್‍ಗೆ 5335 ರೂ. ಗಳ ಬೆಂಬಲ ಬೆಲೆಯ ದರದಲ್ಲಿ ಖರೀದಿಸಲು ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 78 ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಕಡಲೆ ಕಾಳು ಬೆಳೆದ ರೈತರು ಹತ್ತಿರದ ಕಡಲೆ ಕಾಳು ಖರೀದಿ ಕೇಂದ್ರಕ್ಕೆ ಅವಶ್ಯಕ ದಾಖಲಾತಿಗಳೊಂದಿಗೆ ತೆರಳಿ ಆನ್‍ಲೈನ್ ಮೂಲಕ ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿಯ ಅಧ್ಯಕ್ಷರಾದ ಯಶವಂತ ವಿ. ಗುರುಕರ್ ಅವರು ತಿಳಿಸಿದ್ದಾರೆ.
ಕಡಲೆ ಕಾಳು ಪ್ರತಿ ಎಕರೆಗೆ 4 ಕ್ವಿಂಟಲ್‍ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ ಪ್ರಮಾಣ 15 ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಕಡಲೆ ಕಾಳನ್ನು ಮಾತ್ರ ಖರೀದಿಸಲಾಗುತ್ತದೆ. ಕಡಲೆ ಕಾಳು ಬೆಳೆದ ರೈತರು ಹತ್ತಿರದÀ ಕಡಲೆ ಕಾಳು ಖರೀದಿ ಕೇಂದ್ರಕ್ಕೆ ತೆರಳಿ ಅವಶ್ಯಕ ದಾಖಲಾತಿಗಳೊಂದಿಗೆ ಆನ್‍ಲೈನ್‍ನಲ್ಲಿ 2023ರ ಮಾರ್ಚ್ 31 ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಕಾರ್ಯದ ಜೊತೆಯಲ್ಲಿ ಖರೀದಿ ಕಾಲಾವಧಿಯನ್ನು 2023ರ ಮೇ 16 ರವರೆಗೆ ನಿಗದಿಪಡಿಸಿದೆ.
ಕಲಬುರಗಿ ತಾಲೂಕಿನಲ್ಲಿ 13, ಸೇಡಂ ತಾಲೂಕಿನಲ್ಲಿ 11, ಅಫಜಲಪುರ ತಾಲೂಕಿನಲ್ಲಿ 8, ಆಳಂದ ತಾಲೂಕಿನಲ್ಲಿ 12, ಚಿಂಚೋಳಿ ತಾಲೂಕಿನಲ್ಲಿ 07, ಚಿತ್ತಾಪುರ ತಾಲೂಕಿನಲ್ಲಿ 20 ಹಾಗೂ ಜೇವರ್ಗಿ ತಾಲೂಕಿನಲ್ಲಿ 06 ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಖರೀದಿ ಕೇಂದ್ರಗಳ ವಿವರ ಹಾಗೂ ಕಡಲೆ ಕಾಳು ಖರೀದಿ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆ ಕಂಡು ಬಂದಲ್ಲಿ ಕಲಬುರಗಿ ಕೃಷಿ ಮಾರುಕಟ್ಟೆ ಇಲಾಖೆಯ ಸಹಾಯಕ ನಿರ್ದೇಶಕ ಅನೀಲಕುಮಾರ ಹಾದಿಮನಿ ಇವರ ಮೊಬೈಲ್ ಸಂಖ್ಯೆ 7899199990, ಕಲಬುರಗಿಯ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳ ನಿಯಮಿತದ ಶಾಖಾ ವ್ಯವಸ್ಥಾಪಕ ಶೃತಿ ಸಜ್ಜನ್ ಇವರ ಮೊಬೈಲ್ ಸಂಖ್ಯೆ 9449864446 ಹಾಗೂ ಕಲಬುರಗಿ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತದ ನಾಗರಾಜ್ ಇವರ ಮೊಬೈಲ್ ಸಂಖ್ಯೆ 9964474444ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…
ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…
ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…
ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…
ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…
ಶಹಾಬಾದ: ಜಾತಿ-ಬೇಧ ಎನ್ನದೇ ಸರ್ವರಿಗೂ ಮೂಲಭೂತ ಹಕ್ಕನ್ನು ಒದಗಿಸಿ, ಬದುಕುವ ವಾತಾವರಣ ಸೃಷ್ಠಿಸಿದ್ದೇ ಡಾ. ಬಿ .ಆರ್. ಅಂಬೇಡ್ಕರ್ ಬರೆದ…